Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 6:3 - ಕನ್ನಡ ಸತ್ಯವೇದವು J.V. (BSI)

3 ಅವರು ನನಗೆ ಕೇಡು ಬಗೆಯುವವರು ಎಂದು ತಿಳಿದು ನಾನು ದೂತರ ಮುಖಾಂತರವಾಗಿ ಅವರಿಗೆ - ನನಗೆ ದೊಡ್ಡ ಜಂಬರವುಂಟು; ಅದನ್ನು ಬಿಟ್ಟು ನಿಮ್ಮ ಬಳಿಗೆ ಬಂದರೆ ಕೆಲಸವು ನಿಂತುಹೋಗುವದು; ನಾನು ಬರಲಾರೆನು ಎಂದು ಹೇಳಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಆಗ ನಾನು ದೂತರ ಮುಖಾಂತರವಾಗಿ ಅವರಿಗೆ, “ನನಗೆ ಒಂದು ದೊಡ್ಡ ಕೆಲಸವುಂಟು; ಅದನ್ನು ಬಿಟ್ಟು ನಿಮ್ಮ ಬಳಿಗೆ ಬಂದರೆ ಆ ಕೆಲಸವು ನಿಂತು ಹೋಗುವುದು; ನಾನು ಬರಲು ಸಾಧ್ಯವಿಲ್ಲ” ಎಂದು ಹೇಳಿ ಕಳುಹಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ನಾನು ದೂತರ ಮುಖಾಂತರ ಅವರಿಗೆ, “ನನಗೆ ಮುಖ್ಯವಾದ ಕಾರ್ಯವಿದೆ; ಅದನ್ನು ಬಿಟ್ಟು ಬಂದರೆ ಕೆಲಸ ನಿಂತುಹೋಗುತ್ತದೆ; ನಾನು ಬರಲಾಗದು,” ಎಂದು ಹೇಳಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ನಾನು ಅವರಿಗೆ ಸೇವಕರ ಮುಖಾಂತರ ಈ ಉತ್ತರವನ್ನು ಕಳುಹಿಸಿದೆನು: “ನಾನು ಬಹಳ ವಿಶೇಷವಾದ ಕೆಲಸ ಮಾಡಿಸುತ್ತಿದ್ದೇನೆ. ಆದ್ದರಿಂದ ನನಗೆ ಬರಲು ಸಾಧ್ಯವಿಲ್ಲ. ನನ್ನ ಬರುವಿಕೆಯಿಂದಾಗಿ ಈ ಕೆಲಸವು ನಿಂತು ಹೋಗಬಾರದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಆದಕಾರಣ ನಾನು ಅವರ ಬಳಿಗೆ ದೂತರನ್ನು ಕಳುಹಿಸಿ, “ನಾನು ದೊಡ್ಡ ಕಾರ್ಯವನ್ನು ಮಾಡುತ್ತಾ ಇದ್ದೇನೆ, ಬರಲಾರೆನು. ನಾನು ಅದನ್ನು ಬಿಟ್ಟು ನಿಮ್ಮ ಬಳಿಗೆ ಬಂದರೆ ಕೆಲಸವು ನಿಂತುಹೋಗುವುದು,” ಎಂದು ಹೇಳಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 6:3
9 ತಿಳಿವುಗಳ ಹೋಲಿಕೆ  

ನನ್ನನ್ನು ಕಳುಹಿಸಿದಾತನ ಕಾರ್ಯಗಳನ್ನು ನಾವು ಹಗಲಿರುವಾಗಲೇ ನಡಿಸಬೇಕು. ರಾತ್ರಿ ಬರುತ್ತದೆ, ಅದು ಬಂದ ಮೇಲೆ ಯಾರೂ ಕೆಲಸ ಮಾಡಲಾರರು.


ನೋಡಿರಿ, ತೋಳಗಳ ನಡುವೆ ಕುರಿಗಳನ್ನು ಹೊಗಿಸಿದಂತೆ ನಾನು ನಿಮ್ಮನ್ನು ಕಳುಹಿಸಿಕೊಡುತ್ತೇನೆ. ಆದದರಿಂದ ಸರ್ಪಗಳಂತೆ ಜಾಣರೂ ಪಾರಿವಾಳಗಳಂತೆ ನಿಷ್ಕಪಟಿಗಳೂ ಆಗಿರ್ರಿ.


ಈ ಮನುಷ್ಯನು ಕಟ್ಟಿಸುವದಕ್ಕಂತೂ ತೊಡಗಿದನು, ಕೆಲಸಪೂರೈಸಲಾರದೆಹೋದನು ಎಂದು ಅವನನ್ನು ಹಾಸ್ಯಮಾಡಾರು.


ಮೂಢನು ಯಾವ ಮಾತನ್ನಾದರೂ ನಂಬುವನು; ಜಾಣನು ತನ್ನ ನಡತೆಯನ್ನು ಚೆನ್ನಾಗಿ ಗಮನಿಸುವನು.


ನಿನ್ನ ಕೈಗೆ ಸಿಕ್ಕಿದ ಕೆಲಸವನ್ನೆಲ್ಲಾ ನಿನ್ನ ಪೂರ್ಣ ಶಕ್ತಿಯಿಂದ ಮಾಡು; ನೀನು ಸೇರಬೇಕಾದ ಪಾತಾಳದಲ್ಲಿ ಯಾವ ಕೆಲಸವೂ ಯುಕ್ತಿಯೂ ತಿಳುವಳಿಕೆಯೂ ಜ್ಞಾನವೂ ಇರುವದಿಲ್ಲ.


ನಮ್ಮ ಬೇರೆ ವಿರೋಧಿಗಳಿಗೂ ಗೊತ್ತಾದಾಗ ಅವರಲ್ಲಿ ಸನ್ಬಲ್ಲಟ್ ಗೆಷೆಮರು ನನಗೆ - ಓನೋ ತಗ್ಗಿನ ಹಕ್ಕೆಫಿರೀವಿುನಲ್ಲಿ ಒಬ್ಬರನ್ನೊಬ್ಬರು ಎದುರುಗೊಳ್ಳೋಣ ಬಾ ಎಂದು ಹೇಳಿಕಳುಹಿಸಿದರು.


ಅವರು ನಾಲ್ಕು ಸಾರಿ ನನಗೆ ಅದೇ ಪ್ರಕಾರ ಹೇಳಿ ಕಳುಹಿಸಿದರೂ ನಾನು ಅದೇ ಉತ್ತರಕೊಟ್ಟೆನು.


ನಾನು ಜನರಿಗೆ - ಕತ್ತಿ ಬಿಲ್ಲು ಬರ್ಜಿಗಳನ್ನು ಹಿಡಿದುಕೊಂಡು ಗೋಡೆಯ ಹಿಂದಣ ತಗ್ಗಾದ ಬೈಲುಗಳಲ್ಲಿ ಗೋತ್ರಗೋತ್ರಗಳಾಗಿ ನಿಲ್ಲಬೇಕೆಂದು ಆಜ್ಞಾಪಿಸಿ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು