Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 6:9 - ಕನ್ನಡ ಸತ್ಯವೇದವು J.V. (BSI)

9 ಹೀಗೆ ಎಲ್ಲರೂ - ಇವರ ಕೈಗಳು ಜೋಲು ಬಿದ್ದು ಕೆಲಸವನ್ನು ತೀರಿಸದೆ ಬಿಡಲಿ ಅಂದುಕೊಂಡು ನಮ್ಮನ್ನು ಹೆದರಿಸುವದಕ್ಕೆ ಪ್ರಯತ್ನಿಸಿದರು. [ನನ್ನ ದೇವರೇ,] ನನ್ನ ಕೈಗಳನ್ನು ಬಲಪಡಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಹೀಗೆ ಎಲ್ಲರೂ, “ಇವರ ಕೈಗಳು ಜೋಲು ಬಿದ್ದು ಕೆಲಸವನ್ನು ಮುಗಿಸದೆ ಇರಲಿ” ಎಂದು ನಮ್ಮನ್ನು ಹೆದರಿಸುವುದಕ್ಕೆ ಪ್ರಯತ್ನಿಸಿದರು. ಆದರೆ ನನ್ನ ದೇವರೇ, ನನ್ನ ಕೈಗಳನ್ನು ಬಲಗೊಳಿಸಿ ನನ್ನನ್ನು ಧೈರ್ಯಪಡಿಸು ಎಂದು ಪ್ರಾರ್ಥಿಸಿದೆನು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಹೀಗೆ ಎಲ್ಲರೂ, ನಮ್ಮ ಕೈಗಳು ಜೋಲುಬಿದ್ದು ಕೆಲಸ ಮುಗಿಯದೆ ನಿಂತುಹೋಗಲಿ ಎಂದುಕೊಂಡು ನಮ್ಮನ್ನು ಹೆದರಿಸುವುದಕ್ಕೆ ಪ್ರಯತ್ನಿಸಿದರು. ನಾನೋ, “ನನ್ನ ದೇವರೇ, ನನ್ನ ಕೈಗಳನ್ನು ಬಲಪಡಿಸಿ,” ಎಂದು ಪ್ರಾರ್ಥಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ನಾವು ಹೆದರಿಹೋಗಬೇಕೆಂದು ನಮ್ಮ ವೈರಿಗಳ ಕುತಂತ್ರವಿದೆ. “ಯೆಹೂದ್ಯರು ಭಯಗೊಂಡು ಬಲಹೀನರಾಗುವುದರಿಂದ ಅವರ ಕೆಲಸವನ್ನು ಮುಂದುವರಿಸಲು ಆಗುವುದಿಲ್ಲ, ಗೋಡೆಯೂ ಪೂರ್ಣಗೊಳ್ಳುವುದಿಲ್ಲ” ಎಂದು ಅವರು ಯೋಚಿಸಿಕೊಂಡಿದ್ದಾರೆ. ಆದರೆ ನಾನು, “ದೇವರೇ, ನನ್ನನ್ನು ಬಲಗೊಳಿಸು” ಎಂದು ಪ್ರಾರ್ಥಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಹೀಗೆ, “ಅವರ ಕೈಗಳು ಬಲಹೀನವಾಗುವುವು. ಕೆಲಸವು ಪೂರ್ತಿಯಾಗುವುದಿಲ್ಲ,” ಎಂದುಕೊಂಡು ಅವರೆಲ್ಲರು ನಮ್ಮನ್ನು ಭಯಪಡಿಸಿದರು. ನಾನಾದರೋ, “ದೇವರೇ, ನನ್ನ ಕೈಗಳನ್ನು ಬಲಪಡಿಸಿರಿ,” ಎಂದು ಪ್ರಾರ್ಥಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 6:9
23 ತಿಳಿವುಗಳ ಹೋಲಿಕೆ  

ನಾನು ಮೊರೆಯಿಟ್ಟಾಗ ಸದುತ್ತರವನ್ನು ದಯಪಾಲಿಸಿದಿ; ನನ್ನ ಆತ್ಮಕ್ಕೆ ಬಲಕೊಟ್ಟು ನನ್ನನ್ನು ಧೈರ್ಯಪಡಿಸಿದ್ದೀ.


ಕ್ರಿಸ್ತನಲ್ಲಿ ನಿಮ್ಮನ್ನು ತನ್ನ ನಿತ್ಯಪ್ರಭಾವಕ್ಕೆ ಕರೆದ ಕೃಪಾಪೂರ್ಣನಾದ ದೇವರು ತಾನೇ ನೀವು ಸ್ವಲ್ಪಕಾಲ ಬಾಧೆಪಟ್ಟ ಮೇಲೆ ನಿಮ್ಮನ್ನು ಯೋಗ್ಯಸ್ಥಿತಿಗೆ ತಂದು ನೆಲೆಗೊಳಿಸಿ ಬಲಪಡಿಸುವನು.


ಆದದರಿಂದ ಜೋಲುಬಿದ್ದ ಕೈಗಳನ್ನೂ ನಡುಗುವ ಮೊಣಕಾಲುಗಳನ್ನೂ ಸುಧಾರಿಸಿಕೊಳ್ಳಿರಿ;


ನನ್ನನ್ನು ಬಲಪಡಿಸುವಾತನಲ್ಲಿದ್ದು ಕೊಂಡು ಎಲ್ಲಕ್ಕೂ ಶಕ್ತನಾಗಿದ್ದೇನೆ.


ನೀವು ದೇವರಾತ್ಮನ ಮೂಲಕ ಆಂತರ್ಯದಲ್ಲಿ ವಿಶೇಷಬಲ ಹೊಂದಿದವರಾಗುವ ಹಾಗೆಯೂ


ಅದಕ್ಕಾತನು - ನನ್ನ ಕೃಪೆಯೇ ನಿನಗೆ ಸಾಕು; ಬಲಹೀನತೆಯಲ್ಲಿಯೇ ಬಲವು ಪೂರ್ಣಸಾಧಕವಾಗುತ್ತದೆ ಎಂದು ನನಗೆ ಹೇಳಿದ್ದಾನೆ. ಹೀಗಿರಲಾಗಿ ಕ್ರಿಸ್ತನ ಬಲವು ನನ್ನಲ್ಲಿ ನೆಲಸಿಕೊಂಡಿರಬೇಕೆಂದು ನನಗುಂಟಾಗುವ ನಿರ್ಬಲಾವಸ್ಥೆಗಳ ವಿಷಯದಲ್ಲಿಯೇ ಬಹುಸಂತೋಷವಾಗಿ ಹೆಚ್ಚಳಪಡುವೆನು.


ನಾನೇ ನಿನ್ನೊಂದಿಗಿದ್ದೇನೆ; ದಿಗ್ಭ್ರಮೆಗೊಳ್ಳದಿರು, ನಾನೇ ನಿನ್ನ ದೇವರು; ನಾನು ನಿನ್ನನ್ನು ಬಲಪಡಿಸುತ್ತೇನೆ; ಹೌದು, ನಿನಗೆ ಸಹಾಯಕೊಡುತ್ತೇನೆ; ನನ್ನ ಧರ್ಮದ ಬಲಗೈಯನ್ನು ನಿನಗೆ ಆಧಾರಮಾಡುತ್ತೇನೆ.


ಇದಲ್ಲದೆ ಜನರು ತಮ್ಮ ಗಂಡುಹೆಣ್ಣು ಮಕ್ಕಳಿಗಾಗಿ ಮನಸ್ಸಿನಲ್ಲಿ ಬಹಳವಾಗಿ ನೊಂದುಕೊಂಡು ದಾವೀದನನ್ನು ಕಲ್ಲೆಸೆದು ಕೊಲ್ಲಬೇಕೆಂದಿದ್ದದರಿಂದ ಅವನು ಬಲು ಇಕ್ಕಟ್ಟಿನಲ್ಲಿ ಬಿದ್ದನು. ಆದರೂ ಅವನು ತನ್ನ ದೇವರಾದ ಯೆಹೋವನಲ್ಲಿ ತನ್ನನ್ನು ಬಲಪಡಿಸಿಕೊಂಡು


ಕಡೇ ಮಾತೇನಂದರೆ, ನೀವು ಕರ್ತನನ್ನೂ ಆತನ ಅತ್ಯಧಿಕವಾದ ಶಕ್ತಿಯನ್ನೂ ಆಶ್ರಯಿಸಿಕೊಂಡವರಾಗಿ ಬಲಗೊಳ್ಳಿರಿ.


ಆಮೇಲೆ ಆ ಪ್ರಧಾನರು ಅರಸನಿಗೆ - ಒಡೆಯಾ, ಇವನಿಗೆ ಮರಣದಂಡನೆಯಾಗಬೇಕು. ಇವನು ಪಟ್ಟಣದಲ್ಲಿ ಉಳಿದಿರುವ ಯೋಧರಿಗೂ ಸಕಲ ಜನರಿಗೂ ಇಂಥಾ ಮಾತುಗಳನ್ನು ನುಡಿಯುತ್ತಾ ಅವರನ್ನು ಜೋಲುಗೈಯವರನ್ನಾಗಿ ಮಾಡುತ್ತಾನೆ; ಈ ಜನರ ಕ್ಷೇಮವನ್ನಲ್ಲ, ಹಾನಿಯನ್ನೇ ಹಾರೈಸುತ್ತಾನೆ ಎಂದು ಹೇಳಿದರು.


ನಿಮ್ಮ ಕೈಗಳು ಜೋಲು ಬೀಳದಿರಲಿ. ನಿಮ್ಮ ಪ್ರಯತ್ನಕ್ಕೆ ಫಲತಪ್ಪದು ಎಂದು ಹೇಳಿದನು.


ಯೆಹೋವನೇ, ನಿನ್ನ ಮರೆ ಹೊಕ್ಕಿದ್ದೇನೆ; ಎಂದಿಗೂ ಆಶಾಭಂಗಪಡಿಸಬೇಡ.


ನನಗೆ ಹೆದರಿಕೆಯುಂಟಾದಾಗ ನಿನ್ನನ್ನೇ ಆಶ್ರಯಿಸಿಕೊಳ್ಳುವೆನು.


ನನ್ನ ದೇವರೇ, ಟೋಬೀಯ ಸನ್ಬಲ್ಲಟರು ಮಾಡಿದ ಈ ದುಷ್ಕೃತ್ಯಗಳು ನಿನ್ನ ನೆನಪಿನಲ್ಲಿರಲಿ; ನನ್ನನ್ನು ಹೆದರಿಸುವದಕ್ಕೆ ಪ್ರಯತ್ನಿಸಿದ ಪ್ರವಾದಿನಿಯಾದ ನೋವದ್ಯ ಮುಂತಾದ ಪ್ರವಾದಿಗಳನ್ನು ಮರೆಯಬೇಡ.


ದೇವರೇ, ಪರಿಶುದ್ಧಾಲಯದಲ್ಲಿರುವ ನೀನು ಮಹಾಭಯಂಕರನು. ಇಸ್ರಾಯೇಲ್ಯರ ದೇವರು ತನ್ನ ಪ್ರಜೆಗೆ ಬಲಪರಾಕ್ರಮಗಳನ್ನು ದಯಪಾಲಿಸುವನು. ದೇವರಿಗೆ ಸ್ತೋತ್ರ.


[ಯೆರೂಸಲೇವಿುಗೆ ಬಂದ ಆ ಅಶ್ಶೂರ್ಯರು] ಗೋಡೆಯ ಮೇಲಿದ್ದ ಜನರನ್ನು ಬೆದರಿಸಿ ಅಂಜಿಸಿ ಪಟ್ಟಣವನ್ನು ಸ್ವಾಧೀನಮಾಡಿಕೊಳ್ಳುವದಕ್ಕಾಗಿ


ಅವರು ಯೆಹೋವನಲ್ಲಿ ಬಲಗೊಳ್ಳುವರು, ಆತನ ಹೆಸರಿನಲ್ಲಿ ನಡೆದುಕೊಳ್ಳುವರು; ಇದು ಯೆಹೋವನ ನುಡಿ.


ಅವರ ನೆರೆಯವರೆಲ್ಲರೂ ಕಾಣಿಕೆಗಳನ್ನು ಕೊಟ್ಟದ್ದಲ್ಲದೆ ಅವರಿಗೆ ಬೆಳ್ಳಿಯ ಸಾಮಾನು, ಬಂಗಾರ, ಸರಕು, ಪಶು, ಶ್ರೇಷ್ಠವಸ್ತು ಇವುಗಳನ್ನೂ ಕೊಟ್ಟು ಸಹಾಯಮಾಡಿದರು.


ನಾನು ಬಾಬೆಲಿನ ಅರಸನ ಕೈಗಳನ್ನು ಬಲಪಡಿಸಿ ನನ್ನ ಖಡ್ಗವನ್ನು ಅವನ ಕೈಗೆ ಕೊಟ್ಟು ಫರೋಹನ ಕೈಗಳನ್ನು ಮುರಿಸಲು ಗಾಯದಿಂದ ಪ್ರಾಣಸಂಕಟಪಡುವವನಂತೆ ಫರೋಹನು ಆ ಅರಸನ ಮುಂದೆ ನರಳಾಡುವನು.


ಸೋತವನಿಗೆ ತ್ರಾಣವನ್ನು ಅನುಗ್ರಹಿಸಿ ನಿರ್ಬಲನಿಗೆ ಬಹು ಬಲವನ್ನು ದಯಪಾಲಿಸುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು