ನೆಹೆಮೀಯ 9:30 - ಕನ್ನಡ ಸತ್ಯವೇದವು J.V. (BSI)30 ನೀನು ಅನೇಕವರ್ಷಗಳ ತನಕ ಅವರ ವಿಷಯದಲ್ಲಿ ತಾಳಿಕೊಂಡು ಪ್ರವಾದಿಗಳ ಮುಖಾಂತರ ಮಾತಾಡುತ್ತಿದ್ದ ನಿನ್ನ ಆತ್ಮನಿಂದ ಅವರನ್ನು ಎಷ್ಟು ಎಚ್ಚರಿಸುತ್ತಿದ್ದರೂ ಅವರು ಕಿವಿಗೊಡದೆ ಹೋದ ಮೇಲೆ ನೀನು ಅವರನ್ನು ಅನ್ಯದೇಶಗಳವರ ಕೈಗೆ ಒಪ್ಪಿಸಿಬಿಟ್ಟಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 ನೀನು ಅನೇಕ ವರ್ಷಗಳ ತನಕ ಅವರ ವಿಷಯದಲ್ಲಿ ತಾಳ್ಮೆಯುಳ್ಳವನಾಗಿ ಪ್ರವಾದಿಗಳ ಮುಖಾಂತರ ಮಾತನಾಡುತ್ತಿದ್ದ ನಿನ್ನ ಆತ್ಮನಿಂದ ಅವರನ್ನು ಎಷ್ಟು ಎಚ್ಚರಿಸುತ್ತಿದ್ದರೂ ಅವರು ಕಿವಿಗೊಡದೆ ಹೋದ ಮೇಲೆ ನೀನು ಅವರನ್ನು ಅನ್ಯದೇಶಗಳವರ ಕೈಗೆ ಒಪ್ಪಿಸಿಬಿಟ್ಟೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)30 ತಾಳಿಕೊಂಡಿರಿ ಅವರನು ನೀವೆಷ್ಟೋ ವರ್ಷಗಳ ತನಕ ಎಚ್ಚರಿಸಿದಿರಿ ನಿಮ್ಮಾತ್ಮ ಪ್ರೇರಣೆಯಿಂದ, ಪ್ರವಾದಿಗಳ ಮೂಲಕ ಕಿವಿಗೊಡದಾ ಜನರನು ಹೊರದೂಡಿದಿರಿ ಅನ್ಯದೇಶದ ಪರಿಯಂತ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್30 “ನೀನು ನಮ್ಮ ಪೂರ್ವಿಕರ ವಿಷಯದಲ್ಲಿ ತಾಳ್ಮೆಯಿಂದಿದ್ದೆ. ನಿನ್ನ ವಿಷಯದಲ್ಲಿ ತಪ್ಪಾಗಿ ನಡೆದುಕೊಳ್ಳಲು ಅನೇಕ ವರ್ಷಗಳವರೆಗೆ ಅವರನ್ನು ಬಿಟ್ಟುಬಿಟ್ಟೆ. ನೀನು ಅವರನ್ನು ನಿನ್ನ ಆತ್ಮನಿಂದ ಎಚ್ಚರಿಸಿದೆ; ಅವರನ್ನು ಎಚ್ಚರಿಸಲು ನಿನ್ನ ಪ್ರವಾದಿಗಳನ್ನು ಕಳುಹಿಸಿದೆ. ಆದರೆ ನಮ್ಮ ಪೂರ್ವಿಕರು ಕಿವಿಗೊಡಲಿಲ್ಲ. ಆದ್ದರಿಂದ ಪರರಾಜ್ಯದ ಜನರಿಗೆ ಅವರನ್ನು ಒಪ್ಪಿಸಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ30 ನೀವು ಅನೇಕ ವರ್ಷ ಅವರನ್ನು ತಾಳಿಕೊಂಡಿರಿ. ನಿಮ್ಮ ಪ್ರವಾದಿಗಳ ಮುಖಾಂತರ ನಿಮ್ಮ ಆತ್ಮನಿಂದ ಅವರನ್ನು ಎಚ್ಚರಿಸಿದಿರಿ. ಆದರೆ ಅವರು ಕಿವಿಗೊಡದೆ ಇದ್ದುದರಿಂದ ನೀವು ಅವರನ್ನು ಅನ್ಯದೇಶದವರ ಕೈಯಲ್ಲಿ ಒಪ್ಪಿಸಿದಿರಿ. ಅಧ್ಯಾಯವನ್ನು ನೋಡಿ |