ನೆಹೆಮೀಯ 8:15 - ಕನ್ನಡ ಸತ್ಯವೇದವು J.V. (BSI)15 ಈ ನಿಯಮದ ಪ್ರಕಾರ ಆ ಪರ್ಣಶಾಲೆಗಳಿಗಾಗಿ ಜನರು ಗುಡ್ಡಕ್ಕೆ ಹೋಗಿ ಒಲೀವ, ಕಾಡು ಒಲೀವ, ಸುಗಂಧ, ಖರ್ಜೂರ ಮುಂತಾದ ಮರಗಳ ದಟ್ಟವಾದ ಎಲೆಗಳುಳ್ಳ ಕೊಂಬೆಗಳನ್ನು ತರುವ ಹಾಗೆ ಅವರ ಎಲ್ಲಾ ಪಟ್ಟಣಗಳಲ್ಲಿಯೂ ಯೆರೂಸಲೇವಿುನಲ್ಲಿಯೂ ಡಂಗುರದಿಂದ ಪ್ರಕಟಿಸಬೇಕು ಎಂಬದಾಗಿ ಬರೆದಿರುವ ಶಾಸನವು ಮೋಶೆಗೆ ಯೆಹೋವನಿಂದ ದೊರಕಿದ ಧರ್ಮಶಾಸ್ತ್ರದಲ್ಲಿ ಸಿಕ್ಕಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಇದು ಅವರ ಎಲ್ಲಾ ಪಟ್ಟಣಗಳಲ್ಲಿಯೂ ಯೆರೂಸಲೇಮಿನಲ್ಲಿಯೂ ಡಂಗುರದಿಂದ ಸಾರಲ್ಪಡಬೇಕು ಎಂಬುದಾಗಿ ಬರೆದಿರುವ ಶಾಸನವು ಮೋಶೆಗೆ ಯೆಹೋವನಿಂದ ದೊರಕಿದ ಧರ್ಮನಿಯಮಗಳಲ್ಲಿ ಸಿಕ್ಕಿತು. ಅದರಲ್ಲಿ, “ಆ ಬಿಡಾರಗಳಿಗಾಗಿ ಜನರು ಗುಡ್ಡಕ್ಕೆ ಹೋಗಿ ಒಲೀವ್ ಮರ, ಕಾಡು ಒಲೀವ್, ಸುಗಂಧ, ಖರ್ಜೂರ ಮುಂತಾದ ಮರಗಳು ಅಲ್ಲದೆ ದಟ್ಟವಾದ ಎಲೆಗಳುಳ್ಳ ಕೊಂಬೆಗಳನ್ನು ತರಬೇಕು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಈ ನಿಯಮದ ಪ್ರಕಾರ ಆ ಪರ್ಣಕುಟೀರ ನಿರ್ಮಾಣಕ್ಕಾಗಿ ಜನರು ಗುಡ್ಡಕ್ಕೆ ಹೋಗಿ, ಒಲೀವ, ಕಾಡು ಓಲೀವ್, ಸುಗಂಧ, ಖರ್ಜೂರ ಮುಂತಾದ ಮರಗಳ ದಟ್ಟವಾದ ಎಲೆಗಳುಳ್ಳ ಕೊಂಬೆಗಳನ್ನು ತರಬೇಕಾಗಿತ್ತು. ‘ಇದಕ್ಕಾಗಿ ಅವರ ಎಲ್ಲ ಪಟ್ಟಣಗಳಲ್ಲಿಯು ಹಾಗು ಜೆರುಸಲೇಮಿನಲ್ಲಿಯು ಡಂಗುರದಿಂದ ಪ್ರಕಟಿಸಬೇಕು’ ಎಂಬುದಾಗಿ ಬರೆದಿರುವ ಶಾಸನವೊಂದು ಮೋಶೆಗೆ ಸರ್ವೇಶ್ವರನಿಂದ ದೊರಕಿದ ಧರ್ಮಶಾಸ್ತ್ರದಲ್ಲಿ ಸಿಕ್ಕಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಅದರಲ್ಲಿ, “ಪರ್ಣಶಾಲೆಗಳಿಗಾಗಿ ಬೆಟ್ಟಕ್ಕೆ ಹೋಗಿ ಓಲಿವ್, ಕಾಡು ಓಲಿವ್, ಸುಗಂಧ, ಖರ್ಜೂರ ಮುಂತಾದ ದಟ್ಟವಾಗಿರುವ ಗಿಡದ ಕೊಂಬೆಗಳನ್ನೂ ತೆಗೆದುಕೊಂಡು ಬನ್ನಿರಿ ಎಂದೂ, ತಮ್ಮ ಸಕಲ ಪಟ್ಟಣಗಳಲ್ಲಿಯೂ, ಯೆರೂಸಲೇಮಿನಲ್ಲಿಯೂ ಬಹಿರಂಗವಾಗಿ ಸಾರಬೇಕು,” ಎಂದೂ ಬರೆದಿತ್ತು. ಅಧ್ಯಾಯವನ್ನು ನೋಡಿ |