Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 10:14 - ಕನ್ನಡ ಸತ್ಯವೇದವು J.V. (BSI)

14 ಹೋಗಿ ನೀವು ಆರಿಸಿಕೊಂಡ ದೇವತೆಗಳಿಗೆ ಮೊರೆಯಿಡಿರಿ; ಅವು ನಿಮ್ಮ ಈ ಇಕ್ಕಟ್ಟಿನಲ್ಲಿ ಸಹಾಯ ಮಾಡಲಿ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಹೋಗಿ, ನೀವು ಆರಿಸಿಕೊಂಡ ದೇವತೆಗಳಿಗೆ ಮೊರೆಯಿಡಿರಿ; ಅವು ನಿಮ್ಮನ್ನು ಈ ಇಕ್ಕಟ್ಟಿನಿಂದ ಬಿಡಿಸಲಿ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಹೋಗಿ, ನೀವು ಆರಿಸಿಕೊಂಡ ದೇವತೆಗಳಿಗೆ ಮೊರೆಯಿಡಿ; ಅವು ನಿಮ್ಮ ಈ ಇಕ್ಕಟ್ಟಿನಲ್ಲಿ ಸಹಾಯಮಾಡಲಿ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ನೀವು ಆ ದೇವರುಗಳನ್ನು ಪೂಜಿಸಲು ಇಷ್ಟಪಡುತ್ತೀರಿ. ಆದ್ದರಿಂದ ಹೋಗಿ ಅವರನ್ನೇ ಸಹಾಯಕ್ಕಾಗಿ ಮೊರೆಯಿಡಿ. ನೀವು ಕಷ್ಟದಲ್ಲಿರುವಾಗ ಆ ದೇವರುಗಳೇ ನಿಮ್ಮನ್ನು ರಕ್ಷಿಸಲಿ” ಎಂದು ಉತ್ತರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ನೀವು ಹೋಗಿ ನಿಮಗೆ ನೀವೇ ಆಯ್ದುಕೊಂಡ ದೇವರುಗಳಿಗೆ ಕೂಗಿರಿ, ಅವರು ನಿಮ್ಮ ಸಂಕಟದ ಕಾಲದಲ್ಲಿ ನಿಮ್ಮನ್ನು ರಕ್ಷಿಸಲಿ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 10:14
10 ತಿಳಿವುಗಳ ಹೋಲಿಕೆ  

ಯೆಹೂದವೇ, ನೀನು ನಿರ್ಮಿಸಿಕೊಂಡ ದೇವರುಗಳು ಎಲ್ಲಿ? ನಿನಗೆ ಕೇಡು ಸಂಭವಿಸಿದಾಗ ನಿನ್ನನ್ನುದ್ಧರಿಸಲು ಶಕ್ತರಾದರೆ ಏಳಲಿ! ನಿನ್ನ ಪಟ್ಟಣಗಳೆಷ್ಟೋ, ನಿನ್ನ ದೇವರುಗಳೂ ಅಷ್ಟು.


ದಂಡನೆಯ ದಿನದಲ್ಲಿಯೂ ದೂರದಿಂದ ಬರುವ ನಾಶನದಲ್ಲಿಯೂ ಏನು ಮಾಡುವಿರಿ? ಸಹಾಯಕ್ಕಾಗಿ ಯಾರ ಬಳಿಗೆ ಓಡುವಿರಿ? ನಿಮ್ಮ ಐಶ್ವರ್ಯವನ್ನು ಯಾರ ವಶಮಾಡುವಿರಿ?


ಎಲೀಷನು ಇಸ್ರಾಯೇಲ್ಯರ ಅರಸನಿಗೆ - ನನಗೂ ನಿನಗೂ ಗೊಡವೆಯೇನು? ನಿನ್ನ ತಂದೆತಾಯಿಗಳ ಪ್ರವಾದಿಗಳ ಬಳಿಗೆ ಹೋಗು ಎಂದು ಹೇಳಿದನು. ಅದಕ್ಕೆ ಇಸ್ರಾಯೇಲ್ಯರ ಅರಸನು - ಹಾಗನ್ನಬೇಡ; ಯೆಹೋವನು ಈ ಮೂರು ಮಂದಿ ಅರಸರಾದ ನಮ್ಮನ್ನು ಮೋವಾಬ್ಯರ ಕೈಗೆ ಒಪ್ಪಿಸುವದಕ್ಕೋಸ್ಕರ ಇಲ್ಲಿಗೆ ಬರಮಾಡಿದನಲ್ಲವೋ ಅಂದನು.


ಅದನ್ನು ಹೆಗಲ ಮೇಲೆ ಹೊತ್ತುಕೊಂಡು ಮೆರವಣಿಗೆ ಮಾಡಿ ಪೀಠದ ಮೇಲೆ ಇಳಿಸಿ ನಿಲ್ಲಿಸುವರು. ಅದು ಅಲ್ಲಿಂದ ಜರಗದು, ಒಬ್ಬನು ಕೂಗಿಕೊಂಡರೂ ಉತ್ತರಕೊಟ್ಟು ಕಷ್ಟದಿಂದ ಅವನನ್ನು ಬಿಡಿಸಲಾರದು.


ನೀನು ಕೂಗಿಕೊಳ್ಳುವಾಗ ನೀನು ಕೂಡಿಹಾಕಿಕೊಂಡಿರುವ ಇವುಗಳೇ ನಿನ್ನನ್ನುದ್ಧರಿಸಲಿ. ಆದರೆ ಇವುಗಳನ್ನೆಲ್ಲಾ ಗಾಳಿಯು ಬಡಿದುಕೊಂಡು ಹೋಗುವದು, ಬರೀ ಉಸಿರಾದರೂ ಒಯ್ಯುವದು. ನನ್ನನ್ನು ಆಶ್ರಯಿಸುವವನೋ ದೇಶವನ್ನನುಭವಿಸಿ ನನ್ನ ಪರಿಶುದ್ಧಪರ್ವತವನ್ನು ಬಾಧ್ಯವಾಗಿ ಹೊಂದುವನು.


ಇಸ್ರಾಯೇಲ್ ವಂಶದವರೇ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಹೋಗಿರಿ, ನಿಮ್ಮ ಬೊಂಬೆಗಳನ್ನು ಸೇವಿಸಿಕೊಳ್ಳಿರಿ; ಮುಂದಂತು ನನ್ನ ಮಾತನ್ನು ಕೇಳೇ ಕೇಳುವಿರಿ, ಇನ್ನು ಮೇಲೆ ನನ್ನ ಪರಿಶುದ್ಧನಾಮವನ್ನು ನಿಮ್ಮ ಬಲಿಗಳಿಂದಲೂ ಬೊಂಬೆಗಳಿಂದಲೂ ನೀವು ಅಪಕೀರ್ತಿಗೆ ಗುರಿಮಾಡುವದೇ ಇಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು