Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 1:16 - ಕನ್ನಡ ಸತ್ಯವೇದವು J.V. (BSI)

16 ಕೇನ್ಯನೂ ಮೋಶೆಯ ಮಾವನೂ ಆದ [ಹೋಬಾಬನ] ವಂಶದವರು ಖರ್ಜೂರ ನಗರದಿಂದ ಹೊರಟು ಯೆಹೂದ್ಯರ ಜೊತೆಯಲ್ಲಿ ಅರಾದಿನ ದಕ್ಷಿಣದಲ್ಲಿರುವ ಯೆಹೂದ ಅರಣ್ಯಕ್ಕೆ ಬಂದು ಅಲ್ಲಿನ ಜನರ ಸಂಗಡ ವಾಸಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಮೋಶೆಯ ಮಾವನಾದ ಕೇನ್ಯನ ವಂಶದವರು ಖರ್ಜೂರ ನಗರದಿಂದ ಹೊರಟು ಯೆಹೂದ್ಯರ ಜೊತೆಯಲ್ಲಿ ಅರಾದಿನ ದಕ್ಷಿಣದಲ್ಲಿರುವ ಯೆಹೂದ ಅಡವಿಗೆ ಬಂದು ಅಲ್ಲಿನ ಜನರ ಸಂಗಡ ವಾಸಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಕೇನ್ಯನೂ ಮೋಶೆಯ ಮಾವನೂ ಆದ ಹೋಬಾಬನ ವಂಶದವರು ಖರ್ಜೂರ ನಗರದಿಂದ ಹೊರಟು ಯೆಹೂದ ಕುಲದವರ ಜೊತೆಯಲ್ಲಿ ಆರಾದಿನ ದಕ್ಷಿಣದಲ್ಲಿರುವ ಯೆಹೂದ ಮರುಭೂಮಿಗೆ ಬಂದು ಅಲ್ಲಿಯ ಜನರ ಸಂಗಡ ವಾಸಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಕೇನ್ಯರು (ಕೇನ್ಯರು ಮೋಶೆಯ ಮಾವನ ಗೋತ್ರದವರಾಗಿದ್ದರು.) ಖರ್ಜೂರ ನಗರವನ್ನು (ಜೆರಿಕೊವನ್ನು) ಬಿಟ್ಟು ಯೆಹೂದ್ಯರ ಸಂಗಡ ಹೋದರು. ಅವರು ನೆಗೆವಿನಲ್ಲಿ ಅರಾದ್ ನಗರದ ಹತ್ತಿರವಿದ್ದ ಯೆಹೂದ ಅರಣ್ಯಕ್ಕೆ ಬಂದು ಅಲ್ಲಿನ ಜನರ ಸಂಗಡ ವಾಸ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಮೋಶೆಯ ಮಾವನಾದ ಕೇನ್ಯನ ಮಕ್ಕಳು ಖರ್ಜೂರ ಗಿಡಗಳ ಪಟ್ಟಣದಿಂದ ಹೊರಟು, ಯೆಹೂದ ಗೋತ್ರದವರ ಸಂಗಡ ಅರಾದಿಗೆ ದಕ್ಷಿಣಕ್ಕಿರುವ ಯೆಹೂದದ ಗೋತ್ರದವರ ಮರುಭೂಮಿಗೆ ಬಂದು, ಅಲ್ಲಿನ ಜನರ ಸಂಗಡ ವಾಸವಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 1:16
26 ತಿಳಿವುಗಳ ಹೋಲಿಕೆ  

(ಕೇನ್ಯನಾದ ಹೆಬೆರನು ಮೋಶೆಯ ಮಾವನಾದ ಹೋಬಾಬನ ವಂಶದ ಉಳಿದ ಕೇನ್ಯರನ್ನು ಅಗಲಿ ಕೆದೆಷಿನ ಹತ್ತಿರ ಇರುವ ಚಾನನ್ನೀಮೆಂಬ ಊರಿನ ಏಲೋನ್ ವೃಕ್ಷದವರೆಗೆ ಬಂದು ಅಲ್ಲಿ ಗುಡಾರಹಾಕಿಕೊಂಡಿದ್ದನು.)


ಆದರೆ ಅವನು ಕೇನ್ಯರಿಗೆ - ನೀವು ಅಮಾಲೇಕ್ಯರನ್ನು ಬಿಟ್ಟು ಹೋಗಿರಿ; ಇಲ್ಲವಾದರೆ ನೀವೂ ಅವರೊಡನೆ ನಾಶವಾದೀರಿ; ಇಸ್ರಾಯೇಲ್ಯರು ಐಗುಪ್ತದಿಂದ ಬರುತ್ತಿದ್ದಾಗ ನೀವು ಅವರಿಗೆ ದಯೆತೋರಿಸಿದಿರಲ್ಲಾ ಎಂದು ಹೇಳಿ ಕಳುಹಿಸಿದನು. ಅದರಂತೆಯೇ ಅವರು ಅಮಾಲೇಕ್ಯರನ್ನು ಬಿಟ್ಟುಹೋದರು.


ದಕ್ಷಿಣಪ್ರದೇಶ, ಚೋಗರೂರಿನ ತನಕ ಯೆರಿಕೋ ಎಂಬ ಖರ್ಜೂರಗಳ ಪಟ್ಟಣದ ಸುತ್ತಲಿರುವ ಮೈದಾನ ಇದನ್ನೆಲ್ಲಾ ಅವನಿಗೆ ತೋರಿಸಿ -


ಕಾನಾನ್‍ದೇಶದ ದಕ್ಷಿಣಪ್ರಾಂತ್ಯದಲ್ಲಿದ್ದ ಕಾನಾನ್ಯನಾದ ಅರಾದ್ ಪಟ್ಟಣದ ಅರಸನು ಅತಾರೀಮ್ ಮಾರ್ಗವಾಗಿ ಇಸ್ರಾಯೇಲ್ಯರು ಬರುತ್ತಾರೆಂಬ ವರ್ತಮಾನವನ್ನು ಕೇಳಿದಾಗ ಅವನು ಅವರ ಮೇಲೆ ಯುದ್ಧಮಾಡಿ ಕೆಲವರನ್ನು ಸೆರೆಹಿಡಿದನು.


ಇವನು ಅಮ್ಮೋನಿಯರನ್ನೂ ಅಮಾಲೇಕ್ಯರನ್ನೂ ಕೂಡಿಸಿಕೊಂಡು ಹೊರಟು ಬಂದು ಇಸ್ರಾಯೇಲ್ಯರನ್ನು ಸೋಲಿಸಿ ಖರ್ಜೂರನಗರವನ್ನು ಹಿಡಿದನು.


ಹಾಚೋರಿನ ಅರಸನಾದ ಯಾಬೀನನಿಗೂ ಕೇನ್ಯನಾದ ಹೆಬೆರನ ಮನೆಯವರಿಗೂ ಸಮಾಧಾನವಿದ್ದದರಿಂದ ಸೀಸೆರನು ಕಾಲುನಡೆಯಾಗಿ ಕೇನ್ಯನಾದ ಹೆಬೆರನ ಹೆಂಡತಿಯಾದ ಯಾಯೇಲಳ ಗುಡಾರದ ಕಡೆಗೆ ಹೋದನು.


ನೀನು ರೇಕಾಬನ ಮನೆತನದವರ ಬಳಿಗೆ ಹೋಗಿ ಅವರ ಸಂಗಡ ಮಾತಾಡಿ ಅವರನ್ನು ಯೆಹೋವನ ಆಲಯದ ಒಂದು ಕೋಣೆಯೊಳಕ್ಕೆ ಕರೆದು ದ್ರಾಕ್ಷಾರಸವನ್ನು ಕುಡಿಯುವದಕ್ಕೆ ಕೊಡು.


ಆ ಕಾಲದಲ್ಲಿ ಅರಸನಾದ ಆಹಾಜನು ತನಗೆ ಸಹಾಯಮಾಡಬೇಕೆಂದು ಅಶ್ಶೂರದ ರಾಜರನ್ನು ದೂತರ ಮುಖಾಂತರ ಬೇಡಿಕೊಂಡನು.


ಐದನೆಯವನು ರದ್ದೈ; ಆರನೆಯವನು ಓಚೆಮ್; ಏಳನೆಯವನು ದಾವೀದ್.


ಹೊರ್ಮದ ಅರಸನು 1; ಅರಾದಿನ ಅರಸನು 1;


ತರುವಾಯ ಮೋಶೆ ತನ್ನ ಮಾವನಿಗೆ ಅಪ್ಪಣೆ ಕೊಡಲಾಗಿ ಅವನು ಸ್ವದೇಶಕ್ಕೆ ಹೊರಟುಹೋದನು.


ಅದಲ್ಲದೆ ಮೋಶೆಯ ಮಾವನಾದ ಇತ್ರೋವನು ದೇವರಿಗೆ ಸರ್ವಾಂಗಹೋಮ ಯಜ್ಞಗಳನ್ನು ಸಮರ್ಪಿಸಲಾಗಿ ಆರೋನನೂ ಇಸ್ರಾಯೇಲ್ಯರ ಹಿರಿಯರೆಲ್ಲರೂ ಅವನ ಸಂಗಡ ದೇವರ ಸನ್ನಿಧಿಯಲ್ಲಿ ಸಹಭೋಜನವನ್ನು ಮಾಡುವದಕ್ಕೆ ಬಂದರು.


ಅವನು ತನ್ನ ಮಾವನನ್ನು ಎದುರುಗೊಳ್ಳುವದಕ್ಕೆ ಹೊರಟು ವಂದಿಸಿ ಮುದ್ದಿಟ್ಟನು. ಅವರು ಪರಸ್ಪರ ಯೋಗಕ್ಷೇಮವನ್ನು ವಿಚಾರಿಸಿದ ಮೇಲೆ ಡೇರೆಯೊಳಕ್ಕೆ ಬಂದರು.


ದೇವರು ಮೋಶೆಗೂ ತನ್ನ ಜನರಾದ ಇಸ್ರಾಯೇಲ್ಯರಿಗೂ ಮಹೋಪಕಾರಗಳನ್ನು ಮಾಡಿದ್ದನ್ನೂ ಯೆಹೋವನು ಇಸ್ರಾಯೇಲ್ಯರನ್ನು ಐಗುಪ್ತದೇಶದಿಂದ ಕರತಂದದ್ದನ್ನೂ ವಿುದ್ಯಾನ್ಯರ ಆಚಾರ್ಯನೂ ಮೋಶೆಯ ಮಾವನೂ ಆಗಿದ್ದ ಇತ್ರೋವನು ಕೇಳಿದಾಗ


ಆಮೇಲೆ ಮೋಶೆ ತನ್ನ ಮಾವನಾದ ಇತ್ರೋನನ ಬಳಿಗೆ ಹಿಂದಿರುಗಿ ಬಂದು - ಅಪ್ಪಣೆಯಾದರೆ ನಾನು ಐಗುಪ್ತದೇಶದಲ್ಲಿರುವ ಸ್ವಜನರ ಬಳಿಗೆ ತಿರಿಗಿ ಹೋಗಿ ಅವರು ಜೀವದಿಂದಿದ್ದಾರೋ ಏನೋ ನೋಡುವೆನು ಎಂಬದಾಗಿ ಅವನಿಗೆ ಹೇಳಲು ಇತ್ರೋನನು - ನೀನು ಹೋಗಿ ಬರಬಹುದು ಅಂದನು.


ಮೋಶೆ ತನ್ನ ಮಾವನಾಗಿರುವ ವಿುದ್ಯಾನ್ಯರ ಆಚಾರ್ಯನಾದ ಇತ್ರೋನನ ಮಂದೆಯನ್ನು ಮೇಯಿಸುತ್ತಿರುವಾಗ ಆ ಮಂದೆಯನ್ನು ಕಾಡಿನ ಹಿಂಭಾಗಕ್ಕೆ ನಡಿಸಿಕೊಂಡು ಹೋರೇಬ್ ಎಂಬ ದೇವರ ಬೆಟ್ಟಕ್ಕೆ ಬಂದನು.


ಆ ದಿನಗಳಲ್ಲಿ ಸ್ನಾನಿಕನಾದ ಯೋಹಾನನು -


ಆಕೆಯು - ನನಗೊಂದು ದಾನಕೊಡಬೇಕು; ನನ್ನನ್ನು ಬೆಗ್ಗಾಡಿಗೆ ಕೊಟ್ಟುಬಿಟ್ಟಿಯಲ್ಲಾ, ಬುಗ್ಗೆಗಳಿರುವ ಸ್ಥಳವನ್ನು ನನಗೆ ಕೊಡು ಅಂದಳು. ಆಗ ಅವನು ಆಕೆಗೆ ಮೇಲಣ ಮತ್ತು ಕೆಳಗಣ ಬುಗ್ಗೆಗಳನ್ನು ಕೊಟ್ಟನು.


ಆಕೀಷನು ಅವನನ್ನು - ಈಹೊತ್ತು ಯಾವ ಪ್ರಾಂತದವರನ್ನು ಸೂರೆಮಾಡಿಕೊಂಡು ಬಂದಿರಿ ಎಂದು ಕೇಳುವನು. ದಾವೀದನು ಅವನಿಗೆ - ದಕ್ಷಿಣಪ್ರಾಂತದಲ್ಲಿರುವ ಯೆಹೂದ್ಯರು, ಎರಹ್ಮೇಲ್ಯರು, ಕೇನ್ಯರು ಇವರಲ್ಲಿ ಯಾರ ಹೆಸರನ್ನಾದರೂ ಹೇಳುವನು.


ರಾಕಾಲಿನವರು, ಎರಹ್ಮೇಲ್ಯರು, ಕೇನ್ಯರು,


ನಾನು ಅಬ್ರಹಾಮ್ ಇಸಾಕ್ ಯಾಕೋಬರಿಗೆ ಪ್ರಮಾಣಮಾಡಿ ಅವರ ಸಂತತಿಯವರಿಗೆ ಕೊಡುವೆನೆಂದು ವಾಗ್ದಾನಮಾಡಿದ ದೇಶವು ಇದೇ; ನಿನಗೆ ಪ್ರತ್ಯಕ್ಷವಾಗಿ ತೋರಿಸಿದ್ದೇನೆ. ಆದರೆ ನೀನು ಹೊಳೆದಾಟಿ ಅಲ್ಲಿಗೆ ಹೋಗಕೂಡದೆಂದು ಹೇಳಿದನು.


ಬೆನ್ಯಾಮೀನ್ ಗೋತ್ರಗಳಿಗೆ ದೊರಕಿದ ಪಟ್ಟಣಗಳಾವವಂದರೆ - ಯೆರಿಕೋ, ಬೇತ್‍ಹೊಗ್ಲಾ,


ಯಾಬೇಚಿನಲ್ಲಿ ವಾಸಿಸುವ ಕುಲಕರಣಿ ಕುಟುಂಬದವರಾದ ತಿರ್ರಾತ್ಯರು, ಶಿಮ್ಗಾತ್ಯರು, ಸೂಕಾತ್ಯರು ಇವರು ರೇಕಾಬನ ಮನೆಯವರ ಮೂಲಪುರುಷನಾಗಿರುವ ಹಮತನಿಂದ ಉತ್ಪನ್ನರಾದ ಕೇನ್ಯರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು