ನೆಹೆಮೀಯ 9:21 - ಕನ್ನಡ ಸತ್ಯವೇದವು J.V. (BSI)21 ಬಾಯಾರಿದಾಗ ಅವರಿಗೆ ನೀರನ್ನು ಕೊಟ್ಟಿ. ನಾಲ್ವತ್ತು ವರುಷ ಅವರನ್ನು ಅರಣ್ಯದಲ್ಲಿ ಸಾಕುತ್ತಾ ಇದ್ದಿ; ಅವರಿಗೆ ಯಾವ ಕೊರತೆಯೂ ಇರಲಿಲ್ಲ. ಅವರ ಬಟ್ಟೆಗಳು ಜೀರ್ಣವಾಗಲಿಲ್ಲ, ಕಾಲುಗಳು ಬಾತುಹೋಗಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ನಲ್ವತ್ತು ವರ್ಷ ಅವರನ್ನು ಅರಣ್ಯದಲ್ಲಿ ಸಾಕುತ್ತಾ ಇದ್ದೆ. ಅವರಿಗೆ ಯಾವ ಕೊರತೆಯೂ ಆಗಲಿಲ್ಲ. ಅವರ ಬಟ್ಟೆಗಳು ಹರಿದುಹೋಗಲಿಲ್ಲ, ಅವರ ಕಾಲುಗಳು ನೋವಿನಿಂದ ಊದಿಕೊಳ್ಳಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಈ ಪರಿ ಸಲಹಿದಿರಿ ಮರುಭೂಮಿಯಲಿ ನಾಲ್ವತ್ತು ವರ್ಷ ಅಲ್ಲವರಿಗಿರಲಿಲ್ಲ ಯಾವುದೊಂದು ಸಂಕಷ್ಟ. ಊದಿಹೋಗಲಿಲ್ಲ ಕಾಲು, ಹರಿದುಹೋಗಲಿಲ್ಲ ಅವರ ವಸ್ತ್ರ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ನಲವತ್ತು ವರ್ಷ ಅವರನ್ನು ಸಾಕಿದೆ. ಆ ಮರುಭೂಮಿಯಲ್ಲಿ ಅವರಿಗೆ ಬೇಕಾದದ್ದೇ ದೊರಕಿತು. ಅವರ ಬಟ್ಟೆಗಳು ಹರಿದುಹೋಗಲಿಲ್ಲ. ಅವರ ಪಾದಗಳು ನೋವಿನಿಂದ ಊದಿಕೊಳ್ಳಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಹೀಗೆಯೇ ಮರುಭೂಮಿಯಲ್ಲಿ ನಾಲ್ವತ್ತು ವರ್ಷ ಅವರನ್ನು ಪೋಷಿಸುತ್ತಿದ್ದಿರಿ. ಅವರಿಗೆ ಯಾವ ಕೊರತೆಯೂ ಇರಲಿಲ್ಲ. ಅವರ ವಸ್ತ್ರಗಳು ಹಳೆಯದಾಗಲಿಲ್ಲ. ಅವರ ಕಾಲುಗಳು ಬಾತುಹೋಗಲಿಲ್ಲ. ಅಧ್ಯಾಯವನ್ನು ನೋಡಿ |