Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 9:17 - ಕನ್ನಡ ಸತ್ಯವೇದವು J.V. (BSI)

17 ನೀನು ಅವರ ಮಧ್ಯದಲ್ಲಿ ಮಾಡಿದ ಮಹತ್ಕಾರ್ಯಗಳನ್ನು ಅವರು ಮರೆತು ಮಾತುಕೇಳದೆ ಹಟಹಿಡಿದು ತಮಗೊಬ್ಬ ನಾಯಕನನ್ನು ನೇವಿುಸಿಕೊಂಡು ಮುಂಚಿನಂತೆ ದಾಸರಾಗಿರುವದಕ್ಕಾಗಿ ಐಗುಪ್ತಕ್ಕೆ ಹಿಂದಿರುಗಬೇಕೆಂದಿದ್ದರು. ನೀನಾದರೋ ಪಾಪಗಳನ್ನು ಕ್ಷವಿುಸುವವನೂ ಕನಿಕರದಯೆಗಳುಳ್ಳವನೂ ದೀರ್ಘಶಾಂತನೂ ಕೃಪಾಳುವೂ ಆಗಿರುವ ದೇವರು; ನೀನು ಅವರನ್ನು ಕೈಬಿಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ನೀನು ಅವರ ಮಧ್ಯದಲ್ಲಿ ಮಾಡಿದ ಮಹತ್ಕಾರ್ಯಗಳನ್ನು ಅವರು ಬೇಗನೆ ಮರೆತು, ನಿನ್ನ ಮಾತಿಗೆ ಕಿವಿಗೊಡದೆ ಹಠಹಿಡಿದು, ತಮಗೊಬ್ಬ ನಾಯಕನನ್ನು ನೇಮಿಸಿಕೊಂಡು, ಮೊದಲಿನಂತೆ ದಾಸರಾಗಿರುವುದಕ್ಕಾಗಿ ಐಗುಪ್ತಕ್ಕೆ ಹಿಂದಿರುಗಬೇಕೆಂದಿದ್ದರು. ಆದರೆ ನೀನಾದರೋ ಪಾಪಗಳನ್ನು ಕ್ಷಮಿಸುವವನೂ, ಕನಿಕರ ದಯೆಗಳುಳ್ಳವನೂ, ದೀರ್ಘಶಾಂತನೂ, ಕೃಪಾಳುವೂ ಆಗಿರುವ ದೇವರಾಗಿರುವುದರಿಂದ ನೀನು ಅವರ ಕೈಬಿಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಮರೆತುಬಿಟ್ಟರು ನೀವೆಸಗಿದ ಮಹಾತ್ಕಾರ್ಯಗಳನು ಹಟಹಿಡಿದರು ತಮಗೊಬ್ಬ ನಾಯಕನ ನೇಮಿಸಿಕೊಳ್ಳಲು; ಈಜಿಪ್ಟಿಗೆ ತೆರಳಲಿದ್ದರು ಮರಳಿ ಗುಲಾಮರಾಗಲು. ನೀವಾದರೋ ಪಾಪಿಗಳನು ಕ್ಷಮಿಸುವವರು ದಯಾಪೂರಿತರು, ದೀರ್ಘಶಾಂತರು, ಕೃಪಾಳು ದೇವರು, ಅವರನು ಕೈಬಿಡದೆ ಕಾಪಾಡಿ ನಡೆಸಿದವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ನಿನ್ನ ಮಾತನ್ನು ಕೇಳಲು ನಿರಾಕರಿಸಿದರು. ಅವರಿಗಾಗಿ ಅದ್ಭುತಕಾರ್ಯಗಳನ್ನು ಮಾಡಿದ್ದನ್ನು ಅವರು ಮರೆತರು. ಅವರು ಹಠಮಾರಿಗಳಾಗಿದ್ದರಿಂದ ತಮ್ಮನ್ನು ಈಜಿಪ್ಟಿನ ಗುಲಾಮಗಿರಿಗೆ ಮತ್ತೆ ಕರೆದೊಯ್ಯಲು ಒಬ್ಬ ನಾಯಕನನ್ನು ನೇಮಿಸಲು ಅವರು ನಿರ್ಧರಿಸಿದರು. “ಆದರೆ ನೀನು ಕ್ಷಮಿಸುವ ದೇವರಾಗಿರುವೆ. ನೀನು ಕನಿಕರ ಉಳ್ಳವನಾಗಿರುವೆ. ನೀನು ತಾಳ್ಮೆಯುಳ್ಳವನೂ ಪ್ರೀತಿಸ್ವರೂಪನೂ ಆಗಿರುವೆ. ಆದ್ದರಿಂದ ನೀನು ಅವರನ್ನು ತೊರೆಯಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಅವರು ನಿಮ್ಮ ಸ್ವರವನ್ನು ಕೇಳದೆಯೂ, ನೀವು ಅವರ ನಡುವೆ ಮಾಡಿದ ಅದ್ಭುತಕಾರ್ಯಗಳನ್ನು ಜ್ಞಾಪಕಮಾಡದೆ ಹೋದರು. ಅವರು ತಮ್ಮ ಹೃದಯವನ್ನು ಕಠಿಣ ಮಾಡಿಕೊಂಡು, ನಿಮಗೆ ಎದುರುಬಿದ್ದು, ತಮ್ಮ ದಾಸತ್ವಕ್ಕೆ ತಿರುಗಿ ಹೋಗುವಹಾಗೆ ನಾಯಕನನ್ನು ನೇಮಿಸಿಕೊಂಡರು. ಆದರೆ ನೀವು ಮನ್ನಿಸುವ ದೇವರಾಗಿಯೂ, ಕೃಪಾಪೂರ್ಣರೂ, ಅನುಕಂಪವುಳ್ಳವರೂ, ದೀರ್ಘಶಾಂತರೂ, ಪ್ರೀತಿಯಲ್ಲಿ ಸಮೃದ್ಧರೂ ಆಗಿರುವುದರಿಂದ ಅವರನ್ನು ಕೈಬಿಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 9:17
43 ತಿಳಿವುಗಳ ಹೋಲಿಕೆ  

ಕರ್ತನೇ, ನೀನು ಒಳ್ಳೆಯವನೂ ಕ್ಷವಿುಸುವವನೂ ನಿನಗೆ ಮೊರೆಯಿಡುವವರೆಲ್ಲರಲ್ಲಿ ಕೃಪಾಪೂರ್ಣನೂ ಆಗಿದ್ದೀಯಲ್ಲಾ.


ನಿಮ್ಮ ಬಟ್ಟೆಗಳನ್ನಲ್ಲ, ನಿಮ್ಮ ಹೃದಯಗಳನ್ನು ಹರಿದುಕೊಂಡು ನಿಮ್ಮ ದೇವರಾದ ಯೆಹೋವನ ಕಡೆಗೆ ತಿರಿಗಿಕೊಳ್ಳಿರಿ; ಆತನು ದಯೆಯೂ ಕನಿಕರವೂ ದೀರ್ಘಶಾಂತಿಯೂ ಮಹಾಕೃಪೆಯೂ ಉಳ್ಳವನಾಗಿ ಮಾಡಬೇಕೆಂದಿದ್ದ ಕೇಡಿಗೆ ಮನಮರುಗುತ್ತಾನೆ.


ಕರ್ತನೇ, ನೀನು ಕನಿಕರವೂ ದಯೆಯೂ ಉಳ್ಳ ದೇವರು; ದೀರ್ಘಶಾಂತನು, ಬಹಳ ಪ್ರೀತಿಯೂ ನಂಬಿಕೆಯೂ ಉಳ್ಳವನು.


ಯಾವನ ಮೇಲೆ ನನ್ನ ಕರುಣೆ ಉಂಟೋ ಅವನನ್ನು ಕರುಣಿಸುವೆನು, ಯಾವನ ಮೇಲೆ ನನ್ನ ಕನಿಕರವದೆಯೋ ಅವನಿಗೆ ಕನಿಕರ ತೋರಿಸುವೆನು ಎಂದು ದೇವರು ಮೋಶೆಗೆ ಹೇಳಿರುತ್ತಾನಷ್ಟೆ.


ಆದರೂ ಆತನು ಕರುಣಾಳುವೂ ಅಪರಾಧಿಗಳನ್ನು ಸಂಹರಿಸದೆ ಕ್ಷವಿುಸುವವನೂ ಆಗಿ ತನ್ನ ಸಿಟ್ಟನ್ನೆಲ್ಲಾ ಏರಗೊಡದೆ ಅದನ್ನು ಹಲವು ಸಾರಿ ತಡೆಯುತ್ತಾ ಬಂದನು.


ನನ್ನ ಪ್ರಜೆಗಳಾದ ಇಸ್ರಾಯೇಲ್ಯರನ್ನು ಕೈಬಿಡದೆ ಅವರ ಮಧ್ಯದಲ್ಲೇ ವಾಸಿಸುವೆನು ಎಂದು ಹೇಳಿದನು.


ನಮ್ಮ ಪೂರ್ವಿಕರು ಐಗುಪ್ತದಲ್ಲಿ ನಿನ್ನ ಅದ್ಭುತಕ್ರಿಯೆಗಳನ್ನು ಲಕ್ಷಿಸಲಿಲ್ಲ; ನಿನ್ನ ಕೃಪಾತಿಶಯವನ್ನು ಸ್ಮರಿಸಲಿಲ್ಲ. ಕೆಂಪು ಸಮುದ್ರದ ಬಳಿಯಲ್ಲಿ ನಿನಗೆ ತಿರುಗಿಬಿದ್ದರು.


ಆತನ ಕಾರ್ಯಗಳನ್ನೂ ಆತನು ತಮ್ಮೆದುರಿನಲ್ಲಿ ನಡಿಸಿದ ಅದ್ಭುತಗಳನ್ನೂ ಮರೆತುಬಿಟ್ಟರು.


ನಮ್ಮ ದೇವರಾದ ಯೆಹೋವನು ನಮ್ಮ ಪಿತೃಗಳ ಸಂಗಡ ಇದ್ದ ಹಾಗೆ ನಮ್ಮ ಸಂಗಡಲೂ ಇರಲಿ; ಆತನು ನಮ್ಮನ್ನು ಕೈಬಿಡದಿರಲಿ, ತಳ್ಳದಿರಲಿ.


ಆದರೆ ಅವರು ಬೇಗನೆ ಆತನ ಕೆಲಸಗಳನ್ನು ಮರೆತು ಆತನ ಸಂಕಲ್ಪವನ್ನು ಕಾದಿರದೆ


ನೀನು ಪಾಪವನ್ನು ಕ್ಷವಿುಸುವವನಾದ್ದರಿಂದ ಮನುಷ್ಯರ ಭಯಭಕ್ತಿಗೆ ನೀನೇ ಪಾತ್ರನು.


ನೀವು ಮಾತಾಡುತ್ತಿರುವಾತನ ಮಾತನ್ನು ಕೇಳಲೊಲ್ಲೆವೆಂದು ಹೇಳಬಾರದು. ಭೂವಿುಯ ಮೇಲೆ ದೈವೋಕ್ತಿಗಳನ್ನಾಡಿದವನಿಗೆ ಕಿವಿಗೊಡ ಮನಸ್ಸಿಲ್ಲದೆ ಇದ್ದ ಇಸ್ರಾಯೇಲ್ಯರು ದಂಡನೆಗೆ ತಪ್ಪಿಸಿಕೊಳ್ಳದಿದ್ದರೆ ಪರಲೋಕದಿಂದ ಮಾತಾಡುವವನಿಗೆ ನಾವು ಕಿವಿಗೊಡ ಮನಸ್ಸಿಲ್ಲದೆ ತೊಲಗಿದರೆ ಹೇಗೆ ತಪ್ಪಿಸಿಕೊಂಡೇವು?


ಆದರೆ ನಮ್ಮ ಪಿತೃಗಳು ಅವನ ಮಾತುಗಳನ್ನು ಕೇಳುವದಕ್ಕೆ ಮನಸ್ಸಿಲ್ಲದವರಾಗಿ ಅವನನ್ನು ತಳ್ಳಿ ಬಿಟ್ಟು ತಿರಿಗಿ ಐಗುಪ್ತದೇಶದ ಕಡೆಗೆ ಮನಸ್ಸಿಟ್ಟರು.


ನಾನು ಕರೆದಾಗ ನೀವು ತಿರಸ್ಕರಿಸಿದಿರಿ. ಕೈ ಚಾಚಿದರೂ ಯಾರೂ ಗಮನಿಸಲಿಲ್ಲ;


ಅಷ್ಟು ಮಾತ್ರವೇ ಅಲ್ಲ, ಹಾಲೂ ಜೇನೂ ಹರಿಯುವ ದೇಶಕ್ಕೆ ನಮ್ಮನ್ನು ಸೇರಿಸಲಿಲ್ಲವಲ್ಲಾ; ಹೊಲಗಳನ್ನೂ ದ್ರಾಕ್ಷೇತೋಟಗಳನ್ನೂ ನಮಗೆ ಸ್ವಂತಕ್ಕೆ ಕೊಡಲೇ ಇಲ್ಲ ; ಈ ಜನರ ಕಣ್ಣಿಗೆ ಮಣ್ಣು ಹಾಕಬೇಕೆಂದಿದ್ದೀಯೋ? ನಾವು ಬರುವದಿಲ್ಲ ಎಂದು ಹೇಳಿದರು.


ಆದರೆ ಮೋಶೆ ಅವರಿಗೆ - ನೀವು ಯಾಕೆ ಹೀಗೆ ಮಾಡಿ ಯೆಹೋವನ ಆಜ್ಞೆಯನ್ನು ಮೀರುತ್ತೀರಿ; ಇದು ಕೈಗೂಡುವದಿಲ್ಲ;


ಯೆಹೋವನು ಮೋಶೆಗೆ - ಈ ಜನರು ಇನ್ನು ಎಷ್ಟರ ಮಟ್ಟಿಗೆ ನನ್ನನ್ನು ಅಲಕ್ಷ್ಯಮಾಡುವರೋ; ನಾನು ನಡಿಸಿದ ಎಲ್ಲಾ ಮಹತ್ಕಾರ್ಯಗಳನ್ನು ಇವರು ಪ್ರತ್ಯಕ್ಷವಾಗಿ ನೋಡಿದಾಗ್ಯೂ ಇನ್ನು ಎಷ್ಟು ದಿನ ನನ್ನನ್ನು ನಂಬದೆ ಇರುವರೋ.


ಆದರೆ ನೀನು ದಯೆಯೂ ಕನಿಕರವೂ ಉಳ್ಳ ದೇವರಾಗಿರುವದರಿಂದ ನಿನ್ನ ಮಹಾ ಕೃಪಾನುಸಾರವಾಗಿ ಅವರನ್ನು ನಾಶಮಾಡಿಬಿಡಲಿಲ್ಲ, ಕೈಬಿಡಲೂ ಇಲ್ಲ.


ಇಸ್ರಾಯೇಲ್ಯರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ - ಆಹಾ, ಈ ಪಟ್ಟಣದವರೂ ಇದರ ಸುತ್ತಣ ಎಲ್ಲಾ ಊರುಗಳವರೂ ನನ್ನ ಮಾತುಗಳನ್ನು ಕೇಳಲೊಲ್ಲದೆ ತಮ್ಮ ಮನಸ್ಸನ್ನು ಕಠಿಣಮಾಡಿಕೊಂಡ ಕಾರಣ ನಾನು ಈ ಪಟ್ಟಣಕ್ಕೆ ಕೊಟ್ಟ ಶಾಪದ ಕೇಡನ್ನೆಲ್ಲಾ ಇವರಿಗೆ ಬರಮಾಡುವೆನು ಎಂದು ಸಮಸ್ತ ಜನರಿಗೆ ಸಾರಿದನು.


ಅದು ನನ್ನ ನಿಯಮನಿಷ್ಠೆಗಳಿಗೆ ಒಳಪಡದೆ ಜನಾಂಗಗಳಿಗಿಂತಲೂ ಸುತ್ತಲಿನ ದೇಶಗಳವರಿಗಿಂತಲೂ ಹೆಚ್ಚು ಅಧರ್ಮವನ್ನು ನಡಿಸಿದೆ; ಅದರ ನಿವಾಸಿಗಳು ನನ್ನ ನಿಯಮಗಳನ್ನು ಅನುಸರಿಸದೆ ನನ್ನ ವಿಧಿಗಳನ್ನು ನಿರಾಕರಿಸಿದ್ದಾರೆ.


ಕರ್ತನಾದ ನಮ್ಮ ದೇವರು ಕರುಣಿಸುವವನೂ ಕ್ಷವಿುಸುವವನೂ ಆಗಿದ್ದಾನೆ; ನಾವು ಆತನಿಗೆ ತಿರುಗಿಬಿದ್ದೆವಲ್ಲಾ;


ಯೆಹೋವನು ದೀರ್ಘಶಾಂತನಾಗಿದ್ದರೂ ಆತನ ಶಕ್ತಿಯು ಅಪಾರ, ಅಪರಾಧಿಗಳನ್ನು ಶಿಕ್ಷಿಸದೆ ಬಿಡನು; ಯೆಹೋವನು ಬಿರುಗಾಳಿಯಲ್ಲಿಯೂ ತುಫಾನಿನಲ್ಲಿಯೂ ನಡೆಯುತ್ತಾನೆ; ಮೋಡಗಳು ಆತನ ಹೆಜ್ಜೆಯಿಂದೇಳುವ ದೂಳು.


ಅದಲ್ಲದೆ ಯೆಹೋವನು ಮೋಶೆಗೆ - ಈ ಜನರ ಸ್ವಭಾವವನ್ನು ನಾನು ನೋಡಿದ್ದೇನೆ; ಇವರು ನನ್ನ ಆಜ್ಞೆಗೆ ಬೊಗ್ಗದವರಾಗಿದ್ದಾರೆ;


ಆದರೂ ಅವರು ಶತ್ರುಗಳ ದೇಶದಲ್ಲಿರುವಾಗಲೂ ನಾನು ಅವರನ್ನು ಬೇಡವೆನ್ನುವದಿಲ್ಲ, ತಾತ್ಸಾರಮಾಡುವದಿಲ್ಲ; ನಾನು ಅವರಿಗೆ ಮಾಡಿದ ವಾಗ್ದಾನವನ್ನು ಮೀರುವದಿಲ್ಲ; ಅವರನ್ನು ಇಲ್ಲದಂತೆ ಮಾಡುವದಿಲ್ಲ; ನಾನು ಅವರ ದೇವರಾದ ಯೆಹೋವನಲ್ಲವೇ.


ಯೆಹೋವನು ದಯದಿಂದ ನಿಮ್ಮನ್ನು ಸ್ವಕೀಯಜನವನ್ನಾಗಿ ಆರಿಸಿಕೊಂಡ ಮೇಲೆ ಆತನು ತನ್ನ ಮಹೋನ್ನತ ನಾಮದ ನಿವಿುತ್ತವಾಗಿ ನಿಮ್ಮನ್ನು ಕೈಬಿಡುವದೇ ಇಲ್ಲ.


ಇದಲ್ಲದೆ ನೆಬೂಕದ್ನೆಚ್ಚರನಿಗೆ ಒಳಗಾಗುತ್ತೇನೆಂದು ದೇವರ ಮೇಲೆ ಆಣೆಯಿಟ್ಟು ಪ್ರಮಾಣಮಾಡಿದ್ದರೂ ಅವನಿಗೆ ವಿರುದ್ಧವಾಗಿ ತಿರುಗಿಬಿದ್ದು ಇಸ್ರಾಯೇಲ್‍ದೇವರಾದ ಯೆಹೋವನ ಕಡೆಗೆ ತಿರುಗಿಕೊಳ್ಳಲೊಲ್ಲದೆ ಹಟಹಿಡಿದು ಮನಸ್ಸನ್ನು ಕಠಿನಮಾಡಿಕೊಂಡನು.


ನಾವು ದಾಸರಾದರೂ ನಮ್ಮ ದೇವರು ನಮ್ಮ ದಾಸತ್ವದಲ್ಲಿ ನಮ್ಮನ್ನು ಕೈಬಿಡಲಿಲ್ಲ; ಹಾಳುಬಿದ್ದ ನಮ್ಮ ದೇವರ ಆಲಯವನ್ನು ತಿರಿಗಿ ಕಟ್ಟಿ ಭದ್ರಪಡಿಸುವದಕ್ಕೋಸ್ಕರ ನಮಗೆ ಉಜ್ಜೀವನ ಪ್ರಾಪ್ತವಾಗುವಂತೆಯೂ ಯೆಹೂದದಲ್ಲಿಯೂ ಯೆರೂಸಲೇವಿುನಲ್ಲಿಯೂ ನಮಗೆ ಅಭಯಾಶ್ರಯ ಸಿಕ್ಕುವಂತೆಯೂ ಪಾರಸಿಯ ರಾಜರ ಮುಂದೆ ನಮಗೆ ಕೃಪೆಯನ್ನು ಅನುಗ್ರಹಿಸಿದ್ದಾನೆ.


ಅವರು ದೇವರ ನಿಬಂಧನೆಯನ್ನು ಪಾಲಿಸದೆ ಆತನ ಧರ್ಮಶಾಸ್ತ್ರವನ್ನು ಅನುಸರಿಸಲೊಲ್ಲದೆ


ನಿಮ್ಮವರಾದರೋ ನನ್ನ ಮಾತನ್ನು ಕೇಳಲಿಲ್ಲ, ಕಿವಿಗೊಡಲಿಲ್ಲ, ನನ್ನ ಆಜ್ಞೆಗೆ ಮಣಿಯಲಿಲ್ಲ; ತಮ್ಮ ಪಿತೃಗಳಿಗಿಂತಲೂ ಕೆಟ್ಟವರಾಗಿ ನಡೆದರು.


ನನ್ನ ಜನರೋ ನನ್ನನ್ನು ಮರೆತು ವ್ಯರ್ಥವಿಗ್ರಹಗಳಿಗೆ ಧೂಪಹಾಕಿದ್ದಾರಲ್ಲಾ; ಅವು ಪುರಾತನ ಪದ್ಧತಿಯಾದ ಅವರ ಮಾರ್ಗಗಳಲ್ಲಿ ಅವರು ಮುಗ್ಗರಿಸುವಂತೆಯೂ ಸರಿಯಲ್ಲದ ಸೀಳುದಾರಿಗಳಲ್ಲಿ ಅಲೆಯುವಂತೆಯೂ ಮಾಡಿವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು