ನೆಹೆಮೀಯ 9:24 - ಕನ್ನಡ ಸತ್ಯವೇದವು J.V. (BSI)24 ಅವರು ಆ ದೇಶದಲ್ಲಿ ಸೇರಿ ಅದನ್ನು ಸ್ವಾಧೀನಮಾಡಿಕೊಂಡರು. ನೀನು ಅವರ ಮುಂದೆ ದೇಶನಿವಾಸಿಗಳಾಗಿದ್ದ ಕಾನಾನ್ಯರನ್ನು ಕುಗ್ಗಿಸಿ ಮನಸ್ಸಿಗೆ ಬಂದಂತೆ ನಡಿಸುವ ಹಾಗೆ ಆ ದೇಶದ ರಾಜರನ್ನೂ ಪ್ರಜೆಗಳನ್ನೂ ಅವರ ಕೈಗೆ ಒಪ್ಪಿಸಿದಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಅವರು ಆ ದೇಶದಲ್ಲಿ ಹೋಗಿ ಸೇರಿಕೊಂಡು ಅದನ್ನು ಸ್ವಾಧೀನಮಾಡಿಕೊಂಡರು. ನೀನು ಅವರ ಮುಂದೆ ದೇಶನಿವಾಸಿಗಳಾಗಿದ್ದ ಕಾನಾನ್ಯರನ್ನು ಕುಗ್ಗಿಸಿ ಮನಸ್ಸಿಗೆ ಬಂದಂತೆ ನಡಿಸುವ ಹಾಗೆ ಆ ದೇಶದ ರಾಜರನ್ನೂ ಪ್ರಜೆಗಳನ್ನೂ ಅವರ ಕೈಗೆ ಒಪ್ಪಿಸಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ಅಂತೆಯೇ ಸೇರಿ ಸ್ವಾಧೀನಮಾಡಿಕೊಂಡರು ಆ ನಾಡನು ಅವರಿಗಧೀನಪಡಿಸಿದಿರಿ ಅದರ ರಾಜರನು, ಪ್ರಜೆಗಳನು, ನಿವಾಸಿಗಳನು, ಆ ಕಾನಾನ್ಯರನು, ತಮಗಿಷ್ಟಾನುಸಾರ ನಡೆಸಲು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ಆ ಮಕ್ಕಳು ದೇಶವನ್ನು ಸ್ವಾಧೀನಪಡಿಸಿಕೊಂಡರು; ಅಲ್ಲಿ ವಾಸಿಸಿದ್ದ ಕಾನಾನ್ಯರನ್ನು ಓಡಿಸಿದರು. ಅವರನ್ನು ಸೋಲಿಸುವಂತೆ ನೀನೇ ಮಾಡಿದೆ. ಆ ರಾಜ್ಯಗಳಿಗೆ, ರಾಜರುಗಳಿಗೆ ಅವರು ಮಾಡಬೇಕೆಂದಿದ್ದನ್ನು ಮಾಡುವಂತೆ ಅವರಿಗೇ ಅವಕಾಶಮಾಡಿಕೊಟ್ಟೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ಹಾಗೆಯೇ ಇಸ್ರಾಯೇಲರು ಹೋಗಿ, ಆ ದೇಶವನ್ನು ಸ್ವಾಧೀನಮಾಡಿಕೊಂಡರು. ನೀವು ಆ ದೇಶದ ನಿವಾಸಿಗಳಾದ ಕಾನಾನ್ಯರನ್ನು ಅವರ ಮುಂದೆ ಕುಗ್ಗಿಸಿ, ಅವರಿಗೆ ಸರಿತೋರಿದ ಪ್ರಕಾರ ಮಾಡುವುದಕ್ಕೆ ಅವರನ್ನೂ, ಅವರ ಅರಸರನ್ನೂ, ದೇಶದ ಜನರನ್ನೂ ಅವರ ಕೈಯಲ್ಲಿ ಒಪ್ಪಿಸಿಕೊಟ್ಟಿರಿ. ಅಧ್ಯಾಯವನ್ನು ನೋಡಿ |