ನ್ಯಾಯಸ್ಥಾಪಕರು 1:15 - ಕನ್ನಡ ಸತ್ಯವೇದವು J.V. (BSI)15 ಆಕೆಯು - ನನಗೊಂದು ದಾನಕೊಡಬೇಕು; ನನ್ನನ್ನು ಬೆಗ್ಗಾಡಿಗೆ ಕೊಟ್ಟುಬಿಟ್ಟಿಯಲ್ಲಾ, ಬುಗ್ಗೆಗಳಿರುವ ಸ್ಥಳವನ್ನು ನನಗೆ ಕೊಡು ಅಂದಳು. ಆಗ ಅವನು ಆಕೆಗೆ ಮೇಲಣ ಮತ್ತು ಕೆಳಗಣ ಬುಗ್ಗೆಗಳನ್ನು ಕೊಟ್ಟನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಆಕೆಯು, “ನನಗೊಂದು ದಾನಕೊಡಬೇಕು; ನೀನು ನನ್ನನ್ನು ದಕ್ಷಿಣ ಪ್ರಾಂತ್ಯಕ್ಕೆ ಕೊಟ್ಟುಬಿಟ್ಟಿಯಲ್ಲಾ, ಬುಗ್ಗೆಗಳಿರುವ ಸ್ಥಳವನ್ನು ನನಗೆ ಕೊಡು” ಅಂದಳು. ಆಗ ಅವನು ಆಕೆಗೆ ಮೇಲಣ ಬುಗ್ಗೆ ಮತ್ತು ಕೆಳಗಣ ಪ್ರದೇಶದ ಬುಗ್ಗೆಗಳನ್ನು ಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಬುಗ್ಗೆಗಳಿರುವ ಭೂಮಿಯನ್ನು ದಾನವಾಗಿ ಕೊಡಿ,” ಎಂದಳು. ಕಾಲೇಬನು ಆಕೆಗೆ ಮೇಲಿನ ಹಾಗು ಕೆಳಗಿನ ಬುಗ್ಗೆಗಳನ್ನು ದಾನ ಮಾಡಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಅದಕ್ಕೆ ಅವಳು, “ನನಗೊಂದು ದಾನ ಕೊಡಬೇಕು. ನೀನು ನನಗೆ ನೆಗೆವಿನಲ್ಲಿ ನೀರಿಲ್ಲದ ಮರುಭೂಮಿಯನ್ನು ಕೊಟ್ಟಿರುವೆ. ದಯವಿಟ್ಟು ನನಗೆ ಸ್ವಲ್ಪ ನೀರಿನ ಬುಗ್ಗೆಗಳಿರುವ ಭೂಮಿಯನ್ನು ಕೊಡು” ಎಂದಳು. ಅವಳು ಕೇಳಿಕೊಂಡಂತೆಯೇ ಕಾಲೇಬನು ಅವಳಿಗೆ ಮೇಲಿನ ಮತ್ತು ಕೆಳಗಿನ ಬುಗ್ಗೆಗಳನ್ನು ಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಅದಕ್ಕೆ ಅವಳು ಅವನಿಗೆ, “ನನಗೆ ಒಂದು ಸಹಾಯಮಾಡಬೇಕು. ಮೊದಲು ದಕ್ಷಿಣ ಹೊಲವನ್ನು ನೀನು ನನಗೆ ಕೊಟ್ಟೆ; ನೀರಿನ ಬುಗ್ಗೆಗಳನ್ನು ಸಹ ನನಗೆ ಕೊಡು,” ಎಂದಳು. ಆಗ ಕಾಲೇಬನು ಅವಳಿಗೆ ಮೇಲಿನ ಹಾಗೂ ಕೆಳಗಿನ ನೀರಿನ ಬುಗ್ಗೆಗಳನ್ನು ಕೊಟ್ಟನು. ಅಧ್ಯಾಯವನ್ನು ನೋಡಿ |