Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 10:6 - ಕನ್ನಡ ಸತ್ಯವೇದವು J.V. (BSI)

6 ಇಸ್ರಾಯೇಲ್ಯರು ತಿರಿಗಿ ಯೆಹೋವನ ದೃಷ್ಟಿಯಲ್ಲಿ ದ್ರೋಹಿಗಳಾದರು; ಅವರು ಆತನನ್ನು ಬಿಟ್ಟು ಬಾಳ್, ಅಷ್ಟೋರೆತ್ ಎಂಬ ದೇವತೆಗಳನ್ನೂ ಅರಾಮ್ಯರು, ಚೀದೋನ್ಯರು, ಮೋವಾಬ್ಯರು, ಅಮ್ಮೋನಿಯರು, ಫಿಲಿಷ್ಟಿಯರು ಇವರ ದೇವತೆಗಳನ್ನೂ ಪೂಜಿಸಹತ್ತಿ ಯೆಹೋವನನ್ನು ಬಿಟ್ಟೇ ಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಇಸ್ರಾಯೇಲರು ಪುನಃ ಯೆಹೋವನ ದೃಷ್ಟಿಯಲ್ಲಿ ದ್ರೋಹಿಗಳಾದರು. ಅವರು ಆತನನ್ನು ಬಿಟ್ಟು ಬಾಳ್, ಅಷ್ಟೋರೆತ್ ಎಂಬ ದೇವತೆಗಳನ್ನೂ, ಅರಾಮ್ಯರು, ಚೀದೋನ್ಯರು, ಮೋವಾಬ್ಯರು, ಅಮ್ಮೋನಿಯರು, ಫಿಲಿಷ್ಟಿಯರು ಇವರ ದೇವತೆಗಳನ್ನೂ ಪೂಜಿಸತೊಡಗಿದರು. ಯೆಹೋವನನ್ನು ಮರೆತು ಆತನನ್ನು ಆರಾಧಿಸುವುದನ್ನು ಬಿಟ್ಟೇಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಇಸ್ರಯೇಲರು ಇನ್ನೊಮ್ಮೆ ಸರ್ವೇಶ್ವರನ ದೃಷ್ಟಿಯಲ್ಲಿ ದ್ರೋಹಿಗಳಾದರು; ಅವರು ಸರ್ವೇಶ್ವರನನ್ನು ಬಿಟ್ಟು ಬಾಳ್, ಅಷ್ಟೋರೆತ್ ಎಂಬ ದೇವತೆಗಳನ್ನು ಮತ್ತು ಅರಾಮ್ಯರು, ಚೀದೋನ್ಯರು, ಮೋವಾಬ್ಯರು, ಅಮ್ಮೋನಿಯರು, ಫಿಲಿಷ್ಟಿಯರು ಇವರ ದೇವತೆಗಳನ್ನೂ ಪೂಜಿಸತೊಡಗಿದರು. ಸರ್ವೇಶ್ವರನನ್ನಾದರೋ ಬಿಟ್ಟೇಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಇಸ್ರೇಲರು ಮತ್ತೆ ದೇವರಿಗೆ ವಿರೋಧವಾಗಿ ದುಷ್ಕೃತ್ಯಗಳನ್ನು ಮಾಡಿದರು. ಅವರು ಸುಳ್ಳುದೇವರಾದ ಬಾಳನನ್ನೂ ಸುಳ್ಳುದೇವತೆಯಾದ ಅಷ್ಟೋರೆತಳನ್ನೂ ಪೂಜಿಸತೊಡಗಿದರು. ಅವರು ಅರಾಮ್ಯರ, ಚೀದೋನ್ಯರ, ಮೋವಾಬ್ಯರ, ಅಮ್ಮೋನಿಯರ ಮತ್ತು ಫಿಲಿಷ್ಟಿಯರ ದೇವರುಗಳನ್ನು ಸಹ ಪೂಜಿಸಿದರು. ಇಸ್ರೇಲರು ಯೆಹೋವನನ್ನು ಮರೆತುಬಿಟ್ಟು ಆತನ ಸೇವೆಯನ್ನು ನಿಲ್ಲಿಸಿಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಇಸ್ರಾಯೇಲರು ಪುನಃ ಯೆಹೋವ ದೇವರ ಮುಂದೆ ಕೆಟ್ಟತನವನ್ನು ಮಾಡಿ, ಬಾಳನನ್ನೂ, ಅಷ್ಟೋರೆತನ್ನೂ, ಅರಾಮ್ ದೇಶದ ದೇವರುಗಳನ್ನೂ, ಸೀದೋನಿನ ದೇವರುಗಳನ್ನೂ, ಮೋವಾಬಿನ ದೇವರುಗಳನ್ನೂ, ಅಮ್ಮೋನಿಯರ ದೇವರುಗಳನ್ನೂ ಫಿಲಿಷ್ಟಿಯರ ದೇವರುಗಳನ್ನೂ ಸೇವಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 10:6
32 ತಿಳಿವುಗಳ ಹೋಲಿಕೆ  

ಇಸ್ರಾಯೇಲ್ಯರ ಅರಸನಾದ ಸೊಲೊಮೋನನು ಚೀದೋನ್ಯರ ಅಷ್ಟೋರೆತ್, ಮೋವಾಬ್ಯರ ಕೆಮೋಷ್, ಅಮ್ಮೋನಿಯರ ವಿುಲ್ಕೋಮ್ ಎಂಬ ಅಸಹ್ಯವಿಗ್ರಹಗಳಿಗೋಸ್ಕರ ಯೆರೂಸಲೇವಿುನ ಎದುರಿನಲ್ಲಿಯೂ ವಿಘ್ನಪರ್ವತದ ದಕ್ಷಿಣದಿಕ್ಕಿನಲ್ಲಿಯೂ ಸ್ಥಾಪಿಸಿದ ಪೂಜಾಸ್ಥಳಗಳನ್ನು ಇವನು ಹೊಲೆಮಾಡಿದನು.


ಇದಲ್ಲದೆ ಆತನು ನಿನಗೆ - ಸೊಲೊಮೋನನೂ ಅವನ ಮನೆಯವರೂ ನನ್ನನ್ನು ಬಿಟ್ಟು ಚೀದೋನ್ಯರ ದೇವತೆಯಾದ ಅಷ್ಟೋರೆತ್, ಮೋವಾಬ್ಯರ ದೇವತೆಯಾದ ಕೆಮೋಷ್, ಅಮ್ಮೋನಿಯರ ದೇವತೆಯಾದ ವಿುಲ್ಕೋಮ್ ಇವುಗಳನ್ನು ಆರಾಧಿಸಿದ್ದೂ ಅವರ ತಂದೆಯಾದ ದಾವೀದನು ನನ್ನ ನೇಮವಿಧಿಗಳನ್ನು ಕೈಕೊಂಡು ನನ್ನನ್ನು ಮೆಚ್ಚಿಸಿ ನಡೆದಂತೆ ಅವರು ನಡಿಯದೆ ಹೋದದ್ದೂ ಇದಕ್ಕೆ ಕಾರಣ.


ಅವನು ಯೆರೂಸಲೇವಿುನ ಮೂಡಲಲ್ಲಿರುವ ಗುಡ್ಡದಲ್ಲಿ ಮೋವಾಬ್ಯರ ಕೆಮೋಷ್ ಎಂಬ ಅಸಹ್ಯ ವಿಗ್ರಹಕ್ಕೂ ಅಮ್ಮೋನಿಯರ ಮೋಲೆಕ್ ಎಂಬ ಅಸಹ್ಯ ವಿಗ್ರಹಕ್ಕೂ ಪೂಜಾಸ್ಥಳಗಳನ್ನು ಏರ್ಪಡಿಸಿದನು.


ಅವನು ಚೀದೋನ್ಯರ ಅಷ್ಟೋರೆತ್ ದೇವತೆಯನ್ನೂ ಅಮ್ಮೋನಿಯರ ವಿುಲ್ಕೋಮ್ ಎಂಬ ಅಸಹ್ಯ ವಿಗ್ರಹವನ್ನೂ ಆರಾಧಿಸತೊಡಗಿ


ನನ್ನ ಜನರು ಎರಡು ಅಪರಾಧಗಳನ್ನು ಮಾಡಿದ್ದಾರೆ; ಜೀವಜಲದ ಬುಗ್ಗೆಯಾದ ನನ್ನನ್ನು ಬಿಟ್ಟಿದ್ದಾರೆ, ತಮಗೋಸ್ಕರ ತೊಟ್ಟಿಗಳನ್ನು, ನೀರು ನಿಲ್ಲದ ಬಿರಿದ ತೊಟ್ಟಿಗಳನ್ನು ಕೊರೆದುಕೊಂಡಿದ್ದಾರೆ.


ಅವರ ವಿಗ್ರಹಗಳನ್ನು ಸೇವಿಸಿದರು; ಅವು ಅವರಿಗೆ ಉರುಲಿನಂತಾದವು.


ತಮ್ಮ ದೇವರಾದ ಯೆಹೋವನ ಆಜ್ಞೆಗಳನ್ನೆಲ್ಲಾ ಮೀರಿ ಎರಡು ಎರಕದ ಬಸವಮೂರ್ತಿಗಳು, ಅಶೇರವಿಗ್ರಹಸ್ತಂಭ ಇವುಗಳನ್ನು ಮಾಡಿಕೊಂಡರು; ಆಕಾಶಸೈನ್ಯ ಬಾಳ್‍ದೇವತೆ ಇವುಗಳನ್ನು ಪೂಜಿಸಿದರು;


ಶತ್ರುವಾದ ಸಂಸೋನನನ್ನು ತಮ್ಮ ಕೈಗೆ ಒಪ್ಪಿಸಿದ ತಮ್ಮ ದೇವರಾದ ದಾಗೋನನಿಗೆ ಮಹಾಯಜ್ಞವನ್ನು ಸಮರ್ಪಿಸಿ ಸಂತೋಷಪಡಬೇಕೆಂದು ಫಿಲಿಷ್ಟಿಯ ಪ್ರಭುಗಳು ಕೂಡಿಬಂದರು.


ಹೇಗಂದರೆ - ಅರಾಮ್‍ರಾಜರ ದೇವತೆಗಳು ಅವರಿಗೆ ಜಯವನ್ನನುಗ್ರಹಿಸಿದವಲ್ಲಾ; ನಾನೂ ಅವುಗಳಿಗೆ ಯಜ್ಞಸಮರ್ಪಿಸುವೆನು, ಆಗ ನನಗೂ ಜಯವಾಗುವದು ಎಂದುಕೊಂಡು ಅವನು ತನ್ನ ಅಪಜಯಕ್ಕೆ ಕಾರಣವಾಗಿದ್ದ ದಮಸ್ಕದ ದೇವತೆಗಳಿಗೆ ಯಜ್ಞಸಮರ್ಪಿಸುವವನಾದನು. ಆ ದೇವತೆಗಳ ದೆಸೆಯಿಂದ ಅವನಿಗೂ ಎಲ್ಲಾ ಇಸ್ರಾಯೇಲ್ಯರಿಗೂ ಕೇಡುಂಟಾಯಿತು.


ಇವನು ನೆಬಾಟನ ಮಗನಾದ ಯಾರೊಬ್ಬಾಮನ ಮಾರ್ಗದಲ್ಲಿ ನಡೆಯುವದು ಅಲ್ಪಪಾಪವೆಂದು ತಿಳಿದವನೋ ಎಂಬಂತೆ ಚೀದೋನ್ಯರ ಅರಸನಾದ ಎತ್ಬಾಳನ ಮಗಳು ಈಜೆಬೆಲ್ ಎಂಬಾಕೆಯನ್ನು ಮದುವೆ ಮಾಡಿಕೊಂಡು ಬಾಳ್‍ದೇವರನ್ನು ಪೂಜಿಸತೊಡಗಿದನು.


ದಾಗೋನನ ಗುಡಿಗೆ ಒಯ್ದು ಅಲ್ಲಿ ದಾಗೋನನ ಮಗ್ಗುಲಲ್ಲೇ ಇಟ್ಟರು.


ಇಸ್ರಾಯೇಲ್ಯರು ತಿರಿಗಿ ಯೆಹೋವನ ದೃಷ್ಟಿಯಲ್ಲಿ ದ್ರೋಹಿಗಳಾದದರಿಂದ ಆತನು ಅವರನ್ನು ನಾಲ್ವತ್ತು ವರುಷಗಳ ತನಕ ಫಿಲಿಷ್ಟಿಯರ ಕೈಗೆ ಒಪ್ಪಿಸಿದನು.


ಇಸ್ರಾಯೇಲ್ಯರು ತಿರಿಗಿ ಯೆಹೋವನ ದೃಷ್ಟಿಯಲ್ಲಿ ದ್ರೋಹಿಗಳಾದದರಿಂದ ಆತನು ಅವರನ್ನು ಏಳು ವರುಷಗಳ ಪರ್ಯಂತರ ವಿುದ್ಯಾನ್ಯರ ಕೈಗೆ ಒಪ್ಪಿಸಿದನು.


ಏಹೂದನು ಮರಣಹೊಂದಿದನಂತರ ಇಸ್ರಾಯೇಲ್ಯರು ತಿರಿಗಿ ಯೆಹೋವನ ದೃಷ್ಟಿಯಲ್ಲಿ ದ್ರೋಹಿಗಳಾದದರಿಂದ


ಇಸ್ರಾಯೇಲ್ಯರು ಬಾಳ್, ಅಶೇರ ಎಂಬ ದೇವತೆಗಳನ್ನು ಪೂಜಿಸಿ ತಮ್ಮ ದೇವರಾದ ಯೆಹೋವನನ್ನು ಮರೆತುಬಿಟ್ಟು ಆತನ ದೃಷ್ಟಿಯಲ್ಲಿ ದ್ರೋಹಿಗಳಾದರು.


ಆದರೆ ಯೆಶುರೂನು ಚೆನ್ನಾಗಿ ತಿಂದು ಕೊಬ್ಬಿ ಅಗಡಾಗಿ ತನ್ನನ್ನು ಸೃಷ್ಟಿಸಿದ ದೇವರನ್ನು ಬಿಟ್ಟು ತನ್ನ ಆಶ್ರಯದುರ್ಗವನ್ನು ತಿರಸ್ಕರಿಸಿತು.


ಯೆಹೋವನು ಮೋಶೆಗೆ - ನೀನು ಪಿತೃಗಳಲ್ಲಿ ಸೇರಿದ ಮೇಲೆ ಈ ಜನರು ನನ್ನನ್ನು ಬಿಟ್ಟು ನಾನು ಅವರೊಡನೆ ಮಾಡಿಕೊಂಡ ಒಡಂಬಡಿಕೆಯನ್ನು ಮೀರಿ ದೇವದ್ರೋಹಿಗಳಾಗಿ ತಾವು ಹೋಗುವ ದೇಶದಲ್ಲಿರುವ ಅನ್ಯದೇವತೆಗಳನ್ನು ಪೂಜಿಸುವರು.


ಆಗ ನಾನು ಅವರ ಮೇಲೆ ಬಲುಸಿಟ್ಟಾಗಿ ಅವರನ್ನು ಬಿಟ್ಟು ಅವರಿಗೆ ವಿಮುಖನಾಗಿರುವೆನು; ಆದದರಿಂದ ಅವರು ಸಂಹಾರಕ್ಕೆ ಗುರಿಯಾಗುವರು; ಮತ್ತು ಅನೇಕ ಕಷ್ಟಗಳೂ ವಿಪತ್ತುಗಳೂ ಅವರಿಗೆ ಒದಗುವವು. ಆಗ ಅವರು - ನಮ್ಮ ದೇವರು ನಮ್ಮ ಮಧ್ಯದಲ್ಲಿ ಇಲ್ಲದೆಹೋದದರಿಂದಲೇ ಈ ವಿಪತ್ತುಗಳೆಲ್ಲಾ ನಮಗೆ ಸಂಭವಿಸಿದವಲ್ಲಾ ಅಂದುಕೊಳ್ಳುವರು.


ಗಿಲ್ಯಾದಿನ ಅರ್ಧಭಾಗವೂ ಓಗನ ರಾಜಧಾನಿಗಳಾಗಿದ್ದ ಬಾಷಾನಿನ ಅಷ್ಟರೋತ್, ಎದ್ರೈ ಎಂಬ ಪಟ್ಟಣಗಳೂ ಮನಸ್ಸೆಯ ಮಗನಾದ ಮಾಕೀರನ ಗೋತ್ರದ ಅರ್ಧಜನರಿಗೆ ಸಿಕ್ಕಿದವು.


ಯಾಯೀರನು ಸತ್ತು ಕಾಮೋನಿನಲ್ಲಿ ಹೂಣಲ್ಪಟ್ಟನು.


ನಿನ್ನ ದೇವನಾದ ಕೆಮೋಷನು ನಿನಗೆ ಕೊಡುವ ದೇಶಗಳನ್ನು ನೀನು ಸ್ವತಂತ್ರಿಸಿಕೊಳ್ಳುವದಿಲ್ಲವೋ? ಹಾಗೆಯೇ ನಮ್ಮ ದೇವರಾದ ಯೆಹೋವನು ನಮಗೆ ಒಪ್ಪಿಸಿಕೊಡುವದನ್ನು ನಾವು ಸ್ವತಂತ್ರಿಸಿಕೊಳ್ಳುವದು ನ್ಯಾಯವಾಗಿದೆ.


ಚೀದೋನೇ, ನಾಚಿಕೆಪಡು; ಸಮುದ್ರವು, ಸಮುದ್ರದುರ್ಗವು - ನಾವು ವೇದನೆಪಡಲಿಲ್ಲ, ಪ್ರಸವಿಸಲಿಲ್ಲ, ಯುವತಿಯುವಕರನ್ನು ಸಾಕಿ ಸಲಹಲಿಲ್ಲ ಎಂದು ನುಡಿದಿದೆಯಷ್ಟೆ.


ನಿನ್ನ ಕೈಕೆಲಸದ ವಸ್ತುಗಳು ಅಪಾರವಾಗಿದ್ದದರಿಂದ ಅರಾವಿುನವರೂ ನಿನ್ನವರಾಗಿ ವ್ಯಾಪಾರಮಾಡಿ ಕೆಂಪರಲು ರಕ್ತಾಂಬರ ಕಸೂತಿಯ ವಸ್ತ್ರ ನಾರುಬಟ್ಟೆ ಹವಳ ಮಾಣಿಕ್ಯ ಮೊದಲಾದ ಸರಕುಗಳನ್ನು ನಿನಗೆ ತಂದು ಸುರಿದರು.


ಒಡಹುಟ್ಟಿದ ಅಣ್ಣತಮ್ಮಂದಿರಾಗಲಿ ಮಗನಾಗಲಿ ಮಗಳಾಗಲಿ ಪ್ರಾಣಪ್ರಿಯಳಾದ ಹೆಂಡತಿಯಾಗಲಿ ಆಪ್ತವಿುತ್ರನಾಗಲಿ ನಿಮಗಾದರೂ ನಿಮ್ಮ ಪಿತೃಗಳಿಗಾದರೂ ಗೊತ್ತಿಲ್ಲದ ಇತರ ದೇವರುಗಳನ್ನು ಸೂಚಿಸಿ -


ಅವನನ್ನು ಕನಿಕರಿಸಕೂಡದು, ತಪ್ಪಿಸಕೂಡದು, ಬಚ್ಚಿಡಕೂಡದು; ಕೊಲ್ಲಿಸಲೇಬೇಕು.


ಗಿದ್ಯೋನನು ಸತ್ತನಂತರ ಇಸ್ರಾಯೇಲ್ಯರು ದೇವದ್ರೋಹಿಗಳಾಗಿ ಬಾಳನ ಪ್ರತಿಮೆಗಳನ್ನು ಪೂಜಿಸಿದರು; ಬಾಳ್‍ಬೆರೀತನನ್ನು ತಮಗೆ ದೇವರು ಮಾಡಿಕೊಂಡರು.


ಬಹುಕಾಲದಿಂದ ನೀನು ನಿನ್ನ ನೊಗವನ್ನು ಮುರಿದು ಕಣ್ಣಿಗಳನ್ನು ಕಿತ್ತು ನಾನು ಸೇವೆ ಮಾಡುವದಿಲ್ಲವೆಂದು ಅಂದುಕೊಳ್ಳುತ್ತಿದ್ದೀ; ಎತ್ತರವಾದ ಎಲ್ಲಾ ಗುಡ್ಡಗಳ ಮೇಲೂ ಸೊಂಪಾಗಿ ಬೆಳೆದಿರುವ ಎಲ್ಲಾ ಮರಗಳ ಕೆಳಗೂ ನೀನು ಅಡ್ಡಬಿದ್ದು ಸೂಳೆಯಾಗಿ ನಡೆದಿದ್ದೀ.


ಅವರು ಅದನ್ನು ಸೇರಿ ಅನುಭವಿಸಿದರೂ ನಿನ್ನ ಮಾತಿಗೆ ಕಿವಿಗೊಡಲಿಲ್ಲ, ನಿನ್ನ ಧರ್ಮಾನುಸಾರ ನಡೆಯಲಿಲ್ಲ; ನೀನು ಆಜ್ಞಾಪಿಸಿದವುಗಳಲ್ಲೆಲ್ಲಾ ಒಂದನ್ನೂ ಮಾಡಲಿಲ್ಲ. ಆದಕಾರಣ ನೀನು ಈ ಕೇಡನ್ನೆಲ್ಲಾ ಅವರ ಮೇಲೆ ಬರಮಾಡಿದ್ದೀ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು