ನೆಹೆಮೀಯ 9:37 - ಕನ್ನಡ ಸತ್ಯವೇದವು J.V. (BSI)37 ನಮ್ಮ ಕಾಯಗಳ ಮೇಲೆಯೂ ಪಶುಗಳ ಮೇಲೆಯೂ ಅವರು ಅಧಿಕಾರ ನಡಿಸುತ್ತಾರೆ. ನಾವು ಮಹಾಸಂಕಟದಲ್ಲಿರುತ್ತೇವೆ ಅಯ್ಯೋ ಎಂದು ಪ್ರಾರ್ಥಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201937 ನಮ್ಮ ಪಾಪಗಳ ನಿಮಿತ್ತವಾಗಿ ನಿನ್ನಿಂದ ನಮ್ಮ ಮೇಲೆ ನೇಮಿಸಲ್ಪಟ್ಟ ರಾಜರಿಗೆ ಈ ದೇಶದ ಹೇರಳವಾದ ಹುಟ್ಟುವಳಿಯು ಹೋಗುತ್ತಾ ಇದೆ. ದೈಹಿಕವಾಗಿ ನಮ್ಮ ಮೇಲೆ ಹಾಗೂ ನಮ್ಮ ಪಶುಗಳ ಮೇಲೆ ಅವರು ಮನಸ್ಸಿಗೆ ಬಂದಂತೆ ಅಧಿಕಾರ ನಡಿಸುತ್ತಿದ್ದಾರೆ. ನಾವು ಮಹಾಸಂಕಟದಲ್ಲಿದ್ದೇವೆ” ಎಂದು ಪ್ರಾರ್ಥಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)37 ನಮ್ಮ ಪಾಪದ ನಿಮಿತ್ತ ಅಧೀನರಾಗಿಸಿದಿರಿ ಅನ್ಯರಾಜರಿಗೆ ಈ ನಾಡಿನ ಸಿರಿಸಂಪತ್ತು ಹರಿದುಹೋಗುತ್ತಿದೆ ಆ ಅರಸರಿಗೆ ನಮ್ಮೊಡಲು, ದನಕರುಗಳು, ಈಡಾಗಿವೆ ಅವರ ದಬ್ಬಾಳಿಕೆಗೆ ಅಕಟಕಟ, ನಾವು ಸಿಕ್ಕಿಕೊಂಡಿದ್ದೇವೆ, ಮಹಾಸಂಕಟಕೆ!” ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್37 ಫಸಲು ಇಲ್ಲಿ ಉತ್ತಮವಾಗಿದೆ. ನಾವು ಪಾಪಮಾಡಿದ್ದರಿಂದ ನಮ್ಮ ಸುಗ್ಗಿಯು ನಮ್ಮನ್ನಾಳುವ ರಾಜರಿಗೆ ಹೋಗಿಬಿಡುತ್ತದೆ. ಆ ರಾಜರುಗಳು ನಮ್ಮನ್ನೂ ನಮ್ಮ ದನಕರುಗಳನ್ನೂ ತಮ್ಮ ಹತೋಟಿಯೊಳಗೆ ಇಟ್ಟಿರುತ್ತಾರೆ. ನಮ್ಮನ್ನು ತಮಗೆ ಇಷ್ಟಬಂದಂತೆ ನಡಿಸುತ್ತಾರೆ. ಆದ್ದರಿಂದ ನಾವು ಬಹಳ ಸಂಕಟದಲ್ಲಿ ಸಿಕ್ಕಿಕೊಂಡಿದ್ದೇವೆ.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ37 ನಮ್ಮ ಪಾಪಗಳ ನಿಮಿತ್ತ ನೀವು ನಮ್ಮ ಮೇಲೆ ಇಟ್ಟ ಅರಸರಿಗೆ ಅದರ ಹುಟ್ಟುವಳಿ ಬಹಳವಾಗಿ ಹೋಗುತ್ತಿದೆ. ಇದಲ್ಲದೆ ಅವರು ತಮ್ಮ ಇಚ್ಛೆಯ ಪ್ರಕಾರ ನಮ್ಮ ಮೇಲೆಯೂ, ನಮ್ಮ ಪಶುಗಳ ಮೇಲೆಯೂ ಆಳುತ್ತಾರೆ. ನಾವು ಬಹು ಇಕ್ಕಟ್ಟಿನಲ್ಲಿದ್ದೇವೆ. ಅಧ್ಯಾಯವನ್ನು ನೋಡಿ |