ನ್ಯಾಯಸ್ಥಾಪಕರು 1:13 - ಕನ್ನಡ ಸತ್ಯವೇದವು J.V. (BSI)13 ಅವನ ತಮ್ಮನೂ ಕೆನಜನ ಮಗನೂ ಆದ ಒತ್ನೀಯೇಲನು ಅದನ್ನು ಹಿಡಿದನು. ಆಗ ಕಾಲೇಬನು ತನ್ನ ಮಗಳಾದ ಅಕ್ಷಾ ಎಂಬಾಕೆಯನ್ನು ಅವನಿಗೆ ಮದುವೆಮಾಡಿಕೊಟ್ಟನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಅವನ ತಮ್ಮನೂ, ಕೆನಜನ ಮಗನೂ ಆದ ಒತ್ನೀಯೇಲನು ಕಿರ್ಯತ್ ಸೇಫೆರನ್ನು ವಶಪಡಿಸಿಕೊಂಡನು. ಆಗ ಕಾಲೇಬನು ತನ್ನ ಮಗಳಾದ ಅಕ್ಷಾಳನ್ನು ಅವನಿಗೆ ಮದುವೆಮಾಡಿಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಅಂತೆಯೇ ಅವನ ತಮ್ಮನೂ ಕೆನಜನ ಮಗನೂ ಆದ ಒತ್ನೀಯೇಲನು ಅದನ್ನು ಹಿಡಿದುಕೊಂಡಾಗ ಕಾಲೇಬನು ತನ್ನ ಮಗಳು ಅಕ್ಷಾ ಎಂಬಾಕೆಯನ್ನು ಆತನಿಗೆ ಮದುವೆಮಾಡಿಕೊಟ್ಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಕಾಲೇಬನಿಗೆ ಕೆನಜನೆಂಬ ತಮ್ಮನಿದ್ದನು. ಕೆನಜನಿಗೆ ಒತ್ನೀಯೇಲನೆಂಬ ಮಗನಿದ್ದನು. ಒತ್ನೀಯೇಲನು ಕಿರ್ಯತ್‌ಸೇಫೆರನ್ನು ಗೆದ್ದುಕೊಂಡನು. ಅದಕ್ಕಾಗಿ ಕಾಲೇಬನು ತನ್ನ ಮಗಳಾದ ಅಕ್ಷಾಳನ್ನು ಒತ್ನೀಯೇಲನ ಜೊತೆ ಮದುವೆ ಮಾಡಿಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಆಗ ಕಾಲೇಬನ ತಮ್ಮನಾದ ಕೆನಾಜನ ಮಗನಾದ ಒತ್ನಿಯೇಲನು ಅದನ್ನು ಹಿಡಿದನು. ಅನಂತರ ಕಾಲೇಬನು ತನ್ನ ಮಗಳಾದ ಅಕ್ಸಾ ಎಂಬಾಕೆಯನ್ನು ಅವನಿಗೆ ಮದುವೆ ಮಾಡಿಕೊಟ್ಟನು. ಅಧ್ಯಾಯವನ್ನು ನೋಡಿ |