ನೆಹೆಮೀಯ 6:7 - ಕನ್ನಡ ಸತ್ಯವೇದವು J.V. (BSI)7 ಇದಲ್ಲದೆ ಯೆಹೂದದಲ್ಲಿ ಒಬ್ಬ ಅರಸನಿರುತ್ತಾನೆಂದು ನಿನ್ನನ್ನು ಕುರಿತು ಯೆರೂಸಲೇವಿುನಲ್ಲಿ ಪ್ರಕಟಿಸುವದಕ್ಕೋಸ್ಕರ ಪ್ರವಾದಿಗಳನ್ನು ನೇವಿುಸಿದ್ದಿ ಎಂಬದಾಗಿ ಹೇಳುತ್ತಾರೆ. ಈ ಸುದ್ದಿ ರಾಜನಿಗೂ ಮುಟ್ಟುವದು; ಆದದರಿಂದ ಕೂಡಿ ಮಾತಾಡೋಣ ಬಾ ಎಂದು ಬರೆದಿತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಇದಲ್ಲದೆ, ‘ಯೆಹೂದದಲ್ಲಿ ಒಬ್ಬ ಅರಸನಿರುತ್ತಾನೆ’ ಎಂದು ನಿನ್ನನ್ನು ಕುರಿತು ಯೆರೂಸಲೇಮಿನಲ್ಲಿ ಪ್ರಕಟಿಸುವುದಕ್ಕೋಸ್ಕರ ಪ್ರವಾದಿಗಳನ್ನು ನೇಮಿಸಿದ್ದಿ ಎಂಬುದಾಗಿಯೂ ಜನರು ಹೇಳುತ್ತಿದ್ದಾರೆ. ಈ ಸುದ್ದಿ ರಾಜನಿಗೂ ತಲುಪಿದೆ; ಆದುದರಿಂದ ನಾವು ಸಭೆ ಸೇರಿ ಆಲೋಚಿಸೋಣ ಬಾ” ಎಂದು ಅದರಲ್ಲಿ ಬರೆದಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಇದಲ್ಲದೆ, ಜುದೇಯದಲ್ಲಿ ಒಬ್ಬ ಅರಸನಿದ್ದಾನೆಂದು ನಿನ್ನನ್ನು ಕುರಿತು ಜೆರುಸಲೇಮಿನಲ್ಲಿ ಪ್ರಕಟಿಸುವುದಕ್ಕಾಗಿ ಪ್ರವಾದಿಗಳನ್ನು ನೇಮಿಸಿರುವೆ ಎಂಬುದಾಗಿ ಹೇಳುತ್ತಾರೆ. ಈ ಸುದ್ದಿ ರಾಜನಿಗೂ ಮುಟ್ಟಲಿದೆ; ಆದುದರಿಂದ ಕೂಡಿ ಮಾತಾಡೋಣ ಬಾ,” ಎಂದು ಬರೆದಿತ್ತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಮಾತ್ರವಲ್ಲದೆ ನಿನ್ನನ್ನು ಯೆಹೂದ ಪ್ರಾಂತ್ಯದ ಅರಸನೆಂದು ಪ್ರಕಟಿಸಲಿಕ್ಕೆ ಪ್ರವಾದಿಗಳನ್ನು ಆರಿಸಿಕೊಂಡಿರುವೆ ಎಂಬ ಸುದ್ದಿಯೂ ಇದೆ. ರಾಜನಾದ ಅರ್ತಷಸ್ತನು ಇದರ ಬಗ್ಗೆ ಕೇಳುವುದಕ್ಕಿಂತ ಮೊದಲೇ ನಾವು ಕುಳಿತುಕೊಂಡು ಮಾತನಾಡೋಣ” ಎಂದು ಬರೆಯಲಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಇದಲ್ಲದೆ, ಯೆಹೂದದಲ್ಲಿ ಅರಸನು ಇದ್ದಾನೆಂದೂ ಯೆರೂಸಲೇಮಿನಲ್ಲಿ ನಿನ್ನನ್ನು ಕುರಿತು ಕೂಗುವುದಕ್ಕೆ ನೀನು ಪ್ರವಾದಿಗಳನ್ನು ನೇಮಿಸಿದ್ದಿ ಎಂಬುದಾಗಿಯೂ ಜನಾಂಗಗಳಲ್ಲಿ ಸುದ್ದಿ ಉಂಟು. ಈಗ ಈ ವರ್ತಮಾನ ಅರಸನಿಗೆ ತಿಳಿಸಲಾಗುವುದು. ಆದಕಾರಣ ನಾವು ಕೂಡಿಕೊಂಡು ಯೋಚನೆ ಮಾಡಿಕೊಳ್ಳೋಣ ಬಾ.” ಅಧ್ಯಾಯವನ್ನು ನೋಡಿ |