Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 1:24 - ಕನ್ನಡ ಸತ್ಯವೇದವು J.V. (BSI)

24 ಅವರು ಆ ಊರೊಳಗಿಂದ ಬರುವ ಒಬ್ಬ ಮನುಷ್ಯನನ್ನು ಕಂಡು ಅವನಿಗೆ - ದಯವಿಟ್ಟು ಪಟ್ಟಣದೊಳಗೆ ನುಗ್ಗಬಹುದಾದ ದಾರಿಯನ್ನು ನಮಗೆ ತೋರಿಸು; ನಾವೂ ನಿನಗೆ ದಯೆ ತೋರಿಸುವೆವು ಎಂದು ಹೇಳಲು ಅವನು ಅಂಥ ದಾರಿಯನ್ನು ತೋರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಅವರು ಆ ಊರೊಳಗಿನಿಂದ ಬರುವ ಒಬ್ಬ ಮನುಷ್ಯನನ್ನು ಕಂಡು ಅವನಿಗೆ, “ದಯವಿಟ್ಟು ಪಟ್ಟಣದೊಳಗೆ ನುಗ್ಗಬಹುದಾದ ದಾರಿಯನ್ನು ನಮಗೆ ತೋರಿಸು; ನಾವೂ ನಿನಗೆ ದಯೆತೋರಿಸುವೆವು” ಎಂದು ಹೇಳಲು ಅವನು ಅವರಿಗೆ ಆ ದಾರಿಯನ್ನು ತೋರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಇವರು ಆ ಊರೊಳಗಿಂದ ಬರುತ್ತಿದ್ದ ಒಬ್ಬ ವ್ಯಕ್ತಿಯನ್ನು ಕಂಡು, “ದಯಮಾಡಿ, ಪಟ್ಟಣದೊಳಗೆ ನುಗ್ಗಬಹುದಾದ ದಾರಿಯನ್ನು ನಮಗೆ ತೋರಿಸಿಕೊಡು; ನಾವು ನಿನಗೆ ಒಳ್ಳೆಯದನ್ನೇ ಮಾಡುತ್ತೇವೆ,” ಎಂದರು. ಅವನು ಅವರಿಗೆ ಆ ದಾರಿಯನ್ನು ತೋರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಆ ಗೂಢಚಾರರು ಬೇತೇಲ್ ನಗರದಲ್ಲಿ ಸಂಚರಿಸುತ್ತಿದ್ದಾಗ ಒಬ್ಬನು ನಗರದಿಂದ ಹೊರಬರುವುದನ್ನು ನೋಡಿದರು. ಗೂಢಚಾರರು ಅವನಿಗೆ, “ನಮಗೆ ಈ ನಗರದೊಳಗೆ ಹೋಗಲು ಮಾಡಿರುವ ಗುಪ್ತಮಾರ್ಗವನ್ನು ತೋರಿಸು. ನಾವು ಈ ಪಟ್ಟಣದ ಮೇಲೆ ಧಾಳಿ ಮಾಡಬೇಕೆಂದಿದ್ದೇವೆ. ನೀನು ನಮಗೆ ಸಹಾಯ ಮಾಡಿದರೆ ನಿನಗೆ ದಯೆತೋರುವೆವು” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಗೂಢಚಾರರು ಪಟ್ಟಣದೊಳಗಿಂದ ಬರುವ ಒಬ್ಬ ಮನುಷ್ಯನನ್ನು ಕಂಡು ಅವನಿಗೆ, “ದಯಮಾಡಿ ಪಟ್ಟಣದಲ್ಲಿ ಪ್ರವೇಶಿಸುವ ಮಾರ್ಗವನ್ನು ನಮಗೆ ತೋರಿಸು. ನಾವು ನಿನಗೆ ಕರುಣೆ ತೋರಿಸುವೆವು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 1:24
4 ತಿಳಿವುಗಳ ಹೋಲಿಕೆ  

ಅನಂತರ ದಾವೀದನು - ನೀನು ನನ್ನನ್ನು ಆ ಗುಂಪು ಇರುವ ಸ್ಥಳಕ್ಕೆ ಕರಕೊಂಡು ಹೋಗುವಿಯೋ ಎಂದು ಕೇಳಿದ್ದಕ್ಕೆ ಅವನು - ನೀನು ನನ್ನನ್ನು ಕೊಲ್ಲುವದಿಲ್ಲವೆಂದೂ ನನ್ನ ಯಜಮಾನನ ಕೈಗೆ ಒಪ್ಪಿಸುವದಿಲ್ಲವೆಂದೂ ದೇವರ ಹೆಸರಿನಲ್ಲಿ ಪ್ರಮಾಣಮಾಡಿದರೆ ನಿನ್ನನ್ನು ಆ ಗುಂಪಿನವರ ಬಳಿಗೆ ಕರಕೊಂಡು ಹೋಗುವೆನು ಅಂದನು.


ಆಗ ಅವರು ಆ ಪಟ್ಟಣವನ್ನು ಕತ್ತಿಯಿಂದ ಸಂಹರಿಸಿದರು. ಆದರೆ ಆ ಮನುಷ್ಯನನ್ನೂ ಅವನ ಕುಟುಂಬವನ್ನೂ ಕಳುಹಿಸಿಬಿಟ್ಟರು.


ಕೋಟೆಕೊತ್ತಲುಗಳುಳ್ಳ ನಗರಕ್ಕೆ ನನ್ನನ್ನು ಕರೆದುಕೊಂಡು ಹೋಗುವವರು ಯಾರು? ಎದೋಮ್ ಪ್ರಾಂತದೊಳಗೆ ನನ್ನನ್ನು ಸೇರಿಸುವವರು ಯಾರು?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು