Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 9:18 - ಕನ್ನಡ ಸತ್ಯವೇದವು J.V. (BSI)

18 ಅವರು ತಮಗೆ ಎರಕದ ಬಸವನನ್ನು ಮಾಡಿಕೊಂಡು - [ಇಸ್ರಾಯೇಲ್ಯರೇ,] ನಿಮ್ಮನ್ನು ಐಗುಪ್ತದಿಂದ ಕರಕೊಂಡು ಬಂದ ದೇವರು ಇದೇ ಎಂದು ಹೇಳಿ ನಿನ್ನನ್ನು ಅಸಡ್ಡೆ ಮಾಡಿದಾಗಲೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಅವರು ತಮಗೆ ಎರಕದ ಬಸವನನ್ನು ಮಾಡಿಕೊಂಡು, ‘ಇಸ್ರಾಯೇಲರೇ, ನಿಮ್ಮನ್ನು ಐಗುಪ್ತದಿಂದ ಕರೆದುಕೊಂಡು ಬಂದ ದೇವರು ಇದೇ’ ಎಂದು ಹೇಳಿ ನಿನ್ನನ್ನು ಅಸಡ್ಡೆಮಾಡಿದಾಗಲೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಅವರಾದರೋ ಎರಕದ ಹೋರಿಕರುವನು ಮಾಡಿಕೊಂಡರು ತಮ್ಮನು ಈಜಿಪ್ಟಿನಿಂದ ಕರೆತಂದುದು ಅದೇ ಎಂದುಕೊಂಡರು. ಈ ಪರಿಯ ವರ್ತನೆಯಿಂದ ನಿಮ್ಮನ್ನೇ ಅಸಡ್ಡೆಮಾಡಿಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಅವರು ಬಂಗಾರದಿಂದ ಕರುವಿನಾಕೃತಿಯ ವಿಗ್ರಹವನ್ನು ಮಾಡಿ, ‘ಈ ವಿಗ್ರಹವೇ ನಮ್ಮನ್ನು ಈಜಿಪ್ಟಿನಿಂದ ಕರೆದುಕೊಂಡು ಬಂದದ್ದು’ ಎಂದು ಹೇಳಿದರೂ ನೀನು ಅವರನ್ನು ತೊರೆದುಬಿಡಲಿಲ್ಲ. ಅವರು ನಿನಗೆ ವಿರೋಧವಾಗಿ ದೂಷಿಸಿ ಪಾಪಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಆದರೆ ಅವರು ತಮಗೋಸ್ಕರ ಒಂದು ಎರಕದ ಕರುವನ್ನು ಮಾಡಿಕೊಂಡರು. ‘ನಮ್ಮನ್ನು ಈಜಿಪ್ಟಿನಿಂದ ಕರೆದುಕೊಂಡು ಬಂದ ದೇವರು ಇದೇ,’ ಎಂದು ಹೇಳಿ, ನಿಮ್ಮನ್ನೇ ಬಹು ದೂಷಿಸಿ ಅಸಡ್ಡೆಮಾಡಿಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 9:18
7 ತಿಳಿವುಗಳ ಹೋಲಿಕೆ  

ಆಗ ಅವರು ನಿನಗೆ ಅವಿಧೇಯರಾಗಿ ತಿರುಗಿ ಬಿದ್ದು ನಿನ್ನ ಧರ್ಮೋಪದೇಶವನ್ನು ಉಲ್ಲಂಘಿಸಿ ತಮ್ಮನ್ನು ಎಚ್ಚರಿಸುವದಕ್ಕೂ ನಿನ್ನ ಕಡೆಗೆ ತಿರುಗಿಸುವದಕ್ಕೂ ಪ್ರಯತ್ನಿಸುತ್ತಿದ್ದ ನಿನ್ನ ಪ್ರವಾದಿಗಳನ್ನು ಕೊಂದುಹಾಕಿ ನಿನ್ನನ್ನು ಅಸಡ್ಡೆಮಾಡಿದರು.


ಇಸ್ರಾಯೇಲ್ ವಂಶದವರೇ, ನೀವು ಅರಣ್ಯದಲ್ಲಿ ನಾಲ್ವತ್ತು ವರುಷ ನನಗೆ ಯಜ್ಞಗಳನ್ನೂ ಧಾನ್ಯನೈವೇದ್ಯಗಳನ್ನೂ ಅರ್ಪಿಸುತ್ತಿದ್ದಿರೋ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು