ನ್ಯಾಯಸ್ಥಾಪಕರು 1:19 - ಕನ್ನಡ ಸತ್ಯವೇದವು J.V. (BSI)19 ಯೆಹೋವನು ಯೆಹೂದ್ಯರ ಸಂಗಡ ಇದ್ದದರಿಂದ ಅವರು ಪರ್ವತಪ್ರದೇಶಗಳನ್ನೆಲ್ಲಾ ಸ್ವತಂತ್ರಿಸಿಕೊಂಡರು. ಆದರೆ ತಗ್ಗಿನ ಪ್ರದೇಶಗಳಲ್ಲಿ ವಾಸಿಸುವವರಿಗೆ ಕಬ್ಬಿಣದ ರಥಗಳಿದ್ದದರಿಂದ ಅವರನ್ನು ಹೊರಡಿಸುವದು ಆಗಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಯೆಹೋವನು ಯೆಹೂದ್ಯರ ಸಂಗಡ ಇದ್ದುದರಿಂದ ಅವರು ಪರ್ವತಪ್ರದೇಶಗಳನ್ನೆಲ್ಲಾ ಸ್ವಾಧೀನಪಡಿಸಿಕೊಂಡರು. ಆದರೆ ತಗ್ಗಿನ ಪ್ರದೇಶಗಳಲ್ಲಿ ವಾಸಿಸುವವರಿಗೆ ಕಬ್ಬಿಣದ ರಥಗಳಿದ್ದುದರಿಂದ ಅವರನ್ನು ಹೊರಡಿಸುವುದಕ್ಕೆ ಆಗಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಸರ್ವೇಶ್ವರ ಯೆಹೂದಕುಲದವರ ಸಂಗಡ ಇದ್ದುದರಿಂದ ಅವರು ಪರ್ವತ ಪ್ರದೇಶಗಳನ್ನೆಲ್ಲಾ ಸ್ವತಂತ್ರಿಸಿಕೊಂಡರು. ಆದರೆ ತಗ್ಗಿನ ಪ್ರದೇಶಗಳಲ್ಲಿ ವಾಸಿಸುವವರಿಗೆ ಕಬ್ಬಿಣ ರಥಗಳಿದ್ದುದರಿಂದ ಅವರನ್ನು ಹೊರಗಟ್ಟಲು ಆಗಲಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಯೆಹೂದ್ಯರು ಯುದ್ಧಮಾಡುವಾಗ ಯೆಹೋವನು ಅವರ ಸಂಗಡ ಇದ್ದುದರಿಂದ ಅವರು ಬೆಟ್ಟಪ್ರದೇಶವನ್ನೆಲ್ಲಾ ಸ್ವಾಧೀನಪಡಿಸಿಕೊಂಡರು. ಆದರೆ ಕಣಿವೆಯಲ್ಲಿ ವಾಸ ಮಾಡುತ್ತಿದ್ದ ಜನರಲ್ಲಿ ಕಬ್ಬಿಣದ ರಥಗಳಿದ್ದದರಿಂದ ಯೆಹೂದ್ಯರು ಅವರನ್ನು ಸೋಲಿಸಲಾಗಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಯೆಹೋವ ದೇವರು ಯೆಹೂದ ಗೋತ್ರದವರ ಸಂಗಡ ಇದ್ದುದರಿಂದ, ಅವರು ಬೆಟ್ಟದ ಪ್ರದೇಶಗಳನ್ನೆಲ್ಲಾ ಸ್ವಾಧೀನಪಡಿಸಿಕೊಂಡರು. ಆದರೆ ತಗ್ಗಿನ ನಿವಾಸಿಗಳಿಗೆ ಕಬ್ಬಿಣದ ರಥಗಳಿದ್ದುದರಿಂದ, ಅವರು ಅವರನ್ನು ಹೊರಡಿಸಲಾರದೆ ಹೋದರು. ಅಧ್ಯಾಯವನ್ನು ನೋಡಿ |
ಹೀಗಿರಲಾಗಿ ಯೆಹೋವನು ಆ ದಿನದಲ್ಲಿ ಸೂಚಿಸಿದಂಥ ಈ ಪರ್ವತಪ್ರದೇಶವನ್ನು ನನಗೆ ಕೊಡು. ಇದರಲ್ಲಿ ಉನ್ನತ ಪುರುಷರಿರುತ್ತಾರೆಂದೂ ಇದರ ಪಟ್ಟಣಗಳು ದೊಡ್ಡವೂ ಕೋಟೆಕೊತ್ತಲುಳ್ಳವುಗಳೂ ಆಗಿವೆ ಎಂದೂ ಆ ಕಾಲದಲ್ಲಿ ನೀನು ಕೇಳಿದಿಯಲ್ಲಾ. ಅವರೆಲ್ಲರನ್ನೂ ಓಡಿಸಿ ಬಿಡುವದಕ್ಕೋಸ್ಕರ ಯೆಹೋವನು ತನ್ನ ಮಾತಿಗನುಸಾರವಾಗಿ ನನಗೆ ಸಹಾಯ ಮಾಡುವನೆಂದು ನಿರೀಕ್ಷಿಸಿಕೊಂಡಿದ್ದೇನೆ ಅಂದನು.