ನ್ಯಾಯಸ್ಥಾಪಕರು 1:10 - ಕನ್ನಡ ಸತ್ಯವೇದವು J.V. (BSI)10 ಅವರು ಮುಂಚೆ ಕಿರ್ಯತರ್ಬ ಎಂಬ ಹೆಸರಿದ್ದ ಹೆಬ್ರೋನಿಗೆ ಹೋಗಿ ಅಲ್ಲಿದ್ದ ಕಾನಾನ್ಯರ ಮೇಲೆ ಬಿದ್ದು ಅವರಲ್ಲಿ ಶೇಷೈ, ಅಹೀಮನ್, ತಲ್ಮೈ ಎಂಬವರನ್ನು ಹೊಡೆದು ಬಿಟ್ಟರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಅವರು ಮೊದಲು ಕಿರ್ಯತರ್ಬ ಎಂಬ ಹೆಸರಿದ್ದ ಹೆಬ್ರೋನಿಗೆ ಹೋಗಿ ಅಲ್ಲಿದ್ದ ಕಾನಾನ್ಯರ ಮೇಲೆ ಬಿದ್ದು, ಅವರಲ್ಲಿ ಶೇಷೈ, ಅಹೀಮನ್, ತಲ್ಮೈ ಎಂಬುವರನ್ನು ಸೋಲಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ‘ಕಿರ್ಯತರ್ಬ’ ಎಂದು ಈ ಮುಂದೆ ಹೆಸರುಗೊಂಡಿದ್ದ ಹೆಬ್ರೋನಿಗೆ ಹೋಗಿ ಅಲ್ಲಿದ್ದ ಕಾನಾನ್ಯರ ಮೇಲೆ ದಾಳಿಮಾಡಿ ಅವರಲ್ಲಿ ಶೇಷೈ, ಅಹೀಮನ್, ತಲ್ಮೈ ಎಂಬವರನ್ನು ಸೋಲಿಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ತರುವಾಯ ಯೆಹೂದ್ಯರು ಕಿರ್ಯತರ್ಬವೆಂಬ ಹೆಬ್ರೋನ್ ನಗರದಲ್ಲಿದ್ದ ಕಾನಾನ್ಯರೊಂದಿಗೆ ಯುದ್ಧಮಾಡಲು ಹೋದರು. ಯೆಹೂದ್ಯರು ಶೇಷೈ, ಅಹೀಮನ್ ಮತ್ತು ತಲ್ಮೈ ಎಂಬವರನ್ನು ಸೋಲಿಸಿಬಿಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಯೆಹೂದ ಗೋತ್ರದವರು ಪೂರ್ವದಲ್ಲಿ ಕಿರ್ಯತ್ ಅರ್ಬ ಎಂಬ ಹೆಸರಿದ್ದ ಹೆಬ್ರೋನಿನಲ್ಲಿ ವಾಸವಾಗಿದ್ದ ಕಾನಾನ್ಯರ ಮೇಲೆ ಹೋಗಿ ಶೇಷೈ, ಅಹೀಮನ್, ತಲ್ಮೈರನ್ನು ಸೋಲಿಸಿದರು. ಅಧ್ಯಾಯವನ್ನು ನೋಡಿ |