Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 7:3 - ಕನ್ನಡ ಸತ್ಯವೇದವು J.V. (BSI)

3 ಅವರಿಗೆ - ಬಿಸಿಲು ಬಲಿಯುವದಕ್ಕಿಂತ ಮೊದಲು ಯೆರೂಸಲೇವಿುನ ಬಾಗಲುಗಳನ್ನು ತೆರೆಯಬಾರದು; ಕಾವಲುಗಾರರು ಇನ್ನೂ ಇರುವಷ್ಟರಲ್ಲೇ ಕದಗಳನ್ನು ಮುಚ್ಚಿ ಭದ್ರಪಡಿಸಬೇಕು. ಇದಲ್ಲದೆ ಯೆರೂಸಲೇವಿುನ ನಿವಾಸಿಗಳೊಳಗೆ ಕಾವಲುಗಾರರನ್ನು ಗೊತ್ತುಮಾಡಿರಿ. ಅವರಲ್ಲಿ ಪ್ರತಿಯೊಬ್ಬನನ್ನು ಅವನವನ ಮನೆಯ ಎದುರಿನಲ್ಲಿ ಕಾವಲಿರುವಂತೆ ನೇವಿುಸಬೇಕು ಎಂದು ಆಜ್ಞಾಪಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ನಾನು ಅವರಿಗೆ, “ಬಿಸಿಲೇರುವುದಕ್ಕಿಂತ ಮೊದಲು ಯೆರೂಸಲೇಮಿನ ಬಾಗಿಲುಗಳನ್ನು ತೆರೆಯಬಾರದು; ಕಾವಲುಗಾರರು ಇನ್ನೂ ಇರುವಾಗಲೇ ಬಾಗಿಲುಗಳನ್ನು ಮುಚ್ಚಿ ಭದ್ರಪಡಿಸಬೇಕು. ಇದಲ್ಲದೆ ಯೆರೂಸಲೇಮಿನ ನಿವಾಸಿಗಳೊಳಗೆ ಕಾವಲುಗಾರರನ್ನು ಗೊತ್ತುಮಾಡಿರಿ, ಅವರಲ್ಲಿ ಕೆಲವರು ತಮ್ಮ ಕಾವಲಿನ ಸ್ಥಳಗಳಲ್ಲಿಯೂ, ಇನ್ನು ಕೆಲವರನ್ನು ಅವರ ಮನೆಯ ಎದುರಿನಲ್ಲಿಯೂ ಕಾವಲಿರುವಂತೆ ನೇಮಿಸಬೇಕು” ಎಂದು ಆಜ್ಞಾಪಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಅವರಿಗೆ, “ಬಿಸಿಲೇರುವುದಕ್ಕಿಂತ ಮೊದಲೇ ಜೆರುಸಲೇಮಿನ ಬಾಗಿಲುಗಳನ್ನು ತೆರೆಯಬಾರದು; ಕಾವಲುಗಾರರು ಇನ್ನೂ ಇರುವಲ್ಲೇ ಕದಗಳನ್ನು ಮುಚ್ಚಿ ಭದ್ರಪಡಿಸಬೇಕು. ಇದಲ್ಲದೆ, ಜೆರುಸಲೇಮಿನ ನಿವಾಸಿಗಳಲ್ಲೇ ಕಾವಲುಗಾರರನ್ನು ಗೊತ್ತುಮಾಡಿರಿ. ಪ್ರತಿಯೊಬ್ಬನನ್ನು ಅವನವನ ಮನೆಯ ಎದುರಿನಲ್ಲೇ ಕಾವಲಿರುವಂತೆ ನೇಮಿಸಿರಿ,” ಎಂದು ಆಜ್ಞಾಪಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಹನಾನಿಗೆ ಮತ್ತು ಹನನ್ಯನಿಗೆ ನಾನು ಆಜ್ಞಾಪಿಸಿದ್ದೇನೆಂದರೆ: “ಸೂರ್ಯೋದಯವಾಗಿ ಕೆಲವು ತಾಸು ಕಳೆದ ಮೇಲೆಯೇ ನೀವು ಜೆರುಸಲೇಮಿನ ಬಾಗಿಲುಗಳನ್ನು ತೆರೆಯಬೇಕು; ಸೂರ್ಯನು ಮುಳುಗುವ ಮೊದಲೇ ನೀವು ಬಾಗಿಲುಗಳನ್ನು ಮುಚ್ಚಿ ಬೀಗ ಹಾಕಬೇಕು. ಜೆರುಸಲೇಮಿನಲ್ಲಿ ವಾಸವಾಗಿರುವವರನ್ನೇ ಕಾವಲುಗಾರರನ್ನಾಗಿ ಆರಿಸಿಕೊಳ್ಳಿರಿ. ವಿಶೇಷವಾದ ಸ್ಥಳಗಳಲ್ಲಿ ಪಟ್ಟಣವನ್ನು ಕಾಯುವುದಕ್ಕಾಗಿ ಅವರಲ್ಲಿ ಕೆಲವರನ್ನು ನೇಮಿಸಿರಿ; ಉಳಿದವರನ್ನು ಅವರವರ ಮನೆಯ ಸಮೀಪದಲ್ಲಿಯೇ ಕಾಯಲು ನೇಮಿಸಿರಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಆಗ ನಾನು ಅವರಿಗೆ, “ಬಿಸಿಲು ಏರುವುದಕ್ಕಿಂತ ಮೊದಲೇ ಯೆರೂಸಲೇಮಿನ ಬಾಗಿಲುಗಳನ್ನು ತೆರೆಯಬಾರದು. ಇದಲ್ಲದೆ ನೀವು ಸಮೀಪದಲ್ಲಿ ನಿಂತಿರುವಾಗ, ಕದಗಳನ್ನು ಮುಚ್ಚಿ ಅಗುಳಿಗಳನ್ನು ಹಾಕಿರಿ. ಯೆರೂಸಲೇಮಿನ ನಿವಾಸಿಗಳಲ್ಲಿ ಪ್ರತಿ ಮನುಷ್ಯನು ತನ್ನ ಮನೆಗೆ ಎದುರಾಗಿ ಕಾವಲಾಗಿರಲು ನೇಮಿಸಿರಿ,” ಎಂದು ಹೇಳಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 7:3
8 ತಿಳಿವುಗಳ ಹೋಲಿಕೆ  

ನೋಡಿರಿ, ತೋಳಗಳ ನಡುವೆ ಕುರಿಗಳನ್ನು ಹೊಗಿಸಿದಂತೆ ನಾನು ನಿಮ್ಮನ್ನು ಕಳುಹಿಸಿಕೊಡುತ್ತೇನೆ. ಆದದರಿಂದ ಸರ್ಪಗಳಂತೆ ಜಾಣರೂ ಪಾರಿವಾಳಗಳಂತೆ ನಿಷ್ಕಪಟಿಗಳೂ ಆಗಿರ್ರಿ.


ಯೆಹೋವನು ಮನೇ ಕಟ್ಟದಿದ್ದರೆ ಅದನ್ನು ಕಟ್ಟುವವರು ಕಷ್ಟಪಡುವದು ವ್ಯರ್ಥ; ಯೆಹೋವನು ಪಟ್ಟಣವನ್ನು ಕಾಯದಿದ್ದರೆ ಕಾವಲುಗಾರರು ಅದನ್ನು ಕಾಯುವದು ವ್ಯರ್ಥ.


ಇದಲ್ಲದೆ ಸಬ್ಬತ್‍ದಿನ ಪ್ರಾರಂಭವಾಗುವದಕ್ಕಿಂತ ಮೊದಲು ಯೆರೂಸಲೇವಿುನ ಬಾಗಲುಗಳಲ್ಲಿ ಕತ್ತಲಾಗಿರುವಾಗಲೇ ಕದಗಳನ್ನು ಮುಚ್ಚಿಸಿ ಸಬ್ಬತ್ ದಿನವು ಗತಿಸುವದಕ್ಕಿಂತ ಮುಂಚೆ ಅವುಗಳನ್ನು ತೆರೆಯಬಾರದೆಂದು ಆಜ್ಞಾಪಿಸಿ ಯಾವ ಹೊರೆಯೂ ಒಳಗೆ ಬಾರದಂತೆ ನನ್ನ ಸೇವಕರಲ್ಲಿ ಕೆಲವರನ್ನು ಬಾಗಲುಗಳ ಬಳಿಯಲ್ಲಿ ಕಾವಲಿರಿಸಿದೆನು.


ಇವರ ಆಚೆ ಬೆನ್ಯಾಮೀನ್ ಹಷ್ಷೂಬರು; ಇವರು ತಮ್ಮ ತಮ್ಮ ಮನೆಗಳಿಗೆ ಎದುರಾಗಿರುವ ಗೋಡೆಯನ್ನು ಜೀರ್ಣೋದ್ಧಾರಮಾಡಿದರು. ಇವರ ಆಚೆ ಅನನ್ಯನ ಮೊಮ್ಮಗನೂ ಮಾಸೇಯನ ಮಗನೂ ಆದ ಅಜರ್ಯ; ಇವನು ತನ್ನ ಮನೆಯ ಹತ್ತಿರದಲ್ಲಿರುವ ಗೋಡೆಯನ್ನು ಜೀರ್ಣೋದ್ಧಾರ ಮಾಡಿದನು.


ಆಮೇಲೆ ನನ್ನ ತಮ್ಮನಾದ ಹನಾನಿಗೂ ಬಲು ನಂಬಿಗಸ್ತನೂ ದೇವರಲ್ಲಿ ವಿಶೇಷ ಭಯಭಕ್ತಿಯುಳ್ಳವನೂ ದುರ್ಗಾಧಿಕಾರಿಯೂ ಆದ ಹನನ್ಯನಿಗೂ ಯೆರೂಸಲೇವಿುನ ಮೇಲ್ವಿಚಾರಣೆಯನ್ನು ಒಪ್ಪಿಸಿ


ಪಟ್ಟಣವು ಎಲ್ಲಾ ಕಡೆಗಳಲ್ಲಿ ವಿಸ್ತಾರವಾಗಿದ್ದರೂ ಅದರೊಳಗೆ ಬಹು ಸ್ವಲ್ಪಜನರಿದ್ದರು. ಮನೆಗಳನ್ನು ಇನ್ನೂ ಕಟ್ಟಿರಲಿಲ್ಲ.


ಆತನು ನಿನ್ನ ಹೆಬ್ಬಾಗಲುಗಳ ಅಗುಳಿಗಳನ್ನು ಬಲಪಡಿಸಿದ್ದಾನೆ; ನಿನ್ನ ಮಕ್ಕಳನ್ನು ಆಶೀರ್ವದಿಸಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು