ನೆಹೆಮೀಯ 7:70 - ಕನ್ನಡ ಸತ್ಯವೇದವು J.V. (BSI)70 ಗೋತ್ರಪ್ರಧಾನರಲ್ಲಿ ಕೆಲವರು ಕೆಲಸಕ್ಕೋಸ್ಕರ ದ್ರವ್ಯಸಹಾಯಮಾಡಿದರು. ತಿರ್ಷಾತಾ ಅನ್ನಿಸಿಕೊಳ್ಳುವ ದೇಶಾಧಿಪತಿಯು ಭಂಡಾರಕ್ಕೆ ಕೊಟ್ಟದ್ದು - ಸಾವಿರ ಬಂಗಾರದ ಪವನುಗಳು, ಐವತ್ತು ಬೋಗುಣಿಗಳು, ಐನೂರಮೂವತ್ತು ಯಾಜಕವಸ್ತ್ರಗಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201970 ಗೋತ್ರಪ್ರಧಾನರಲ್ಲಿ ಕೆಲವರು ಕೆಲಸಕಾರ್ಯಗಳಿಗಾಗಿ ಧನ ಸಹಾಯ ಮಾಡಿದರು. ತಿರ್ಷಾತಾ ಅನ್ನಿಸಿಕೊಳ್ಳುವ ದೇಶಾಧಿಪತಿಯು ಭಂಡಾರಕ್ಕೆ ಕೊಟ್ಟದ್ದು ಸಾವಿರ ಬಂಗಾರದ ನಾಣ್ಯಗಳು, ಐವತ್ತು ಬೋಗುಣಿಗಳು, ಐನೂರಮೂವತ್ತು ಯಾಜಕವಸ್ತ್ರಗಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)70 ಗೋತ್ರಪ್ರಧಾನರಲ್ಲಿ ಕೆಲವರು ಕೆಲಸಕ್ಕೆಬೇಕಾದ ದ್ರವ್ಯಸಹಾಯ ನೀಡಿದರು. ತಿರ್ಷಾತಾ ಎನಿಸಿಕೊಳ್ಳುವ ರಾಜ್ಯಪಾಲ ಭಂಡಾರಕ್ಕೆ ಕೊಟ್ಟದ್ದು - ಎಂಟು ಕಿಲೋಗ್ರಾಂ ಬಂಗಾರ. ಐವತ್ತು ಬೋಗುಣಿಗಳು, ಐನೂರಮೂವತ್ತು ಯಾಜಕವಸ್ತ್ರಗಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್70 ಇವರ ಗೋತ್ರಪ್ರಧಾನರಲ್ಲಿ ಕೆಲವರು ಕೆಲಸಕ್ಕಾಗಿ ಹಣವನ್ನು ದಾನವಾಗಿ ಕೊಟ್ಟರು. ರಾಜ್ಯಪಾಲನು ಹತ್ತೊಂಭತ್ತು ಪೌಂಡು ಬಂಗಾರವನ್ನು. ಐವತ್ತು ಬೋಗುಣಿಗಳನ್ನು ಮತ್ತು ಐನೂರ ಮೂವತ್ತು ಯಾಜಕರ ವಸ್ತ್ರಗಳನ್ನು ಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ70 ಕುಟುಂಬಗಳ ಕೆಲವು ಮುಖ್ಯಸ್ಥರು ಕೆಲಸಕ್ಕೆ ಕಾಣಿಕೆಗಳನ್ನು ಕೊಟ್ಟರು. ರಾಜ್ಯಪಾಲನು ಬೊಕ್ಕಸಕ್ಕೆ 8.4 ಕಿಲೋಗ್ರಾಂ ಬಂಗಾರದ ನಾಣ್ಯಗಳನ್ನೂ, 50 ಪಾತ್ರೆಗಳನ್ನೂ, 530 ಯಾಜಕರ ಅಂಗಿಗಳನ್ನೂ ಕೊಟ್ಟನು. ಅಧ್ಯಾಯವನ್ನು ನೋಡಿ |