ನೆಹೆಮೀಯ 9:11 - ಕನ್ನಡ ಸತ್ಯವೇದವು J.V. (BSI)11 ನಮ್ಮ ಪಿತೃಗಳು ಸಮುದ್ರ ಮಧ್ಯದಲ್ಲಿ ಒಣನೆಲದಲ್ಲೇ ಹಾದುಹೋಗುವಂತೆ ಅವರ ಮುಂದೆ ಸಮುದ್ರವನ್ನು ಭೇದಿಸಿದಿ. ಅವರನ್ನು ಹಿಂದಟ್ಟುವವರನ್ನು ಕಲ್ಲಿನಂತೆ ಮಹಾಜಲರಾಶಿಯ ತಳದಲ್ಲಿ ಮುಳುಗಿಸಿ ಬಿಟ್ಟಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ನಮ್ಮ ಪೂರ್ವಿಕರು ಸಮುದ್ರದ ಮಧ್ಯದಲ್ಲಿ ಒಣನೆಲದಲ್ಲೇ ಹಾದುಹೋಗುವಂತೆ ಅವರ ಮುಂದೆ ಸಮುದ್ರವನ್ನು ಭೇದಿಸಿದ್ದೀ. ಅವರನ್ನು ಹಿಂದಟ್ಟಿದವರನ್ನು ಕಲ್ಲಿನಂತೆ ಮಹಾಜಲರಾಶಿಯ ತಳದಲ್ಲಿ ಮುಳುಗಿಸಿಬಿಟ್ಟೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಕಡಲನು ಸೀಳಿ, ಆ ಪಿತೃಗಳ ನಡೆಸಿದಿರಿ ಒಣನೆಲದಲೋ ಎಂಬಂತೆ ಅವರ ಬೆನ್ನಟ್ಟಿ ಬಂದವರನು ಜಲರಾಶಿಯ ತಳಮುಟ್ಟಿಸಿದಿರಿ ಕಲ್ಲಂತೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಕೆಂಪುಸಮುದ್ರವನ್ನು ಅವರ ಕಣ್ಣು ಮುಂದೆಯೇ ಇಬ್ಬಾಗ ಮಾಡಿದೆ. ಅವರು ಆ ಒಣನೆಲದಲ್ಲಿ ನಡೆದರು. ಈಜಿಪ್ಟಿನ ವೈರಿಗಳು ಅವರನ್ನು ಹಿಂಬಾಲಿಸುತ್ತಿದ್ದರು. ಆದರೆ ಆ ವೈರಿಗಳನ್ನು ನೀನು ಸಮುದ್ರದೊಳಗೆ ಬಿಸಾಡಿದೆ; ಅವರು ಗುಂಡುಕಲ್ಲಿನಂತೆ ಸಮುದ್ರದಲ್ಲಿ ಮುಳುಗಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ನೀವು ಜನರ ಮುಂದೆ ಸಮುದ್ರವನ್ನು ವಿಭಾಗಿಸಿದ್ದರಿಂದ, ಅವರು ಸಮುದ್ರದ ನಡುವೆ ಒಣಭೂಮಿಯಲ್ಲಿ ಹಾದುಹೋದರು. ಆದರೆ ಅವರನ್ನು ಹಿಂದಟ್ಟಿದವರನ್ನು ಅಗಾಧಗಳಲ್ಲಿ ಕಲ್ಲಿನಂತೆ ಮಹಾ ಜಲರಾಶಿಗಳಲ್ಲಿ ಮುಳುಗಿಸಿಬಿಟ್ಟಿರಿ ಅಧ್ಯಾಯವನ್ನು ನೋಡಿ |