Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 1:23 - ಕನ್ನಡ ಸತ್ಯವೇದವು J.V. (BSI)

23 ಅವರು ಲೂಜ್ ಅನ್ನಿಸಿಕೊಳ್ಳುತ್ತಿದ್ದ ಬೇತೇಲ್ ಊರನ್ನು ಸಂಚರಿಸಿನೋಡುವದಕ್ಕೆ ಗೂಢಚಾರರನ್ನು ಕಳುಹಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಅವರು ಲೂಜ್ ಎಂದು ಕರೆಯುತ್ತಿದ್ದ ಬೇತೇಲ್ ಊರನ್ನು ಸಂಚರಿಸಿ ನೋಡುವುದಕ್ಕೆ ಗೂಢಚಾರರನ್ನು ಕಳುಹಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಅವರು ‘ಲೂಜ್’ ಎಂದು ಕರೆಯಲಾದ ಬೇತೇಲ್ ಊರನ್ನು ಸಂಚರಿಸಿ ನೋಡಲು ಗೂಢಚಾರರನ್ನು ಕಳುಹಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಆದರೆ ಮೊದಲು ಲೂಜ್ ಎಂದು ಹೆಸರಿದ್ದ ಬೇತೇಲೆಂಬ ಪಟ್ಟಣವನ್ನು ಸಂಚರಿಸಿ ನೋಡಲು, ಯೋಸೇಫನ ಮನೆಯವರನ್ನು ಕಳುಹಿಸಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 1:23
10 ತಿಳಿವುಗಳ ಹೋಲಿಕೆ  

ಆ ಸ್ಥಳಕ್ಕೆ ಬೇತೇಲ್ ಎಂದು ಹೆಸರಿಟ್ಟನು. ಅಲ್ಲಿರುವ ಊರಿಗೆ ಮೊದಲು ಲೂಜ್ ಎಂದು ಹೆಸರಿತ್ತು.


ಯಾಕೋಬನು ಯೋಸೇಫನಿಗೆ - ಸರ್ವಶಕ್ತನಾದ ದೇವರು ಕಾನಾನ್‍ದೇಶದ ಲೂಜಿನಲ್ಲಿ ನನಗೆ ದರ್ಶನಕೊಟ್ಟು ಆಶೀರ್ವದಿಸಿ -


ಯಾಕೋಬನೂ ಅವನ ಸಂಗಡ ಇದ್ದ ಜನರೆಲ್ಲರೂ ಕಾನಾನ್‍ದೇಶದಲ್ಲಿರುವ ಬೇತೇಲೆಂಬ ಲೂಜಿಗೆ ಮುಟ್ಟಿದರು.


ಮತ್ತು ಅವರು ಚೊರ್ಗಾ, ಎಷ್ಟಾವೋಲ್ ಎಂಬ ಊರುಗಳಿಂದ ತಮ್ಮ ಕುಲದಲ್ಲಿ ಐದು ಮಂದಿ ಪರಾಕ್ರಮ ಶಾಲಿಗಳಾದ ಗೂಢಚಾರರನ್ನು ಆರಿಸಿ ಅವರಿಗೆ - ನೀವು ಹೋಗಿ [ಲಯಿಷ್] ದೇಶವನ್ನು ಸಂಚರಿಸಿ ನೋಡಿರಿ ಎಂದು ಆಜ್ಞಾಪಿಸಿ ಕಳುಹಿಸಿದರು. ಇವರು ಪ್ರಯಾಣಮಾಡುತ್ತಾ ಎಫ್ರಾಯೀಮ್ ಬೆಟ್ಟದ ಸೀಮೆಯಲ್ಲಿದ್ದ ಮೀಕನ ಮನೆಗೆ ಬಂದು ಇಳುಕೊಂಡರು.


ಯೆಹೋಶುವನು ಜನರನ್ನು ಕರೆದು - ನೀವು ಗಟ್ಟಾ ಹತ್ತಿ ಬೇತೇಲಿನ ಪೂರ್ವಕ್ಕೂ ಬೇತಾವೆನಿನ ಸಮೀಪದಲ್ಲೂ ಇರುವ ಆಯಿ ಎಂಬ ಪ್ರಾಂತವನ್ನು ಸಂಚರಿಸಿ ನೋಡಿರಿ ಎಂದು ಹೇಳಿ ಅವರನ್ನು ಯೆರಿಕೋವಿನಿಂದ ಕಳುಹಿಸಿದನು. ಅವರು ಹೋಗಿ ಆಯಿ ಎಂಬ ಊರನ್ನು ಸಂಚರಿಸಿ ನೋಡಿ


ನೂನನ ಮಗನಾದ ಯೆಹೋಶುವನು [ಕಾನಾನ್] ದೇಶವನ್ನೂ ಯೆರಿಕೋ ಪಟ್ಟಣವನ್ನೂ ನೋಡುವದಕ್ಕೋಸ್ಕರ ಶಿಟ್ಟೀವಿುನಿಂದ ಇಬ್ಬರು ಗೂಢಚಾರರನ್ನು ಕಳುಹಿಸಿದನು. ಅವರು ಹೊರಟು ಹೋಗಿ ರಾಹಾಬಳೆಂಬ ಸೂಳೆಯ ಮನೆಯಲ್ಲಿ ಇಳುಕೊಂಡರು.


ಅಲ್ಲಿಂದ ದಕ್ಷಿಣಕ್ಕೆ ತಿರುಗಿಕೊಂಡು ಈಗ ಬೇತೇಲ್ ಅನ್ನಿಸಿಕೊಳ್ಳುವ ಲೂಜ್ ಊರಿರುವ ಬೆಟ್ಟಕ್ಕೆ ಹೋಗಿ ಅಲ್ಲಿಂದ ಇಳಿದು ಅಟಾರೋತದ್ದಾರಿನ ಮೇಲೆ ಕೆಳಗಿನ ಬೇತ್‍ಹೋರೋನಿನ ಬಳಿಯಲ್ಲಿರುವ ಬೆಟ್ಟಕ್ಕೆ ಹೋಗುತ್ತದೆ.


ಇವರ ಹಾಗೆಯೇ ಯೋಸೇಫನ ವಂಶದವರೂ ಹೊರಟು ಬೇತೇಲಿಗೆ ಬಂದರು. ಯೆಹೋವನು ಅವರ ಸಂಗಡ ಇದ್ದನು.


ಯೋಸೇಫನ ವಂಶದವರಿಗೆ ದೊರಕಿದ ಸ್ವಾಸ್ತ್ಯದ ಮೇರೆಯು ಯೆರಿಕೋವಿನ ಬಳಿಯಲ್ಲಿ ಯೊರ್ದನ್ ತೀರದಿಂದ ತೊಡಗಿ ಯೆರಿಕೋವಿನ ಪೂರ್ವದಲ್ಲಿದ್ದ ಹಳ್ಳ, ಯೆರಿಕೋವಿಗೂ ಬೇತೇಲಿಗೂ ನಡುವೆ ಇರುವ ಬೆಟ್ಟದ ಸೀಮೆಯ ಅರಣ್ಯ,


ಬೇತೇಲ್ ಇವುಗಳ ಮೇಲೆ ಲೂಜಿಗೆ ಹೋಗುತ್ತದೆ. ಅಲ್ಲಿಂದ ಅರ್ಕೀಯರ ಮೇರೆಯನ್ನು ಅನುಸರಿಸಿ ಅಟಾರೋತಿಗೆ ಹೋಗುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು