Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 9:29 - ಕನ್ನಡ ಸತ್ಯವೇದವು J.V. (BSI)

29 ನನ್ನ ಧರ್ಮೋಪದೇಶಕ್ಕೆ ಪುನಃ ಮನಗೊಟ್ಟು ಬನ್ನಿರಿ ಎಂದು ಎಷ್ಟೋ ಖಂಡಿತವಾಗಿ ಎಚ್ಚರಿಸಿದಿ. ಆದರೂ ಅವರು ಲಾಲಿಸದೆ ಗರ್ವಿಗಳೂ ನಿನ್ನ ಆಜ್ಞೆಗಳಿಗೆ ಅವಿಧೇಯರೂ ಆದರು; ಕೈಕೊಳ್ಳುವ ಮನುಷ್ಯನಿಗೆ ಜೀವಾಧಾರವಾಗಿರುವ ನಿನ್ನ ವಿಧಿ ನ್ಯಾಯಗಳನ್ನು ಮೀರಿ ಪಾಪಮಾಡಿ ಹೆಗಲು ಕೊಡದೆ ಮೊಂಡಬಿದ್ದು ನಿನ್ನ ಮಾತನ್ನು ಕೇಳದೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ನಿನ್ನ ಧರ್ಮೋಪದೇಶಕ್ಕೆ ಪುನಃ ಮನಗೊಟ್ಟು ಬನ್ನಿರಿ ಎಂದು ಎಷ್ಟೋ ಖಂಡಿತವಾಗಿ ಅವರನ್ನು ಎಚ್ಚರಿಸಿದೆ. ಆದರೂ ಅವರು ಲಾಲಿಸದೆ ಗರ್ವಿಗಳೂ, ನಿನ್ನ ಆಜ್ಞೆಗಳಿಗೆ ಅವಿಧೇಯರೂ ಆದರು. ಕೈಕೊಳ್ಳುವ ಮನುಷ್ಯನಿಗೆ ಜೀವಾಧಾರವಾಗಿರುವ ನಿನ್ನ ವಿಧಿನ್ಯಾಯಗಳನ್ನು ಮೀರಿ ಪಾಪಮಾಡಿ ಮೊಂಡು ಬಿದ್ದು ನಿನ್ನ ಮಾತುಗಳನ್ನು ಕೇಳದೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ‘ಧರ್ಮೋಪದೇಶಕೆ ಮರಳಿ ಮನವೊಲಿದು ಬನ್ನಿ’ ಎಂದು ನೀವೆಷ್ಟೋ ಸಾರಿ ಅವರನ್ನೆಚ್ಚರಿಸಿದಿರಿ ಖಚಿತವಾಗಿ ಆದರೂ ಆಲಿಸಲಿಲ್ಲಾ ಗರ್ವಿಗಳು, ಅವಿಧೇಯರು, ಪಾಪಿಗಳು. ಜೀವಾಧಾರವಾದ ನಿಮ್ಮಾ ವಿಧಿನಿಯಮಗಳನು ಮೀರಿದರು ಮೊಂಡುಬಿದ್ದು ನಿಮ್ಮ ನೊಗಕೆ ಕೊರಳೊಡ್ಡದೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ನೀನು ಅವರನ್ನು ಎಚ್ಚರಿಸಿದೆ. ನನ್ನ ಕಡೆಗೆ ತಿರುಗಿರಿ ಎಂದು ಎಚ್ಚರಿಸಿದೆ. ಆದರೆ ಅವರು ಗರ್ವಿಷ್ಟರಾಗಿ ನಿನ್ನ ಆಜ್ಞೆಗಳನ್ನು ನಿರಾಕರಿಸಿದರು. ನಿನ್ನ ಆಜ್ಞೆಗಳನ್ನು ಅನುಸರಿಸುವ ಜನರು ನಿಜವಾಗಿಯೂ ಬಾಳುವರು. ನಮ್ಮ ಪೂರ್ವಿಕರು ನಿನ್ನ ಆಜ್ಞೆಯನ್ನು ಮುರಿದುಹಾಕಿದರು; ಅವರು ಹಠಮಾರಿಗಳಾಗಿ ನಿನಗೆ ವಿಮುಖರಾದರು; ನಿನ್ನ ಮಾತುಗಳನ್ನು ಕೇಳದೆಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 “ನೀವು ಅವರನ್ನು ನಿಮ್ಮ ನಿಯಮಕ್ಕೆ ಮರಳಿ ಬರುವ ಹಾಗೆ ಅವರನ್ನು ಎಚ್ಚರಿಸಿದಿರಿ. ಆದರೆ ಅವರು ಗರ್ವಪಟ್ಟು, ನಿಮ್ಮ ಆಜ್ಞೆಗಳನ್ನು ಅನುಸರಿಸದೆ ಹೋದರು. ನಿಮ್ಮ ವಾಕ್ಯಗಳನ್ನು ಕೈಗೊಳ್ಳುವುದರಿಂದ ಮನುಷ್ಯರು ಬದುಕುವರು ಎಂಬುದನ್ನು ಅವರು ತಿಳಿದಿದ್ದರೂ, ಆ ನಿಮ್ಮ ವಾಕ್ಯಗಳಿಗೆ ವಿರೋಧವಾಗಿ ಪಾಪಮಾಡಿ, ತಮ್ಮ ಹೃದಯವನ್ನು ಕಠಿಣಪಡಿಸಿಕೊಂಡು ನಿಮ್ಮ ಮಾತನ್ನು ಕೇಳದೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 9:29
34 ತಿಳಿವುಗಳ ಹೋಲಿಕೆ  

ಆದರೂ ನಮ್ಮ ಪಿತೃಗಳು ಗರ್ವಿಗಳಾಗಿ ಹಟಹಿಡಿದು ನಿನ್ನ ಆಜ್ಞೆಗಳಿಗೆ ಅವಿಧೇಯರಾದರು.


ನನ್ನ ಆಜ್ಞಾವಿಧಿಗಳ ಪ್ರಕಾರ ನಡೆದುಕೊಳ್ಳುವವರು ಆ ಆಜ್ಞಾವಿಧಿಗಳ ಮೂಲಕ ಬದುಕುವರು. ಆದದರಿಂದ ನೀವು ಅವುಗಳನ್ನೇ ಅನುಸರಿಸಬೇಕು; ನಾನು ಯೆಹೋವನು.


ಆಗ ಅವರು ನಿನಗೆ ಅವಿಧೇಯರಾಗಿ ತಿರುಗಿ ಬಿದ್ದು ನಿನ್ನ ಧರ್ಮೋಪದೇಶವನ್ನು ಉಲ್ಲಂಘಿಸಿ ತಮ್ಮನ್ನು ಎಚ್ಚರಿಸುವದಕ್ಕೂ ನಿನ್ನ ಕಡೆಗೆ ತಿರುಗಿಸುವದಕ್ಕೂ ಪ್ರಯತ್ನಿಸುತ್ತಿದ್ದ ನಿನ್ನ ಪ್ರವಾದಿಗಳನ್ನು ಕೊಂದುಹಾಕಿ ನಿನ್ನನ್ನು ಅಸಡ್ಡೆಮಾಡಿದರು.


ಐಗುಪ್ತ್ಯರು ಗರ್ವಿಗಳಾಗಿ ಅವರನ್ನು ಕುಗ್ಗಿಸಿದಾಗ ನೀನು ಫರೋಹನಲ್ಲಿಯೂ ಅವನ ಸೇವಕರಲ್ಲಿಯೂ ಅವನ ದೇಶದ ಜನರಲ್ಲಿಯೂ ಅದ್ಭುತಕಾರ್ಯಗಳನ್ನೂ ಸೂಚಕಕಾರ್ಯಗಳನ್ನೂ ನಡಿಸಿ ಈಗ ನಿನಗಿರುವ ಕೀರ್ತಿಯನ್ನು ಸ್ಥಾಪಿಸಿದಿ.


ಆದಕಾರಣ ನಾನು ನಿಮ್ಮ ಜನರನ್ನು ಪ್ರವಾದಿಗಳ ಮೂಲಕ ಹತಿಸಿದ್ದೇನೆ, ನನ್ನ ಬಾಯಿ ಮಾತುಗಳಿಂದ ಸಂಹರಿಸಿದ್ದೇನೆ; ನನ್ನ ನ್ಯಾಯದಂಡನೆಯು ವಿುಂಚಿನಂತೆ ಹೊರಡುವದು.


ಹೋಷಾಯನ ಮಗನಾದ ಅಜರ್ಯನೂ ಕಾರೇಹನ ಮಗನಾದ ಯೋಹಾನಾನನೂ ಸೊಕ್ಕೇರಿದವರೆಲ್ಲರೂ ಅವನಿಗೆ - ನಿನ್ನ ಮಾತು ಸುಳ್ಳು; ಐಗುಪ್ತಕ್ಕೆ ಹೋಗಿ ವಾಸಮಾಡಬಾರದು ಎಂದು ತಿಳಿಸುವಂತೆ ನಮ್ಮ ದೇವರಾದ ಯೆಹೋವನು ನಿನ್ನನ್ನು ಕಳುಹಿಸಲಿಲ್ಲ;


ಆದರೆ ಕರ್ಮಮಾರ್ಗಕ್ಕೆ ನಂಬಿಕೆಯು ಆಧಾರವಲ್ಲ, ಅದರ ನೇಮಗಳನ್ನು ಆಚರಿಸಿದವನೇ ಅವುಗಳ ಮೂಲಕ ಬದುಕುವನು ಎಂದು ಬರೆದದೆ.


ನೇಮನಿಷ್ಠೆಗಳಿಂದಾಗುವ ನೀತಿಯ ವಿಷಯದಲ್ಲಿ - ಅದನ್ನು ಅನುಸರಿಸಿದವನೇ ಅದರಿಂದ ಜೀವಿಸುವನೆಂದು ಮೋಶೆಯು ಬರೆಯುತ್ತಾನೆ.


ಆತನು ಅವನಿಗೆ - ನೀನು ಸರಿಯಾಗಿ ಉತ್ತರಕೊಟ್ಟಿ; ಇದರಂತೆ ಮಾಡು, ಮಾಡಿದರೆ ಜೀವಿಸುವಿ ಎಂದು ಹೇಳಿದನು.


ಹೀಗೆ ಅವನ ಹೃದಯವು ಉಬ್ಬಿ ಅವನ ಸ್ವಭಾವವು ಜಡವಾಗಿ ಅವನಿಗೆ ಸೊಕ್ಕೇರಲು ಅವನನ್ನು ರಾಜಾಸನದಿಂದ ತಳ್ಳಿ ಮಾನವನ್ನು ತೆಗೆದುಬಿಟ್ಟನು;


ಕೈಕೊಳ್ಳುವವರಿಗೆ ಜೀವಾಧಾರವಾದ ನನ್ನ ಆಜ್ಞಾವಿಧಿಗಳನ್ನು ಅವರಿಗೆ ತಿಳಿಸಿಕೊಟ್ಟೆನು.


ಅವರು ಇಂದಿನವರೆಗೂ ತಗ್ಗಲಿಲ್ಲ, ನನಗೆ ಭಯಪಡಲಿಲ್ಲ; ನಾನು ನಿಮಗೂ ನಿಮ್ಮ ಪಿತೃಗಳಿಗೂ ನೇವಿುಸಿದ ನಿಯಮನಿಷ್ಠೆಗಳನ್ನು ಅನುಸರಿಸಿ ನಡೆಯಲೂ ಇಲ್ಲ.


ಇಸ್ರಾಯೇಲ್ಯರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ - ಆಹಾ, ಈ ಪಟ್ಟಣದವರೂ ಇದರ ಸುತ್ತಣ ಎಲ್ಲಾ ಊರುಗಳವರೂ ನನ್ನ ಮಾತುಗಳನ್ನು ಕೇಳಲೊಲ್ಲದೆ ತಮ್ಮ ಮನಸ್ಸನ್ನು ಕಠಿಣಮಾಡಿಕೊಂಡ ಕಾರಣ ನಾನು ಈ ಪಟ್ಟಣಕ್ಕೆ ಕೊಟ್ಟ ಶಾಪದ ಕೇಡನ್ನೆಲ್ಲಾ ಇವರಿಗೆ ಬರಮಾಡುವೆನು ಎಂದು ಸಮಸ್ತ ಜನರಿಗೆ ಸಾರಿದನು.


ಅವರಾದರೋ ಕಿವಿಗೊಟ್ಟು ಕೇಳಲಿಲ್ಲ, ಕೇಳಲಿಕ್ಕೂ ಉಪದೇಶ ಹೊಂದಲಿಕ್ಕೂ ಒಪ್ಪಲಿಲ್ಲ.


ನಿಮ್ಮವರಾದರೋ ನನ್ನ ಮಾತನ್ನು ಕೇಳಲಿಲ್ಲ, ಕಿವಿಗೊಡಲಿಲ್ಲ, ನನ್ನ ಆಜ್ಞೆಗೆ ಮಣಿಯಲಿಲ್ಲ; ತಮ್ಮ ಪಿತೃಗಳಿಗಿಂತಲೂ ಕೆಟ್ಟವರಾಗಿ ನಡೆದರು.


ಅವರ ಪಿತೃಗಳ ದೇವರಾದ ಯೆಹೋವನು ತನ್ನ ಪ್ರಜೆಯನ್ನೂ ನಿವಾಸಸ್ಥಾನವನ್ನೂ ಕನಿಕರಿಸಿ ಸಾವಕಾಶಮಾಡದೆ ತನ್ನ ದೂತರ ಮುಖಾಂತರವಾಗಿ ಅವರನ್ನು ಎಚ್ಚರಿಸುತ್ತಾ ಇದ್ದರೂ


ಯೆಹೋವನು ಅವರನ್ನು ತನ್ನ ಕಡೆಗೆ ತಿರುಗಿಸಿಕೊಳ್ಳುವದಕ್ಕಾಗಿ ಅವರ ಬಳಿಗೆ ಪ್ರವಾದಿಗಳನ್ನು ಕಳುಹಿಸಿ ಇವರ ಮುಖಾಂತರ ಎಷ್ಟು ಎಚ್ಚರಿಸಿದರೂ ಅವರು ಕಿವಿಗೊಡಲಿಲ್ಲ.


ಯೆಹೋವನು ದರ್ಶಿಗಳೆನಿಸಿಕೊಂಡ ತನ್ನ ಪ್ರವಾದಿಗಳ ಮುಖಾಂತರವಾಗಿ ಇಸ್ರಾಯೇಲ್ಯ ಯೆಹೂದ್ಯರಿಗೆ - ನೀವು ನಿಮ್ಮ ದುರಾಚಾರವನ್ನು ಬಿಟ್ಟು ನಾನು ನಿಮ್ಮ ಪಿತೃಗಳಿಗೂ ನನ್ನ ಸೇವಕರಾದ ಪ್ರವಾದಿಗಳ ಮುಖಾಂತರವಾಗಿ ನಿಮಗೂ ಕೊಟ್ಟಂಥ ನನ್ನ ಎಲ್ಲಾ ಆಜ್ಞಾನಿಯಮವಿಧಿಗಳನ್ನು ಕೈಕೊಂಡು ನಡೆಯಿರಿ ಎಂದು ಖಂಡಿತವಾಗಿ ಹೇಳಿದಾಗ


ಆತನನ್ನು ಕೋಪಗೊಳಿಸಿದರೆ ನೀವು ಯೊರ್ದನ್ ಹೊಳೆಯನ್ನು ದಾಟಿ ಸ್ವಾಧೀನಮಾಡಿಕೊಳ್ಳುವ ಆ ದೇಶದಲ್ಲಿ ಉಳಿಯದೆ ಬೇಗನೆ ನಾಶವಾಗಿ ಹೋಗುವಿರಿ ಎಂದು ಭೂಮ್ಯಾಕಾಶಗಳನ್ನು ಸಾಕ್ಷಿಗಳಾಗಿ ಕರೆದು ಎಚ್ಚರಿಸುತ್ತೇನೆ. ನೀವು ಆ ದೇಶದಲ್ಲಿ ಬಹುದಿವಸ ಇರದೆ ನಾಶವಾಗಿಯೇ ಹೋಗುವಿರಿ.


ಮೋಶೆ ಆರೋನರು ಫರೋಹನ ಬಳಿಗೆ ಹೋಗಿ ಅವನಿಗೆ - ಇಬ್ರಿಯರ ದೇವರಾಗಿರುವ ಯೆಹೋವನು ಆಜ್ಞಾಪಿಸುವದೇನಂದರೆ - ನೀನು ನನ್ನ ಮುಂದೆ ತಗ್ಗಿಸಿಕೊಳ್ಳದೆ ಇರುವದು ಇನ್ನು ಎಲ್ಲಿಯವರೆಗೋ? ನನ್ನನ್ನು ಆರಾಧಿಸುವಂತೆ ನನ್ನ ಜನರಿಗೆ ಅಪ್ಪಣೆ ಕೊಡು.


ಆತನು ಅವನಿಗೆ - ಒಳ್ಳೇದನ್ನು ಕುರಿತು ನನ್ನನ್ನು ಯಾಕೆ ಕೇಳುತ್ತೀ? ಒಳ್ಳೆಯವನು ಒಬ್ಬನೇ. ಆದರೆ ಆ ಜೀವದಲ್ಲಿ ಸೇರಬೇಕೆಂದಿದ್ದರೆ ದೇವರಾಜ್ಞೆಗಳಿಗೆ ಸರಿಯಾಗಿ ನಡೆದುಕೋ ಎಂದು ಹೇಳಿದ್ದಕ್ಕೆ


ಯೆಹೋವನು ಮನಸ್ಸೆಯನ್ನೂ ಅವನ ಪ್ರಜೆಗಳನ್ನೂ ಎಚ್ಚರಿಸಿದರೂ ಅವರು ಲಕ್ಷಿಸಲಿಲ್ಲ.


ನೀನು ಅನೇಕವರ್ಷಗಳ ತನಕ ಅವರ ವಿಷಯದಲ್ಲಿ ತಾಳಿಕೊಂಡು ಪ್ರವಾದಿಗಳ ಮುಖಾಂತರ ಮಾತಾಡುತ್ತಿದ್ದ ನಿನ್ನ ಆತ್ಮನಿಂದ ಅವರನ್ನು ಎಷ್ಟು ಎಚ್ಚರಿಸುತ್ತಿದ್ದರೂ ಅವರು ಕಿವಿಗೊಡದೆ ಹೋದ ಮೇಲೆ ನೀನು ಅವರನ್ನು ಅನ್ಯದೇಶಗಳವರ ಕೈಗೆ ಒಪ್ಪಿಸಿಬಿಟ್ಟಿ.


ಆ ಕಾಲದಲ್ಲಿ ಜನರು ಸಬ್ಬತ್‍ದಿವಸ ಯೆಹೂದ ದೇಶದಲ್ಲಿ ತೊಟ್ಟಿಯೊಳಗೆ ದ್ರಾಕ್ಷೆತುಳಿಯುವದನ್ನೂ ಕಣದ ಕಾಳನ್ನು ಕೂಡಿಸಿ ಆ ಕಾಳು ದ್ರಾಕ್ಷಾರಸ ದ್ರಾಕ್ಷೆ ಅಂಜೂರದ ಹಣ್ಣು ಈ ಮುಂತಾದವುಗಳನ್ನು ಕತ್ತೆಗಳ ಮೇಲೆ ಹೇರಿಕೊಂಡು ಆ ದಿನದಲ್ಲೇ ಯೆರೂಸಲೇವಿುಗೆ ತರುವದನ್ನೂ ಕಂಡು ಅವರು ಆ ಆಹಾರಪದಾರ್ಥಗಳನ್ನು ಮಾರುವದಕ್ಕೆ ಬಂದಾಗ ಅವರನ್ನು ಗದರಿಸಿದೆನು.


ಯೆಹೂದ್ಯರಲ್ಲಿ ಉಳಿದವರೇ, ಯೆಹೋವನು ನಿಮ್ಮನ್ನು ಕುರಿತು - ಐಗುಪ್ತಕ್ಕೆ ಹೋಗಬೇಡಿರಿ ಎಂದು ಅಪ್ಪಣೆಮಾಡಿದ್ದಾನೆ; ನಾನು ಈ ದಿವಸ [ಆ ಮಾತನ್ನು] ನಿಮಗೆ ಪ್ರಕಟಿಸಿದ್ದೇನೆ, ಚೆನ್ನಾಗಿ ತಿಳಿದಿರಲಿ.


ಯಾಕಂದರೆ ನೀವು ಹಟಹಿಡಿದು ಆಜ್ಞೆಗೆ ಒಳಗಾಗದವರೆಂಬದು ನನಗೆ ತಿಳಿದೇ ಇದೆ. ನಾನು ಇನ್ನೂ ಜೀವದಿಂದಿರುವಾಗಲೇ ನೀವು ಯೆಹೋವನಿಗೆ ವಿರೋಧವಾಗಿ ತಿರುಗಿ ಬಿದ್ದಿದ್ದೀರಿ; ನಾನು ಹೋದ ತರುವಾಯ ನೀವು ತಿರುಗಿ ಬೀಳುವದು ಮತ್ತಷ್ಟು ನಿಶ್ಚಯ.


ಯೆಹೋವನೆಂಬ ನಾನೇ ನಿಮ್ಮ ದೇವರಾಗಿದ್ದೇನೆಂದೂ ನೀವು ಅಮೋರಿಯರ ಮಧ್ಯದಲ್ಲಿ ವಾಸಿಸುವಾಗ ಅವರ ದೇವತೆಗಳನ್ನು ಪೂಜಿಸಬಾರದೆಂದೂ ಹೇಳಿದೆನು; ಆದರೆ ನೀವು ನನ್ನ ಮಾತನ್ನು ಕೇಳಲಿಲ್ಲ ಎಂಬದೇ ಅಂದನು.


ಅವರು ದೇವರಾದ ಯೆಹೋವನನ್ನು ನಂಬದೆ ಆತನ ಆಜ್ಞೆಗಳಿಗೆ ಮಣಿಯದೆ ಇದ್ದ ತಮ್ಮ ಹಿರಿಯರಂತೆ ಆತನಿಗೆ ಕಿವಿಗೊಡದೆ ಹೋದರು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು