Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 10:7 - ಕನ್ನಡ ಸತ್ಯವೇದವು J.V. (BSI)

7 ಆದದರಿಂದ ಆತನು ಇಸ್ರಾಯೇಲ್ಯರ ಮೇಲೆ ಕೋಪವುಳ್ಳವನಾಗಿ ಅವರನ್ನು ಫಿಲಿಷ್ಟಿಯರ ಮತ್ತು ಅಮ್ಮೋನಿಯರ ಕೈಗೆ ಒಪ್ಪಿಸಿಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆದುದರಿಂದ ಆತನು ಇಸ್ರಾಯೇಲರ ಮೇಲೆ ಕೋಪಗೊಂಡು ಅವರನ್ನು ಫಿಲಿಷ್ಟಿಯರ ಮತ್ತು ಅಮ್ಮೋನಿಯರ ಕೈಗೆ ಒಪ್ಪಿಸಿಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಆದುದರಿಂದ ಸರ್ವೇಶ್ವರ ಇಸ್ರಯೇಲರ ಮೇಲೆ ಕೋಪಗೊಂಡು ಅವರನ್ನು ಫಿಲಿಷ್ಟಿಯರ ಮತ್ತು ಅಮ್ಮೋನಿಯರ ಕೈಗೆ ಒಪ್ಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಆದ್ದರಿಂದ ಯೆಹೋವನು ಇಸ್ರೇಲರ ಮೇಲೆ ಕೋಪಗೊಂಡನು. ಫಿಲಿಷ್ಟಿಯರು ಮತ್ತು ಅಮ್ಮೋನಿಯರು ಅವರನ್ನು ಸೋಲಿಸುವಂತೆ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಅವರು ಯೆಹೋವ ದೇವರನ್ನು ಬಿಟ್ಟುಬಿಟ್ಟದ್ದರಿಂದ, ಯೆಹೋವ ದೇವರು ಇಸ್ರಾಯೇಲ್ಯರ ಮೇಲೆ ಕೋಪವುಳ್ಳವರಾಗಿ ಅವರನ್ನು ಫಿಲಿಷ್ಟಿಯರ ಮತ್ತು ಅಮ್ಮೋನಿಯರ ಕೈಗೆ ಮಾರಿಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 10:7
15 ತಿಳಿವುಗಳ ಹೋಲಿಕೆ  

ಯೆಹೋವನ ಕೋಪವು ಅವರ ಮೇಲೆ ಉರಿಯಹತ್ತಿತು. ಆತನು ಅವರನ್ನು ಸೂರೆಮಾಡುವವರ ಕೈಗೆ ಒಪ್ಪಿಸಲು ಅವರು ಅವರನ್ನು ಸೂರೆಮಾಡಿದರು. ಆತನು ಅವರನ್ನು ಸುತ್ತಣ ವೈರಿಗಳಿಗೆ ಮಾರಿ ಬಿಟ್ಟನು; ಅವರು ಆ ಶತ್ರುಗಳ ಮುಂದೆ ನಿಲ್ಲಲಾರದವರಾದರು.


ಆತನ ಸಿಟ್ಟಿಗೆ ಯಾರು ತಡೆದಾರು? ಆತನ ರೋಷಾಗ್ನಿಗೆ ಯಾರು ನಿಂತಾರು? ಆತನ ರೌದ್ರವು ಜ್ವಾಲಾಪ್ರವಾಹದಂತೆ ಹರಿಯುತ್ತದೆ, ಬಂಡೆಗಳು ಆತನಿಂದ ಕೆಡವಲ್ಪಟ್ಟಿವೆ.


ಯೆಹೋವನು ಸ್ವಗೌರವವನ್ನು ಕಾಪಾಡಿಕೊಳ್ಳುವ ದೇವರು, ಆತನು ಮುಯ್ಯಿತೀರಿಸುವವನು; ಹೌದು, ಯೆಹೋವನು ಮುಯ್ಯಿತೀರಿಸುವವನು, ಕೋಪಭರಿತನು; ಯೆಹೋವನು ತನ್ನ ವಿರೋಧಿಗಳಿಗೆ ಮುಯ್ಯಿತೀರಿಸುತ್ತಾನೆ, ತನ್ನ ಶತ್ರುಗಳ ಮೇಲೆ ದೀರ್ಘರೋಷವಿಡುತ್ತಾನೆ.


ಯೆಹೋವನು ಹೀಗನ್ನುತ್ತಾನೆ - ನಾನು ನಿಮ್ಮ ತಾಯಿಯನ್ನು ತ್ಯಜಿಸಿದ ತ್ಯಾಗಪತ್ರವು ಎಲ್ಲಿ? ನನ್ನ ಸಾಲಗಾರರಲ್ಲಿ ಯಾರಿಗೆ ನಿಮ್ಮನ್ನು ಮಾರಿಬಿಟ್ಟಿದ್ದೇನೆ ನೋಡಿರಿ, ನಿಮ್ಮ ದೋಷಗಳ ನಿವಿುತ್ತ ನಿಮ್ಮನ್ನು ಮಾರಿದೆನು, ನಿಮ್ಮ ದ್ರೋಹಗಳಿಗಾಗಿ ನಿಮ್ಮ ತಾಯಿಯನ್ನು ಬಿಟ್ಟೆನು.


ದೇವರೇ, ನೀನು ನಮ್ಮನ್ನು ಸಂಪೂರ್ಣವಾಗಿ ತಳ್ಳಿಬಿಟ್ಟದ್ದೇಕೆ? ನೀನು ಪಾಲಿಸುವ ಹಿಂಡಿನ ಮೇಲೆ ನಿನ್ನ ಕೋಪಾಗ್ನಿಯು ಹೊಗೆ ಆಡುವದೇನು?


ನೀನು ಯಾವ ಲಾಭವನ್ನೂ ಹೊಂದದೆ ನಿಷ್ಪ್ರಯೋಜನವಾಗಿ ನಿನ್ನ ಪ್ರಜೆಯನ್ನು ಮಾರಿಬಿಟ್ಟಿದ್ದೀ.


ಆತನು ಅವರನ್ನು ಹಾಚೋರಿನಲ್ಲಿ ಆಳುತ್ತಿದ್ದ ಕಾನಾನ್ಯರಾಜನಾದ ಯಾಬೀನನಿಗೆ ಮಾರಿಬಿಟ್ಟನು. ಮ್ಲೇಚ್ಫರ ಹರೋಷೆತ್ ಎಂಬ ಪಟ್ಟಣದಲ್ಲಿ ವಾಸವಾಗಿದ್ದ ಸೀಸೆರನು ಅವನ ಸೇನಾಪತಿಯಾಗಿದ್ದನು.


ಇವರು ಆ ವರುಷದಿಂದ ಹದಿನೆಂಟು ವರುಷಗಳವರೆಗೆ ಯೊರ್ದನಿನ ಆಚೆ ಗಿಲ್ಯಾದಿನಲ್ಲಿದ್ದ ಇಸ್ರಾಯೇಲ್ಯರನ್ನು ಬಹಳವಾಗಿ ಪೀಡಿಸುತ್ತಾ ಕುಗ್ಗಿಸುತ್ತಾ ಇದ್ದರು. ಈ ದೇಶವು ಮೊದಲು ಅಮೋರಿಯರದಾಗಿತ್ತು.


ಇಸ್ರಾಯೇಲ್ಯರು ತಿರಿಗಿ ಯೆಹೋವನ ದೃಷ್ಟಿಯಲ್ಲಿ ದ್ರೋಹಿಗಳಾದದರಿಂದ ಆತನು ಅವರನ್ನು ಏಳು ವರುಷಗಳ ಪರ್ಯಂತರ ವಿುದ್ಯಾನ್ಯರ ಕೈಗೆ ಒಪ್ಪಿಸಿದನು.


ಇಸ್ರಾಯೇಲ್ಯರು ತಿರಿಗಿ ಯೆಹೋವನ ದೃಷ್ಟಿಯಲ್ಲಿ ದ್ರೋಹಿಗಳಾದದರಿಂದ ಆತನು ಅವರನ್ನು ನಾಲ್ವತ್ತು ವರುಷಗಳ ತನಕ ಫಿಲಿಷ್ಟಿಯರ ಕೈಗೆ ಒಪ್ಪಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು