Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 7:65 - ಕನ್ನಡ ಸತ್ಯವೇದವು J.V. (BSI)

65 ಊರೀಮ್ ತುಮ್ಮೀಮುಗಳ ಮೂಲಕ ದೈವನಿರ್ಣಯವನ್ನು ತಿಳಿಸಬಲ್ಲವನಾದ ಯಾಜಕನು ಬರುವ ತನಕ ಇವರು ಮಹಾಪರಿಶುದ್ಧ ಪದಾರ್ಥಗಳಲ್ಲಿ ಭೋಜನಮಾಡಬಾರದೆಂಬದಾಗಿ ದೇಶಾಧಿಪತಿಯು ತೀರ್ಪು ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

65 ಊರೀಮ್ ಮತ್ತು ತುಮ್ಮೀಮುಗಳ ಮೂಲಕ ದೈವನಿರ್ಣಯವನ್ನು ತಿಳಿಸಬಲ್ಲವನಾದ ಯಾಜಕನು ಬರುವ ತನಕ ಇವರು ಮಹಾಪರಿಶುದ್ಧ ಪದಾರ್ಥಗಳನ್ನು ಭೋಜನ ಮಾಡಬಾರದೆಂಬುದಾಗಿ ದೇಶಾಧಿಪತಿಯು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

65 ಊರಿಮ್‍ತುಮ್ಮೀಮುಗಳ ಮೂಲಕ ದೈವನಿರ್ಣಯವನ್ನು ತಿಳಿಸಬಲ್ಲವನಾದ ಯಾಜಕನು ಬರುವ ತನಕ ಇವರು ಮಹಾಪರಿಶುದ್ಧ ಪದಾರ್ಥಗಳನ್ನು ಭೋಜನ ಮಾಡಬಾರದೆಂಬುದಾಗಿ ರಾಜ್ಯಪಾಲ ತೀರ್ಪುಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

65 ಒಬ್ಬ ಪ್ರಧಾನ ಯಾಜಕನು ಊರೀಮ್ ತುಮ್ಮೀಮ್ ಧರಿಸಿ ದೇವರಿಂದ ಉತ್ತರವನ್ನು ಹೊಂದುವ ತನಕ ಅವರಲ್ಲಿ ಯಾರೂ ಪವಿತ್ರ ಆಹಾರದಲ್ಲಿ ಯಾವುದನ್ನೂ ತಿನ್ನಬಾರದೆಂದು ರಾಜ್ಯಪಾಲನು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

65 ಆದ್ದರಿಂದ ಊರೀಮ್, ತುಮ್ಮೀಮ್ ಮುಖಾಂತರ ದೈವನಿರ್ಣಯವನ್ನು ತಿಳಿಸಬಲ್ಲ ಯಾಜಕನು ದೊರೆಯುವ ತನಕ, ಇವರು ಮಹಾಪರಿಶುದ್ಧವಾದ ಪದಾರ್ಥಗಳನ್ನು ತಿನ್ನಬಾರದೆಂದು ರಾಜ್ಯಪಾಲನು ಆದೇಶಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 7:65
16 ತಿಳಿವುಗಳ ಹೋಲಿಕೆ  

ಜನರೆಲ್ಲರೂ ಧರ್ಮೋಪದೇಶವಾಕ್ಯಗಳನ್ನು ಕೇಳುತ್ತಾ ಅಳುತ್ತಿದ್ದದರಿಂದ ದೇಶಾಧಿಪತಿಯಾದ ನೆಹೆಮೀಯನೂ ಧರ್ಮೋಪದೇಶಮಾಡುವ ಯಾಜಕನಾದ ಎಜ್ರನೂ ಜನರನ್ನು ಬೋಧಿಸುತ್ತಿದ್ದ ಲೇವಿಯರೂ ಅವರಿಗೆ - ಈ ದಿನವು ನಿಮ್ಮ ದೇವರಾದ ಯೆಹೋವನಿಗೆ ಪರಿಶುದ್ಧದಿನವಾಗಿರುವದರಿಂದ ನೀವು ದುಃಖಿಸುತ್ತಾ ಅಳುತ್ತಾ ಇರಬೇಡಿರಿ ಎಂದು ಹೇಳಿದರು.


ದೈವನಿರ್ಣಯವನ್ನು ತಿಳಿಸುವ ಊರೀಮ್ ತುಮ್ಮೀಮ್ ಎಂಬ ವಸ್ತುಗಳನ್ನು ಆ ಚೀಲದ ಪದಕದಲ್ಲಿ ಇಡಬೇಕು. ಆರೋನನು ಯೆಹೋವನ ಸನ್ನಿಧಿಗೆ ಹೋಗುವಾಗ ಅವು ಅವನ ಎದೆಯ ಮೇಲೆ ಇರುವವು. ಇಸ್ರಾಯೇಲ್ಯರು ಕೈಕೊಳ್ಳಬೇಕಾದ ದೈವನಿರ್ಣಯವನ್ನು ಆರೋನನು ಹೀಗೆ ತನ್ನ ಹೃದಯದ ಮೇಲೆ ಯೆಹೋವನ ಸನ್ನಿಧಿಯಲ್ಲಿ ಯಾವಾಗಲೂ ಧರಿಸಿಕೊಂಡಿರುವನು.


ಸಹಿಮಾಡಿದವರು - ಹಕಲ್ಯನ ಮಗನಾದ ನೆಹೆಮೀಯನೆಂಬ ದೇಶಾಧಿಪತಿಯೂ


ಅಶುದ್ಧರೆಂದು ಯಾಜಕೋದ್ಯೋಗದಿಂದ ತಳ್ಳಲ್ಪಟ್ಟರು. ಊರೀಮ್ ತುಮ್ಮೀಮುಗಳ ಮೂಲಕ ದೈವನಿರ್ಣಯವನ್ನು ತಿಳಿಸಬಲ್ಲವನಾದ ಯಾಜಕನು ಬರುವ ತನಕ ಇವರು ಮಹಾಪರಿಶುದ್ಧ ಪದಾರ್ಥಗಳಲ್ಲಿ ಭೋಜನ ಮಾಡಬಾರದೆಂಬದಾಗಿ ದೇಶಾಧಿಪತಿಯು ತೀರ್ಪುಮಾಡಿದನು.


ಲೇವಿಕುಲದ ವಿಷಯದಲ್ಲಿ ಹೀಗಂದನು - [ಯೆಹೋವನೇ,] ನಿನ್ನ ನಿರ್ಣಯವನ್ನು ತಿಳಿಸುವ ಊರೀಮ್ ತುಮ್ಮೀಮ್ ಎಂಬ ವಸ್ತುಗಳು ನಿನ್ನ ಭಕ್ತರಾದ ಇವರ ವಶದಲ್ಲಿ ಉಂಟಷ್ಟೆ. ನೀನು ಮಸ್ಸದಲ್ಲಿ ಅವರನ್ನು ಪರೀಕ್ಷಿಸಿದಿಯಲ್ಲಾ; ಮೆರೀಬದಲ್ಲಿ ನೀರು ಹೊರಟ ಸ್ಥಳದ ಹತ್ತಿರ ಅವರೊಡನೆ ವಿವಾದ ಮಾಡಿದಿ.


[ಯೆಹೋವನ ಚಿತ್ತವನ್ನು ತಿಳುಕೊಳ್ಳುವದಕ್ಕೆ] ಅವನು ಮಹಾಯಾಜಕನಾದ ಎಲ್ಲಾಜಾರನ ಹತ್ತಿರ ಬರಬೇಕು. ಎಲ್ಲಾಜಾರನು ಯೆಹೋವನ ಸನ್ನಿಧಿಯಲ್ಲಿ ಊರೀಮ್ ಎಂಬ ವಸ್ತುವಿನ ಮೂಲಕ ಅವನಿಗೋಸ್ಕರ ವಿಚಾರಣೆಮಾಡುವನು. ಯೆಹೋಶುವನೂ ಇಸ್ರಾಯೇಲ್ಯರ ಸರ್ವಸಮೂಹದವರೂ ಅವನ ಮಾತಿನಂತೆ ಹೊರಡಲೂಬೇಕು ಬರಲೂಬೇಕು ಎಂದು ಆಜ್ಞಾಪಿಸಿದನು.


ಅದಕ್ಕೆ ಹುಳಿಕಲಸಿ ಸುಡಕೂಡದು. ನನಗೆ ಹೋಮರೂಪವಾಗಿ ಸಮರ್ಪಿಸಿದ ದ್ರವ್ಯಗಳಲ್ಲಿ ಅದನ್ನು ಅವರ ಪಾಲಿಗೆ ಬಿಟ್ಟಿದ್ದೇನೆ. ದೋಷಪರಿಹಾರಕ ಯಜ್ಞದ್ರವ್ಯದಂತೆಯೂ ಪ್ರಾಯಶ್ಚಿತ್ತ ಯಜ್ಞದ್ರವ್ಯದಂತೆಯೂ ಅದು ಮಹಾಪರಿಶುದ್ಧವಾದದ್ದು.


ನೈವೇದ್ಯದಲ್ಲಿ ವಿುಕ್ಕದ್ದು ಆರೋನನಿಗೂ ಅವನ ವಂಶದವರಿಗೂ ಆಗಬೇಕು; ಅದು ಯೆಹೋವನಿಗೆ ಅರ್ಪಿತವಾದ ಹೋಮಶೇಷವಾದದರಿಂದ ಮಹಾಪರಿಶುದ್ಧವಾಗಿದೆ.


ಆ ನೈವೇದ್ಯದಲ್ಲಿ ವಿುಕ್ಕದ್ದು ಆರೋನನಿಗೂ ಅವನ ವಂಶದವರಿಗೂ ಆಗಬೇಕು; ಅದು ಯೆಹೋವನಿಗೆ ಅರ್ಪಿತವಾದ ಹೋಮಶೇಷವಾದದರಿಂದ ಮಹಾಪರಿಶುದ್ಧವಾಗಿದೆ.


ಚೀಲದ ಪದಕವನ್ನು ಅವನಿಗೆ ಬಿಗಿಸಿ ಅದರೊಳಗೆ ಊರೀಮ್ ತುಮ್ಮೀಮ್ ಎಂಬ ವಸ್ತುಗಳನ್ನು ಹಾಕಿ


ಇವರು ತಮ್ಮ ವಂಶಾವಳಿ ಪತ್ರಗಳನ್ನು ಹುಡುಕಿದರೂ ಅವು ಸಿಕ್ಕದ ಕಾರಣ ಅಶುದ್ಧರೆಂದು ಯಾಜಕೋದ್ಯೋಗದಿಂದ ತಳ್ಳಲ್ಪಟ್ಟರು.


ಸರ್ವಸಮೂಹದವರ ಒಟ್ಟು ಸಂಖ್ಯೆಯು ನಾಲ್ವತ್ತೆರಡು ಸಾವಿರದ ಮುನ್ನೂರರುವತ್ತು.


ಗೋತ್ರಪ್ರಧಾನರಲ್ಲಿ ಕೆಲವರು ಕೆಲಸಕ್ಕೋಸ್ಕರ ದ್ರವ್ಯಸಹಾಯಮಾಡಿದರು. ತಿರ್ಷಾತಾ ಅನ್ನಿಸಿಕೊಳ್ಳುವ ದೇಶಾಧಿಪತಿಯು ಭಂಡಾರಕ್ಕೆ ಕೊಟ್ಟದ್ದು - ಸಾವಿರ ಬಂಗಾರದ ಪವನುಗಳು, ಐವತ್ತು ಬೋಗುಣಿಗಳು, ಐನೂರಮೂವತ್ತು ಯಾಜಕವಸ್ತ್ರಗಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು