Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 9:36 - ಕನ್ನಡ ಸತ್ಯವೇದವು J.V. (BSI)

36 ನೀನು ನಮ್ಮ ಪಿತೃಗಳಿಗೆ - ಇದರ ಉತ್ಪನ್ನವನ್ನೂ ಸಮೃದ್ಧಿಯನ್ನೂ ಅನುಭವಿಸಿರಿ ಎಂದು ಹೇಳಿ ಕೊಟ್ಟ ದೇಶದಲ್ಲೇ ನಾವು ದಾಸರಾಗಿರಬೇಕಾಗಿದೆ. ನಮ್ಮ ಪಾಪಗಳ ನಿವಿುತ್ತವಾಗಿ ನಿನ್ನಿಂದ ನಮ್ಮ ಮೇಲೆ ನೇವಿುಸಲ್ಪಟ್ಟ ರಾಜರಿಗೆ ಈ ದೇಶದ ಹೇರಳವಾದ ಹುಟ್ಟುವಳಿಯು ಹೋಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

36 ನೀನು ನಮ್ಮ ಪೂರ್ವಿಕರಿಗೆ, ಇದರ ಉತ್ಪನ್ನವನ್ನೂ, ಸಮೃದ್ಧಿಯನ್ನೂ ಅನುಭವಿಸಿರಿ ಎಂದು ಹೇಳಿ ಕೊಟ್ಟ ದೇಶದಲ್ಲೇ ನಾವು ದಾಸರಾಗಿರಬೇಕಾಗಿ ಬಂದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

36 ನಮ್ಮ ಪಿತೃಗಳಿಗೆ ನೀವೆಂದಿರಿ ‘ಸವಿಯಿರಿ ನಾಡಿನ ಫಲವನು, ಸಮೃದ್ಧಿಯನು’. ಆದರಿದೋ ಅನುಭವಿಸುತ್ತಿರುವೆವು ಈ ನಾಡಿನಲಿ ಗುಲಾಮಗಿರಿಯನು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

36 ಈಗ ನಾವು ಈ ನಾಡಿನಲ್ಲಿ ಗುಲಾಮರಾಗಿದ್ದೇವೆ. ಈ ನಾಡಿನ ಫಲವನ್ನು ಮತ್ತು ಇದರಲ್ಲಿ ಬೆಳೆಯುವ ಒಳ್ಳೆಯ ಫಸಲುಗಳನ್ನು ಅನುಭವಿಸಲು ನೀನು ಈ ನಾಡನ್ನು ನಮ್ಮ ಪೂರ್ವಿಕರಿಗೆ ಕೊಟ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

36 “ಈ ದಿವಸ ನಾವು ಗುಲಾಮರಾಗಿದ್ದೇವೆ. ಅದರ ಫಲವನ್ನೂ, ಅದರ ಉತ್ತಮವಾದದ್ದನ್ನೂ ತಿನ್ನುವುದಕ್ಕೆ ನೀವು ನಮ್ಮ ಪಿತೃಗಳಿಗೆ ಕೊಟ್ಟ ದೇಶದಲ್ಲಿ ನಾವು ಗುಲಾಮರಾಗಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 9:36
5 ತಿಳಿವುಗಳ ಹೋಲಿಕೆ  

ನಾವು ದಾಸರಾದರೂ ನಮ್ಮ ದೇವರು ನಮ್ಮ ದಾಸತ್ವದಲ್ಲಿ ನಮ್ಮನ್ನು ಕೈಬಿಡಲಿಲ್ಲ; ಹಾಳುಬಿದ್ದ ನಮ್ಮ ದೇವರ ಆಲಯವನ್ನು ತಿರಿಗಿ ಕಟ್ಟಿ ಭದ್ರಪಡಿಸುವದಕ್ಕೋಸ್ಕರ ನಮಗೆ ಉಜ್ಜೀವನ ಪ್ರಾಪ್ತವಾಗುವಂತೆಯೂ ಯೆಹೂದದಲ್ಲಿಯೂ ಯೆರೂಸಲೇವಿುನಲ್ಲಿಯೂ ನಮಗೆ ಅಭಯಾಶ್ರಯ ಸಿಕ್ಕುವಂತೆಯೂ ಪಾರಸಿಯ ರಾಜರ ಮುಂದೆ ನಮಗೆ ಕೃಪೆಯನ್ನು ಅನುಗ್ರಹಿಸಿದ್ದಾನೆ.


ಆಗ ನೀವು ಹಸಿವು ಬಾಯಾರಿಕೆಗಳುಳ್ಳವರಾಗಿ ಬಟ್ಟೆಯೂ ಏನೂ ಇಲ್ಲದೆ ಆ ಶತ್ರುಗಳಿಗೇ ಸೇವಕರಾಗಬೇಕಾಗುವದು. ಆತನು ಕಬ್ಬಿಣದ ನೊಗವನ್ನು ಹೇರಿಸಿ ನಿಮ್ಮನ್ನು ನಾಶಮಾಡುವನು.


ಆದರೂ ನನ್ನ ಸೇವೆಗೂ ಅನ್ಯರಾಜ್ಯಗಳ ಸೇವೆಗೂ ಇರುವ ವ್ಯತ್ಯಾಸವು ಇವರಿಗೆ ಗೊತ್ತಾಗುವಂತೆ ಇವರು ಶೀಶಕನಿಗೆ ದಾಸರಾಗಬೇಕು ಎಂದು ಹೇಳಿದನು.


ನಮ್ಮನ್ನು ಹಿಂದಟ್ಟುವವರು ನಮ್ಮ ಹೆಗ್ಗತ್ತನ್ನು ಹಿಡಿದಿದ್ದಾರೆ, ಬಳಲಿಹೋಗಿದ್ದೇವೆ, ಯಾವ ವಿಶ್ರಾಂತಿಯೂ ಇಲ್ಲ.


ನೀರು ನಮ್ಮದಾದರೂ ಕೊಂಡುಕೊಂಡು ಕುಡಿಯುತ್ತೇವೆ; ಸೌದೆ ಸ್ವಂತವಾದರೂ ಕ್ರಯಕ್ಕೆ ತೆಗೆದುಕೊಳ್ಳುತ್ತೇವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು