ನೆಹೆಮೀಯ 7:2 - ಕನ್ನಡ ಸತ್ಯವೇದವು J.V. (BSI)2 ಆಮೇಲೆ ನನ್ನ ತಮ್ಮನಾದ ಹನಾನಿಗೂ ಬಲು ನಂಬಿಗಸ್ತನೂ ದೇವರಲ್ಲಿ ವಿಶೇಷ ಭಯಭಕ್ತಿಯುಳ್ಳವನೂ ದುರ್ಗಾಧಿಕಾರಿಯೂ ಆದ ಹನನ್ಯನಿಗೂ ಯೆರೂಸಲೇವಿುನ ಮೇಲ್ವಿಚಾರಣೆಯನ್ನು ಒಪ್ಪಿಸಿ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಆನಂತರ ನನ್ನ ತಮ್ಮನಾದ ಹನಾನಿಗೂ, ಬಹಳ ನಂಬಿಗಸ್ತನೂ ದೇವರಲ್ಲಿ ವಿಶೇಷ ಭಯಭಕ್ತಿಯುಳ್ಳವನೂ, ಕೋಟೆಯ ಅಧಿಕಾರಿಯೂ ಆದ ಹನನ್ಯನಿಗೂ ಯೆರೂಸಲೇಮಿನ ಮೇಲ್ವಿಚಾರಣೆಯನ್ನು ಒಪ್ಪಿಸಿದೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಆಮೇಲೆ ನನ್ನ ತಮ್ಮ ಹನಾನಿಗೆ ಹಾಗು ಬಹಳ ನಂಬಿಗಸ್ತನೂ ದೇವರಲ್ಲಿ ವಿಶೇಷ ಭಯಭಕ್ತಿಯುಳ್ಳವನೂ ದುರ್ಗಾ ಅಧಿಕಾರಿಯೂ ಆಗಿದ್ದ ಹನನ್ಯನಿಗೆ ಜೆರುಸಲೇಮಿನ ಮೇಲ್ವಿಚಾರಣೆಯನ್ನು ಒಪ್ಪಿಸಿದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಇದಾದ ಬಳಿಕ ನನ್ನ ಸಹೋದರ ಹಾನಾನಿಯನನ್ನು ಜೆರುಸಲೇಮಿನ ಆಡಳಿತಗಾರನನ್ನಾಗಿ ನೇಮಿಸಿದೆನು. ಹನನ್ಯನನ್ನು ಜೆರುಸಲೇಮಿನ ಕೋಟೆಗೆ ಅಧಿಪತಿಯನ್ನಾಗಿ ಆರಿಸಿದೆನು. ಹಾನಾನಿಯು ನಂಬಿಗಸ್ತನೂ ದೇವರಿಗೆ ಭಯಪಡುವವನೂ ಆಗಿದ್ದುದರಿಂದ ನಾನು ಅವನನ್ನು ಆರಿಸಿಕೊಂಡೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಆಮೇಲೆ ನಾನು ನನ್ನ ಸಹೋದರನಾದ ಹನಾನೀ ಮತ್ತು ಅರಮನೆಯ ಅಧಿಪತಿಯಾದ ಹನನ್ಯ ಇವರಿಗೆ ಯೆರೂಸಲೇಮಿನ ಜವಾಬ್ದಾರಿಕೆಯನ್ನು ಒಪ್ಪಿಸಿದೆನು. ಏಕೆಂದರೆ ಇವನು ಸತ್ಯವಂತನಾಗಿಯೂ, ಅನೇಕರಿಗಿಂತ ಹೆಚ್ಚಾಗಿ ದೇವರಿಗೆ ಭಯಪಡುವವನಾಗಿಯೂ ಇದ್ದನು. ಅಧ್ಯಾಯವನ್ನು ನೋಡಿ |