Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 9:28 - ಕನ್ನಡ ಸತ್ಯವೇದವು J.V. (BSI)

28 ಉಪಶಮನವನ್ನು ಪಡೆದ ಮೇಲೆ ಅವರು ತಿರಿಗಿ ದ್ರೋಹಿಗಳಾಗಿ ನಡೆಯುತ್ತಿರುವದನ್ನು ನೀನು ಕಂಡು ಅವರ ಮೇಲೆ ದೊರೆತನ ನಡಿಸತಕ್ಕ ವೈರಿಗಳ ಕೈಗೆ ಅವರನ್ನು ಒಪ್ಪಿಸಿದಿ. ಆಗ ಅವರು ಪಶ್ಚಾತ್ತಾಪಪಟ್ಟು ಕೂಗಿಕೊಳ್ಳಲು ಪರಲೋಕದಿಂದ ನೀನು ಕೇಳಿ ನಿನ್ನ ಕರುಣಾತಿಶಯದಿಂದ ಅವರನ್ನು ಅನೇಕಾವರ್ತಿ ರಕ್ಷಿಸಿ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಉಪಶಮನವನ್ನು ಪಡೆದ ಮೇಲೆ ಅವರು ತಿರುಗಿ ದ್ರೋಹಿಗಳಾಗಿ ನಡೆಯುತ್ತಿರುವುದನ್ನು ನೀನು ಕಂಡು ಅವರ ಮೇಲೆ ದೊರೆತನ ನಡೆಸತಕ್ಕ ವೈರಿಗಳ ಕೈಗೆ ಅವರನ್ನು ಒಪ್ಪಿಸಿದೆ. ಆಗ ಅವರು ಪಶ್ಚಾತ್ತಾಪಪಟ್ಟು ಕೂಗಿಕೊಳ್ಳಲು ಪುನಃ ಪರಲೋಕದಿಂದ ನೀನು ಕೇಳಿ ನಿನ್ನ ಕರುಣಾತಿಶಯದಿಂದ ಅವರನ್ನು ಅನೇಕಾವರ್ತಿ ರಕ್ಷಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಶಾಂತಿ ಸವಿದದ್ದೇ ದ್ರೋಹಿಗಳಾಗಿ ನಡೆದರು ಮತ್ತೆ ನೀವಿತ್ತಿರವರನು ದೊರೆತನ ನಡೆಸುವ ವೈರಿಗಳ ಕೈಗೆ. ಪಶ್ಚಾತ್ತಾಪಪಟ್ಟು ಕೂಗಿಕೊಳ್ಳಲು, ಆಲಿಸಿದಿರಿ ಪರದಿಂದ ರಕ್ಷಿಸಿದಿರಿ ಪದೇ ಪದೇ ಅಪರಿಮಿತ ಕರುಣೆಯಿಂದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ನಮ್ಮ ಪೂರ್ವಿಕರಿಗೆ ವಿಶ್ರಾಂತಿ ಸಿಕ್ಕಿದ ಕೂಡಲೇ ಅವರು ಮತ್ತೆ ದುಷ್ಕೃತ್ಯಗಳನ್ನು ಮಾಡಲಾರಂಭಿಸಿದರು. ಆದ್ದರಿಂದ ಆ ವೈರಿಗಳು ಅವರನ್ನು ಸೋಲಿಸಿ ಶಿಕ್ಷಿಸುವಂತೆ ನೀನು ಮಾಡಿದೆ. ಅವರು ನಿನ್ನ ಸಹಾಯಕ್ಕಾಗಿ ಮೊರೆಯಿಟ್ಟರು. ಪರಲೋಕದಲ್ಲಿ ನೀನು ಅವರ ಮೊರೆಯನ್ನು ಕೇಳಿ ಅವರಿಗೆ ಸಹಾಯಮಾಡಿದೆ. ನೀನು ದಯಾಳು! ಈ ರೀತಿ ಅನೇಕಸಲ ಆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 “ಆದರೆ ಅವರು ವಿಶ್ರಾಂತಿಯನ್ನು ಹೊಂದಿದ ತರುವಾಯ ನಿಮ್ಮ ದೃಷ್ಟಿಯಲ್ಲಿ ಕೆಟ್ಟದ್ದನ್ನು ತಿರುಗಿ ಮಾಡಿದರು. ಆದಕಾರಣ ಅವರ ಶತ್ರುಗಳು ಅವರನ್ನು ಮತ್ತೆ ಆಳುವಂತೆ ಶತ್ರು ಕೈಗೆ ಅವರನ್ನು ಒಪ್ಪಿಸಿದಿರಿ. ಆದರೆ ಅವರು ತಿರುಗಿ ನಿಮ್ಮನ್ನು ಕೂಗಿಕೊಳ್ಳಲು, ನೀವು ಪರಲೋಕದಿಂದ ಕೇಳಿ, ನಿಮ್ಮ ಅನುಕಂಪಕ್ಕೆ ಅನುಸಾರವಾಗಿ ಅವರನ್ನು ಅನೇಕ ಸಾರಿ ವಿಮೋಚಿಸಿದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 9:28
12 ತಿಳಿವುಗಳ ಹೋಲಿಕೆ  

ಯೆಹೋವನ ಎಲ್ಲಾ ಶತ್ರುಗಳೂ ಇವರಂತೆಯೇ ನಾಶವಾಗಲಿ; ಆತನ ಭಕ್ತರು ಪ್ರತಾಪದಿಂದ ಉದಯಿಸುವ ಸೂರ್ಯನಂತಿರಲಿ. ದೇಶದಲ್ಲಿ ನಾಲ್ವತ್ತು ವರುಷ ಸಮಾಧಾನವಿತ್ತು.


ಮನುಷ್ಯರ ಹೃದಯಗಳನ್ನು ಬಲ್ಲಂಥ ನೀನು ನಿನ್ನ ನಿವಾಸವಾಗಿರುವ ಪರಲೋಕದಿಂದ ಲಾಲಿಸಿ ಅವರಿಗೆ ಪಾಪಪರಿಹಾರವನ್ನು ಅನುಗ್ರಹಿಸು; ನೀನೊಬ್ಬನೇ ಎಲ್ಲಾ ಮನುಷ್ಯರ ಹೃದಯಗಳನ್ನು ಬಲ್ಲವನಾಗಿರುವದರಿಂದ ಪ್ರತಿಯೊಬ್ಬನಿಗೂ ಅವನವನು ಹಿಡಿಯುವ ಮಾರ್ಗಕ್ಕೆ ತಕ್ಕ ಹಾಗೆ ಫಲವನ್ನು ಕೊಡು.


ಏಹೂದನು ಮರಣಹೊಂದಿದನಂತರ ಇಸ್ರಾಯೇಲ್ಯರು ತಿರಿಗಿ ಯೆಹೋವನ ದೃಷ್ಟಿಯಲ್ಲಿ ದ್ರೋಹಿಗಳಾದದರಿಂದ


ಆ ದಿವಸದಲ್ಲಿ ಮೋವಾಬ್ಯರು ಇಸ್ರಾಯೇಲ್ಯರಿಂದ ತಗ್ಗಿಸಲ್ಪಟ್ಟರು; ದೇಶದಲ್ಲಿ ಎಂಭತ್ತು ವರುಷ ಸಮಾಧಾನವಿತ್ತು.


ಆಕಾಶದಿಂದ ನೋಡು, ಪರಿಶುದ್ಧವೂ ಘನವೂ ಆದ ನಿನ್ನ ಉನ್ನತಸ್ಥಾನದಿಂದ ಲಕ್ಷಿಸು; ನಿನ್ನ ಆಗ್ರಹವೆಲ್ಲಿ, ನಿನ್ನ ಸಾಹಸಕಾರ್ಯಗಳೆಲ್ಲಿ? ನಿನ್ನ ಕರುಳ ಮರುಗಾಟವನ್ನೂ ನಿನ್ನ ಕನಿಕರವನ್ನೂ ನಮ್ಮ ಕಡೆಗೆ ಬಿಗಿಹಿಡಿದಿದ್ದೀ.


ನಮ್ಮ ಶತ್ರುಗಳಿಂದ ನಮ್ಮನ್ನು ಬಿಡಿಸಿದನು; ಆತನ ಕೃಪೆಯು ಶಾಶ್ವತವಾದದ್ದು.


ಅಂಥ ನ್ಯಾಯಸ್ಥಾಪಕರು ತೀರಿಹೋದನಂತರ ಇಸ್ರಾಯೇಲ್ಯರು ತಿರುಗಿಕೊಂಡು ತಮ್ಮ ಹಿರಿಯರಿಗಿಂತಲೂ ಭ್ರಷ್ಟರಾಗಿ ಅನ್ಯದೇವತೆಗಳನ್ನು ಅವಲಂಬಿಸಿ ಸೇವಿಸಿ ಅವುಗಳಿಗೆ ಅಡ್ಡಬಿದ್ದರು; ಅವರು ಈ ತಮ್ಮ ದುರ್ಮಾರ್ಗವನ್ನೂ ಮೊಂಡತನವನ್ನೂ ಬಿಡಲೇ ಇಲ್ಲ.


ಶತ್ರುಗಳು ಅವರನ್ನು ಕುಗ್ಗಿಸಿದರು; ಅವರ ಕೈಕೆಳಗೆ ತಗ್ಗಿಹೋದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು