Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 8:4 - ಕನ್ನಡ ಸತ್ಯವೇದವು J.V. (BSI)

4 ಧರ್ಮೋಪದೇಶಕನಾದ ಎಜ್ರನು ಪಾರಾಯಣಕ್ಕಾಗಿ ಮಾಡಲ್ಪಟ್ಟ ಮರದ ಪೀಠದ ಮೇಲೆ ನಿಂತನು. ಅವನ ಬಲಗಡೆಯಲ್ಲಿ ಮತ್ತಿತ್ಯ, ಶೆಮ, ಅನಾಯ, ಊರೀಯ, ಹಿಲ್ಕೀಯ, ಮಾಸೇಯ ಎಂಬವರೂ ಎಡಗಡೆಯಲ್ಲಿ ಪೆದಾಯ, ಮೀಷಾಯೇಲ್, ಮಲ್ಕೀಯ, ಹಾಷುಮ್, ಹಷ್ಬದ್ದಾನ, ಜೆಕರ್ಯ, ಮೆಷುಲ್ಲಾಮ್ ಎಂಬವರೂ ನಿಂತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಧರ್ಮೋಪದೇಶಕನಾದ ಎಜ್ರನು ಪಾರಾಯಣಕ್ಕಾಗಿ ಮಾಡಲ್ಪಟ್ಟ ಮರದ ಪೀಠದ ಮೇಲೆ ನಿಂತನು. ಅವನ ಬಲಗಡೆಯಲ್ಲಿ ಮತ್ತಿತ್ಯ, ಶೆಮ, ಅನಾಯ, ಊರೀಯ, ಹಿಲ್ಕೀಯ, ಮಾಸೇಯ ಎಂಬುವರೂ, ಎಡಗಡೆಯಲ್ಲಿ ಪೆದಾಯ, ಮಿಷಾಯೇಲ್, ಮಲ್ಕೀಯ, ಹಾಷುಮ್, ಹಷ್ಬದ್ದಾನ, ಜೆಕರ್ಯ, ಮೆಷುಲ್ಲಾಮ್ ಎಂಬುವರೂ ನಿಂತುಕೊಂಡಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಧರ್ಮೋಪದೇಶಕ ಎಜ್ರನು ಪಾರಾಯಣಕ್ಕಾಗಿ ಮಾಡಲಾಗಿದ್ದ ಮರದ ಪೀಠದ ಮೇಲೆ ನಿಂತನು. ಅವನ ಬಲಗಡೆಯಲ್ಲಿ ಮತ್ತಿತ್ಯ, ಶೆಮ, ಅನಾಯ, ಊರೀಯ, ಹಿಲ್ಕೀಯ, ಮಾಸೇಯ ಎಂಬುವರು ಇದ್ದರು. ಎಡಗಡೆಯಲ್ಲಿ ಪೆದಾಯ, ಮೀಷಾಯೇಲ್, ಮಲ್ಕೀಯ, ಹಾಷುಮ್, ಹಷ್ಬದ್ದಾನ, ಜೆಕರ್ಯ, ಮೆಷುಲ್ಲಾಮ್ ಎಂಬುವರು ನಿಂತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಆ ಸಮಯಕ್ಕೋಸ್ಕರವೇ ಕಟ್ಟಿದ ಮರದ ವೇದಿಕೆಯ ಮೇಲೆ ಎಜ್ರನು ನಿಂತಿದ್ದನು. ಅವನ ಬಲಬದಿಯಲ್ಲಿ ಮತ್ತಿತ್ಯ, ಶೆಮ, ಅನಾಯ, ಊರೀಯ, ಹಿಲ್ಕೀಯ ಮತ್ತು ಮಾಸೇಯ; ಎಡಬದಿಯಲ್ಲಿ ಪೆದಾಯ, ಮಿಷಾಯೇಲ್, ಮಲ್ಕೀಯ, ಹಾಷುಮ್, ಹಷ್ಬದ್ದಾನ, ಜೆಕರ್ಯ ಮತ್ತು ಮೆಷುಲ್ಲಾಮ್ ನಿಂತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಆಗ ನಿಯಮಶಾಸ್ತ್ರಿಯಾದ ಎಜ್ರನು ಅದಕ್ಕೋಸ್ಕರ ಮಾಡಲಾಗಿದ್ದ ಒಂದು ಮರದ ಪೀಠದ ಮೇಲೆ ನಿಂತನು. ಅವನ ಬಳಿಯಲ್ಲಿ ಅವನ ಬಲಗಡೆಯಲ್ಲಿ ಮತ್ತಿತ್ಯ. ಶೆಮ, ಅನಾಯ, ಊರೀಯ, ಹಿಲ್ಕೀಯ, ಮಾಸೇಯ, ಅವನಿಗೆ ಎಡಗಡೆಯಲ್ಲಿ ಪೆದಾಯ್, ಮೀಷಾಯೇಲ್, ಮಲ್ಕೀಯ, ಹಾಷುಮ್, ಹಷ್ಬದ್ದಾನ, ಜೆಕರ್ಯ, ಮೆಷುಲ್ಲಾಮ್ ನಿಂತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 8:4
16 ತಿಳಿವುಗಳ ಹೋಲಿಕೆ  

ಯೆರೆಮೀಯನ ಗೋತ್ರದ ಹನನ್ಯ, ಎಜ್ರನ ಗೋತ್ರದ ಮೆಷುಲ್ಲಾಮ್, ಅಮರ್ಯನ ಗೋತ್ರದ ಯೆಹೋಹಾನಾನ್,


ಬೆನ್ಯಾಮೀನ್ ಕುಲದವರಲ್ಲಿ - ಸಲ್ಲು; ಇವನು ಮೆಷುಲ್ಲಾಮನ ಮಗನು; ಇವನು ಯೋವೇದನ ಮಗನು; ಇವನು ಪೆದಾಯನ ಮಗನು; ಇವನು ಕೋಲಾಯನ ಮಗನು; ಇವನು ಮಾಸೇಯನ ಮಗನು; ಇವನು ಈತೀಯೇಲನ ಮಗನು; ಇವನು ಯೆಶಾಯನ ಮಗನು.


ಇನ್ನೊಬ್ಬನು ಮಾಸೇಯ; ಇವನು ಬಾರೂಕನ ಮಗನು; ಇವನು ಕೊಲ್ಹೋಜೆಯ ಮಗನು; ಇವನು ಹಜಾಯನ ಮಗನು; ಇವನು ಅದಾಯನ ಮಗನು; ಇವನು ಯೋಯಾರೀಬನ ಮಗನು; ಇವನು ಜೆಕರ್ಯನ ಮಗನು; ಇವನು ಶೇಲಹನ ಸಂತಾನದವನು.


ಪಿಲ್ಹ, ಶೋಬೇಕ್, ರೆಹೂಮ್, ಹಷಬ್ನ, ಮಾಸೇಯ,


ಆದೀನ್, ಆಟೇರ್, ಹಿಜ್ಕೀಯ, ಅಜ್ಜೂರ್,


ಬಾರೂಕ್, ಮೆಷುಲ್ಲಾಮ್, ಅಬೀಯ,


ಯೆರೆಮೀಯ, ಪಷ್ಹೂರ್, ಅಮರ್ಯ, ಮಲ್ಕೀಯ,


ಹಾಷುಮ್ ಸಂತಾನದವರಾದ ಮತ್ತೆನೈ, ಮತ್ತತ್ತ, ಜಾಬಾದ್, ಎಲೀಫೆಲೆಟ್, ಯೆರೇಮೈ, ಮನಸ್ಸೆ, ಶಿಮ್ಮೀ;


ಬಾನೀ ಸಂತಾನದವರಾದ ಮೆಷುಲ್ಲಾಮ್, ಮಲ್ಲೂಕ್, ಅದಾಯ, ಯಾಷೂಬ್, ಶೆಯಾಲ್, ರಾಮೋತ್;


ಶಾಸ್ತ್ರಿಗಳೂ ಫರಿಸಾಯರೂ ಮೋಶೆಯ ಪೀಠದಲ್ಲಿ ಕೂತುಕೊಂಡಿದ್ದಾರೆ;


ಅವನು ಐದು ಮೊಳ ಉದ್ದ, ಐದು ಮೊಳ ಅಗಲ, ಮೂರು ಮೊಳ ಎತ್ತರವಾಗಿರುವ ಒಂದು ತಾಮ್ರಪೀಠವನ್ನು ಮಾಡಿಸಿ ಪ್ರಾಕಾರದ ಮಧ್ಯದಲ್ಲಿಡಿಸಿದ್ದನು. ಅವನು ಇಸ್ರಾಯೇಲ್ ಸರ್ವಸಮೂಹದ ಎದುರಿನಲ್ಲಿ ಅದನ್ನು ಹತ್ತಿ ಅದರ ಮೇಲೆ ಮೊಣಕಾಲೂರಿಕೊಂಡು ಆಕಾಶದ ಕಡೆಗೆ ಕೈಗಳನ್ನೆತ್ತಿ ಹೀಗೆ ಪ್ರಾರ್ಥಿಸಿದನು -


ಆ ಧರ್ಮಶಾಸ್ತ್ರವನ್ನು ತಂದು ಪ್ರಾತಃಕಾಲದಿಂದ ಮಧ್ಯಾಹ್ನದವರೆಗೂ ಓದಿದನು. ನೀರುಬಾಗಲಿನ ಮುಂದಣ ಬೈಲಿನಲ್ಲಿ ಕೂಡಿಬಂದಿದ್ದ ಸ್ತ್ರೀಪುರುಷರಲ್ಲಿ ಗ್ರಹಿಸಶಕ್ತರಾದವರೆಲ್ಲರೂ ಧರ್ಮಶಾಸ್ತ್ರಪಾರಾಯಣವನ್ನು ಲಾಲಿಸುತ್ತಾ ಇದ್ದರು.


ಸರ್ವಸಮೂಹಕ್ಕಿಂತಲೂ ಎತ್ತರವಾದ ಸ್ಥಳದಲ್ಲಿ ನಿಂತಿದ್ದ ಎಜ್ರನು ಜನರ ಸಮಕ್ಷದಲ್ಲಿ ಗ್ರಂಥವನ್ನು ತೆರೆದ ಕೂಡಲೆ ಎಲ್ಲರೂ ಎದ್ದು ನಿಂತರು.


ಅವರು ಮೂರು ತಾಸುಗಳವರೆಗೂ ತಮ್ಮ ತಮ್ಮ ಸ್ಥಳಗಳಲ್ಲಿ ನಿಂತು ತಮ್ಮ ದೇವರಾದ ಯೆಹೋವನ ಧರ್ಮಶಾಸ್ತ್ರ ಗ್ರಂಥವನ್ನು ಪಾರಾಯಣ ಮಾಡಿಸಿದರು. ತರುವಾಯ ಇನ್ನೂ ಮೂರು ತಾಸು ತಮ್ಮ ದೇವರಾದ ಯೆಹೋವನಿಗೆ ಅಡ್ಡ ಬಿದ್ದು ಪಾಪಗಳನ್ನು ಅರಿಕೆಮಾಡಿದರು.


ಯೇಷೂವ, ಬಾನೀ, ಕದ್ಮೀಯೇಲ್, ಶೆಬನ್ಯ, ಬುನ್ನೀ, ಶೇರೇಬ್ಯ, ಬಾನೀ, ಕೆನಾನೀ ಎಂಬವರು ಲೇವಿಯರ ಮೆಟ್ಲುಗಳ ಮೇಲೆ ನಿಂತು ಮಹಾಶಬ್ದದಿಂದ ತಮ್ಮ ದೇವರಾದ ಯೆಹೋವನಿಗೆ ಮೊರೆಯಿಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು