Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 1:20 - ಕನ್ನಡ ಸತ್ಯವೇದವು J.V. (BSI)

20 ಮೋಶೆ ಆಜ್ಞಾಪಿಸಿದಂತೆ ಅವರು ಕಾಲೇಬನಿಗೆ ಹೆಬ್ರೋನ್ ಪಟ್ಟಣವನ್ನು ಕೊಟ್ಟರು; ಅವನು ಅನಾಕನ ಮೂರು ಮಂದಿ ಮಕ್ಕಳನ್ನು ಅಲ್ಲಿಂದ ಅಟ್ಟಿಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಮೋಶೆ ಆಜ್ಞಾಪಿಸಿದಂತೆ ಅವರು ಕಾಲೇಬನಿಗೆ ಹೆಬ್ರೋನ್ ಪಟ್ಟಣವನ್ನು ಕೊಟ್ಟರು. ಅವನು ಅನಾಕನ ಮೂರು ಮಂದಿ ಮಕ್ಕಳನ್ನು ಅಲ್ಲಿಂದ ಓಡಿಸಿಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಮೋಶೆ ಆಜ್ಞಾಪಿಸಿದಂತೆ ಅವರು ಕಾಲೇಬನಿಗೆ ಹೆಬ್ರೋನ್ ಪಟ್ಟಣವನ್ನು ಕೊಟ್ಟರು; ಅವನು ಅನಾಕನ ಮೂರು ಮಂದಿ ಮಕ್ಕಳನ್ನು ಅಲ್ಲಿಂದ ಅಟ್ಟಿಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಹೆಬ್ರೋನಿಗೆ ಸಮೀಪದಲ್ಲಿರುವ ಭೂಮಿಯನ್ನು ಕಾಲೇಬನಿಗೆ ಕೊಡುವುದಾಗಿ ಮೋಶೆಯು ವಾಗ್ದಾನ ಮಾಡಿದ್ದನು. ಆದ್ದರಿಂದ ಆ ಭೂಮಿಯನ್ನು ಕಾಲೇಬನ ಕುಟುಂಬದವರಿಗೆ ಕೊಡಲಾಯಿತು. ಕಾಲೇಬನ ಜನರು ಅನಾಕನ ಮೂರು ಜನ ಮಕ್ಕಳನ್ನು ಆ ಪ್ರದೇಶದಿಂದ ಬಲವಂತವಾಗಿ ಹೊರಗಟ್ಟಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಮೋಶೆಯು ಹೇಳಿದ ಪ್ರಕಾರ, ಅವರು ಹೆಬ್ರೋನನ್ನು ಕಾಲೇಬನಿಗೆ ಕೊಟ್ಟರು. ಅವರು ಅನಾಕನ ಮೂವರು ಮಕ್ಕಳನ್ನು ಅಲ್ಲಿಂದ ಹೊರಡಿಸಿಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 1:20
10 ತಿಳಿವುಗಳ ಹೋಲಿಕೆ  

ಅವರು ಮುಂಚೆ ಕಿರ್ಯತರ್ಬ ಎಂಬ ಹೆಸರಿದ್ದ ಹೆಬ್ರೋನಿಗೆ ಹೋಗಿ ಅಲ್ಲಿದ್ದ ಕಾನಾನ್ಯರ ಮೇಲೆ ಬಿದ್ದು ಅವರಲ್ಲಿ ಶೇಷೈ, ಅಹೀಮನ್, ತಲ್ಮೈ ಎಂಬವರನ್ನು ಹೊಡೆದು ಬಿಟ್ಟರು.


ಯೆಫುನ್ನೆಯ ಮಗನಾದ ಕಾಲೇಬನೊಬ್ಬನೇ ಯೆಹೋವನನ್ನು ಮನಃಪೂರ್ವಕವಾಗಿ ಅನುಸರಿಸಿದದರಿಂದ ಅವನೇ ಅದನ್ನು ನೋಡುವನು; ಅವನು ಸಂಚರಿಸಿದ ಪ್ರದೇಶವನ್ನು ಅವನಿಗೂ ಅವನ ಸಂತತಿಯವರಿಗೂ ಕೊಡುವೆನೆಂದು ಹೇಳಿದನು.


ನನ್ನ ದಾಸನಾದ ಕಾಲೇಬನು ಅಂಥ ಮನಸ್ಸುಳ್ಳವನಾಗಿರದೆ ಮನಃಪೂರ್ವಕವಾಗಿ ನನ್ನ ಮಾತನ್ನು ಅನುಸರಿಸಿ ನಡೆದದ್ದರಿಂದ ಅವನನ್ನೇ ಅವನು ಸಂಚರಿಸಿದ ಆ ದೇಶದಲ್ಲಿ ಸೇರಿಸುವೆನು; ಅವನ ಸಂತತಿಯವರು ಅದನ್ನು ಸ್ವಾಧೀನಪಡಿಸಿಕೊಳ್ಳುವರು.


ಅವರು ಬೆಟ್ಟವನ್ನು ಹತ್ತಿ ಕಾನಾನ್‍ದೇಶದ ದಕ್ಷಿಣಪ್ರಾಂತ್ಯವನ್ನು ದಾಟಿ ಹೆಬ್ರೋನಿಗೆ ಬಂದರು. ಅಲ್ಲಿ ಅಹೀಮನ್, ಶೇಷೈ, ತಲ್ಮೈ ಎಂಬ ಉನ್ನತರಾದ ಪುರುಷರು ಇದ್ದರು. ಹೆಬ್ರೋನ್ ಪಟ್ಟಣವು ಐಗುಪ್ತದೇಶದಲ್ಲಿರುವ ಚೋವನ್ ಪಟ್ಟಣಕ್ಕಿಂತ ಏಳು ವರುಷ ಮುಂಚೆ ಕಟ್ಟಲ್ಪಟ್ಟದ್ದು.


ಅನಂತರ ಯೆಹೋಶುವನೂ ಇಸ್ರಾಯೇಲ್ಯರೂ ಎಗ್ಲೋನನ್ನು ಬಿಟ್ಟು ಹೆಬ್ರೋನಿಗೆ ಹೋಗಿ ಅದಕ್ಕೆ ವಿರೋಧವಾಗಿ ಯುದ್ಧಮಾಡಿ


ಅದೇ ಕಾಲದಲ್ಲಿ ಯೆಹೋಶುವನು ಹೆಬ್ರೋನ್, ದೆಬೀರ್, ಅನಾಬ್ ಎಂಬ ಊರುಗಳಲ್ಲಿಯೂ ಯೆಹೂದ ಮತ್ತು ಇಸ್ರಾಯೇಲ್ ಪ್ರಾಂತಗಳ ಬೆಟ್ಟಗಳಲ್ಲಿಯೂ ಇದ್ದ ಉನ್ನತಪುರುಷರನ್ನು ನಾಶಮಾಡಿ ಅವರ ಪಟ್ಟಣಗಳನ್ನು ಹಾಳುಮಾಡಿದನು.


ಅದರ ಮುಂಚಿನ ಹೆಸರು ಕಿರ್ಯತ್ಅರ್ಬ ಎಂಬದು. ಅರ್ಬ ಎಂಬವನು ಉನ್ನತ ಪುರುಷರಲ್ಲಿ ಪ್ರಮುಖನು. ಯುದ್ಧವು ನಿಂತು ದೇಶದಲ್ಲಿ ಸಮಾಧಾನವುಂಟಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು