ನೆಹೆಮೀಯ 8:18 - ಕನ್ನಡ ಸತ್ಯವೇದವು J.V. (BSI)18 ಎಜ್ರನು ಮೊದಲನೆಯ ದಿನದಿಂದ ಕಡೆಯ ದಿನದವರೆಗೆ ಪ್ರತಿದಿನವೂ ದೇವರ ಧರ್ಮಶಾಸ್ತ್ರವನ್ನು [ಜನರಿಗೋಸ್ಕರ] ಪಾರಾಯಣ ಮಾಡುತ್ತಿದ್ದನು. ಏಳು ದಿನಗಳವರೆಗೂ ಜಾತ್ರೆ ನಡೆಯಿತು. ನೇಮದ ಪ್ರಕಾರ ಎಂಟನೆಯ ದಿನದಲ್ಲಿ ದೇವಾರಾಧನೆಗಾಗಿ ಸಭೆಕೂಡಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಎಜ್ರನು ಮೊದಲನೆಯ ದಿನದಿಂದ ಕೊನೆಯ ದಿನದವರೆಗೆ ಪ್ರತಿದಿನವೂ ದೇವರ ಧರ್ಮನಿಯಮಗಳನ್ನು ಜನರಿಗೋಸ್ಕರ ಪಾರಾಯಣ ಮಾಡುತ್ತಿದ್ದನು. ಏಳು ದಿನಗಳವರೆಗೂ ಉತ್ಸವದ ಜಾತ್ರೆ ನಡೆಯಿತು. ನಿಯಮದ ಪ್ರಕಾರ ಎಂಟನೆಯ ದಿನದಲ್ಲಿ ದೇವಾರಾಧನೆಗಾಗಿ ಸಭೆ ಸೇರಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಎಜ್ರನು, ಮೊದಲನೆಯ ದಿನದಿಂದ ಕಡೆಯ ದಿನದವರೆಗೂ ಪ್ರತಿದಿನವೂ ದೇವರ ಧರ್ಮಶಾಸ್ತ್ರವನ್ನು ಜನರಿಗೆ ಪಾರಾಯಣ ಮಾಡುತ್ತಿದ್ದನು. ಏಳು ದಿನಗಳವರೆಗೂ ಜಾತ್ರೆ ನಡೆಯಿತು. ನೇಮದ ಪ್ರಕಾರ ಎಂಟನೆಯ ದಿನ ಮುಕ್ತಾಯ ಸಮಾರಂಭಕ್ಕಾಗಿ ಸಭೆಕೂಡಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಆ ಹಬ್ಬದ ದಿನಗಳ ಪ್ರತಿಯೊಂದು ದಿನದಲ್ಲಿ ಎಜ್ರನು ಧರ್ಮಶಾಸ್ತ್ರ ಪಾರಾಯಣ ಮಾಡಿದನು. ಮೊದಲನೆ ದಿನದಿಂದ ಪ್ರಾರಂಭಿಸಿ ಕಡೆಯ ದಿನದ ತನಕ ಇಸ್ರೇಲರೆಲ್ಲರೂ ಈ ಹಬ್ಬವನ್ನು ಏಳು ದಿನಗಳವರೆಗೆ ಆಚರಿಸಿದರು. ಎಂಟನೆಯ ದಿನದಲ್ಲಿ ಧರ್ಮಶಾಸ್ತ್ರದ ಪ್ರಕಾರ ವಿಶೇಷಕೂಟಗಳಿಗಾಗಿ ಜನರು ಒಟ್ಟಾಗಿ ಸೇರಿಬಂದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಎಜ್ರನು ಮೊದಲನೆಯ ದಿವಸದಿಂದ ಕಡೇ ದಿವಸದವರೆಗೂ ದಿನದಿನವೂ ದೇವರ ನಿಯಮದ ಗ್ರಂಥವನ್ನು ಓದುತ್ತಿದ್ದನು. ಹೀಗೆಯೇ ಅವರು ಏಳು ದಿವಸ ಹಬ್ಬವನ್ನು ಆಚರಿಸಿದರು. ಎಂಟನೆಯ ದಿವಸದಲ್ಲಿ ಪದ್ಧತಿಯ ಪ್ರಕಾರ ಸಭೆಯು ಸೇರಿತ್ತು. ಅಧ್ಯಾಯವನ್ನು ನೋಡಿ |