Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 9:23 - ಕನ್ನಡ ಸತ್ಯವೇದವು J.V. (BSI)

23 ಅವರ ಮಕ್ಕಳನ್ನು ಆಕಾಶದ ನಕ್ಷತ್ರಗಳಷ್ಟು ಹೆಚ್ಚಿಸಿ - ನೀವು ಈ ದೇಶದೊಳಕ್ಕೆ ಪ್ರವೇಶಿಸಿ ಸ್ವಾಧೀನ ಮಾಡಿಕೊಳ್ಳುವಿರಿ ಎಂದು ಅವರ ಪಿತೃಗಳಿಗೆ ವಾಗ್ದಾನಮಾಡಿದ್ದ ದೇಶಕ್ಕೆ ಅವರನ್ನು ಬರಮಾಡಿದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಅವರ ಮಕ್ಕಳನ್ನು ಆಕಾಶದ ನಕ್ಷತ್ರಗಳಂತೆ ಹೆಚ್ಚಿಸಿ, ನೀವು ಈ ದೇಶದೊಳಕ್ಕೆ‍ ಪ್ರವೇಶಿಸಿ ಅದನ್ನು ಸ್ವಾಧೀನಮಾಡಿಕೊಳ್ಳುವಿರಿ ಎಂದು ಅವರ ಪೂರ್ವಿಕರಿಗೆ ವಾಗ್ದಾನಮಾಡಿದ್ದ ದೇಶಕ್ಕೆ ಅವರನ್ನು ಬರಮಾಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಹೆಚ್ಚಿಸಿದಿರಿ ಅವರ ಮಕ್ಕಳನು ಆಗಸದ ನಕ್ಷತ್ರಗಳಷ್ಟೆ; ಬರಮಾಡಿದಿರಿ ಆ ಮಕ್ಕಳನು ವಾಗ್ದತ್ತ ನಾಡಿಗೆ ‘ಅದ ಸೇರಿ, ವಶಮಾಡಿಕೊಳ್ಳಿ’ ಎಂದು ಹೇಳಿದಿರಾ ಪಿತೃಗಳಿಗೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಅವರ ಸಂತತಿಯವರನ್ನು ಆಕಾಶದ ನಕ್ಷತ್ರಗಳಷ್ಟು ಮಾಡಿದೆ. ಅವರ ಪೂರ್ವಿಕರಿಗೆ ಕೊಡುತ್ತೇನೆಂದು ವಾಗ್ದಾನ ಮಾಡಿದ ದೇಶಕ್ಕೆ ತಂದೆ. ಅವರು ಒಳಹೊಕ್ಕು ದೇಶವನ್ನು ಆಕ್ರಮಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಇದಲ್ಲದೆ ಅವರ ಮಕ್ಕಳನ್ನು ಆಕಾಶದ ನಕ್ಷತ್ರಗಳ ಹಾಗೆ ಹೆಚ್ಚಿಸಿದಿರಿ. ಅವರು ಸ್ವಾಧೀನಮಾಡಿಕೊಳ್ಳುವರು ಎಂದು ನೀವು ಅವರ ಪಿತೃಗಳಿಗೆ ವಾಗ್ದಾನಮಾಡಿದ ದೇಶಕ್ಕೆ ಅವರನ್ನು ಬರಮಾಡಿದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 9:23
12 ತಿಳಿವುಗಳ ಹೋಲಿಕೆ  

ನಿನ್ನ ಸಂತತಿಯನ್ನು ಹೆಚ್ಚಿಸೇ ಹೆಚ್ಚಿಸುವೆನು; ಅದನ್ನು ಆಕಾಶದ ನಕ್ಷತ್ರಗಳಂತೆಯೂ ಸಮುದ್ರತೀರದಲ್ಲಿರುವ ಉಸುಬಿನಂತೆಯೂ ಅಸಂಖ್ಯವಾಗಿ ಮಾಡುವೆನು; ಅವರು ಶತ್ರುಗಳ ಪಟ್ಟಣಗಳನ್ನು ಸ್ವಾಧೀನಮಾಡಿಕೊಳ್ಳುವರು.


ಅವನನ್ನು ಹೊರಗೆ ಕರತಂದು - ಆಕಾಶದ ಕಡೆಗೆ ನೋಡು, ನಕ್ಷತ್ರಗಳನ್ನು ಲೆಕ್ಕಿಸುವದು ನಿನ್ನಿಂದಾದರೆ ಲೆಕ್ಕಿಸು; ನಿನ್ನ ಸಂತಾನವು ಅಷ್ಟಾಗುವದು ಅಂದನು.


ಇಸ್ರಾಯೇಲ್ಯರನ್ನು ಆಕಾಶದ ನಕ್ಷತ್ರಗಳಂತೆ ಅಸಂಖ್ಯವಾಗಿ ಮಾಡುವೆನೆಂಬದಾಗಿ ಯೆಹೋವನು ಕೊಟ್ಟ ಮಾತನ್ನು ದಾವೀದನು ನಂಬಿ ಇಪ್ಪತ್ತು ವರುಷಕ್ಕಿಂತ ಕಡಿಮೆಯಾದ ವಯಸ್ಸುಳ್ಳವರನ್ನು ಲೆಕ್ಕಿಸಲಿಲ್ಲ.


ನೀನು ಈ ದೇಶದಲ್ಲಿ ಪ್ರವಾಸಿಯಾಗಿರು; ನಾನು ನಿನ್ನ ಬಳಿಯಲ್ಲಿದ್ದು ನಿನ್ನನ್ನು ಅಭಿವೃದ್ಧಿಪಡಿಸಿ ನಿನಗೂ ನಿನ್ನ ಸಂತತಿಯವರಿಗೂ ಈ ಪ್ರದೇಶಗಳನ್ನೆಲ್ಲಾ ಕೊಡುವೆನು.


ನೀನು ಪ್ರವಾಸವಾಗಿರುವ ಕಾನಾನ್‍ದೇಶವನ್ನೆಲ್ಲಾ ನಿನಗೂ ನಿನ್ನ ಸಂತತಿಗೂ ಶಾಶ್ವತ ಸ್ವಾಸ್ತ್ಯವನ್ನಾಗಿ ಕೊಟ್ಟು ಅವರಿಗೆ ದೇವರಾಗಿರುವೆನು ಅಂದನು.


ಆ ದಿನದಲ್ಲಿ ಯೆಹೋವನು ಅಬ್ರಾಮನ ಸಂಗಡ ಒಡಂಬಡಿಕೆ ಮಾಡಿಕೊಂಡು - ಐಗುಪ್ತದೇಶದ ನದಿಯಿಂದ ಯೂಫ್ರೇಟೀಸ್ ಮಹಾನದಿಯವರೆಗೂ ಈ ದೇಶವನ್ನೆಲ್ಲಾ ನಿನ್ನ ಸಂತತಿಯವರಿಗೆ ಕೊಟ್ಟಿದ್ದೇನೆ ಅಂದನು;


ಅಲ್ಲಿ ಯೆಹೋವನು ಅಬ್ರಾಮನಿಗೆ ದರ್ಶನಕೊಟ್ಟು - ನಾನು ಈ ದೇಶವನ್ನು ನಿನ್ನ ಸಂತಾನಕ್ಕೆ ಕೊಡುವೆನು ಅಂದನು. ತನಗೆ ದರ್ಶನಕೊಟ್ಟ ಯೆಹೋವನಿಗೆ ಅಬ್ರಾಮನು ಯಜ್ಞವೇದಿಯನ್ನು ಕಟ್ಟಿಸಿದನು.


ನಕ್ಷತ್ರಗಳಷ್ಟು ಅಸಂಖ್ಯರಾಗಿರುವ ನೀವು ನಿಮ್ಮ ದೇವರಾದ ಯೆಹೋವನ ಮಾತಿನಲ್ಲಿ ಲಕ್ಷ್ಯವಿಡದೆಹೋದದರಿಂದ ಸ್ವಲ್ಪಮಂದಿಯೇ ಉಳಿಯುವಿರಿ.


ಆದರೆ ಇಸ್ರಾಯೇಲ್ಯರು ಅಭಿವೃದ್ಧಿಯಾಗಿ ಅತ್ಯಧಿಕವಾಗಿ ಹೆಚ್ಚಿ ಬಹಳ ಬಲಗೊಂಡರು; ಆ ದೇಶದಲ್ಲೆಲ್ಲಾ ತುಂಬಿಕೊಂಡರು.


ಐಗುಪ್ತ್ಯರು ಅವರನ್ನು ಎಷ್ಟು ಉಪದ್ರವಪಡಿಸಿದರೂ ಅವರು ಅತ್ಯಧಿಕವಾಗಿ ಹೆಚ್ಚಿ ಹರಡಿಕೊಂಡದ್ದರಿಂದ ಐಗುಪ್ತ್ಯರು ಇಸ್ರಾಯೇಲ್ಯರ ವಿಷಯದಲ್ಲಿ ಸಹಿಸಲಾರದಷ್ಟು ಹೆದರಿಕೆಯುಳ್ಳವರಾದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು