Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 10:9 - ಕನ್ನಡ ಸತ್ಯವೇದವು J.V. (BSI)

9 ಇದಲ್ಲದೆ ಅಮ್ಮೋನಿಯರು ಯೊರ್ದನ್ ಹೊಳೆಯನ್ನು ದಾಟಿ ಯೆಹೂದ ಬೆನ್ಯಾಮೀನ್ ಎಫ್ರಾಯೀಮ್ ಕುಲಗಳೊಡನೆ ಯುದ್ಧಮಾಡಿದ್ದರಿಂದ ಇಸ್ರಾಯೇಲ್ಯರಿಗೆ ಬಹಳ ಕಷ್ಟವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಇದಲ್ಲದೆ ಅಮ್ಮೋನಿಯರು ಯೊರ್ದನ್ ಹೊಳೆಯನ್ನು ದಾಟಿ, ಯೆಹೂದ, ಬೆನ್ಯಾಮೀನ್, ಎಫ್ರಾಯೀಮ್ ಕುಲಗಳೊಡನೆ ಯುದ್ಧಮಾಡಿದ್ದರಿಂದ ಇಸ್ರಾಯೇಲರಿಗೆ ಬಹಳ ಕಷ್ಟವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಇದಲ್ಲದೆ ಅಮ್ಮೋನಿಯರು ಜೋರ್ಡನ್ ನದಿಯನ್ನು ದಾಟಿ ಯೆಹೂದ, ಬೆನ್ಯಾಮೀನ್, ಎಫ್ರಯಿಮ್ ಕುಲಗಳೊಡನೆ ಯುದ್ಧಮಾಡಿದ್ದರಿಂದ ಇಸ್ರಯೇಲರು ಬಹಳ ಕಷ್ಟಕ್ಕೀಡಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಅಮ್ಮೋನಿಯರು ಜೋರ್ಡನ್ ನದಿಯನ್ನು ದಾಟಿ ಯೆಹೂದ, ಬೆನ್ಯಾಮೀನ್, ಎಫ್ರಾಯೀಮ್ ಕುಲಗಳ ಜನರೊಡನೆ ಯುದ್ಧ ಮಾಡಿದರು. ಅಮ್ಮೋನಿಯರು, ಇಸ್ರೇಲರಿಗೆ ಅನೇಕ ಕಷ್ಟಗಳನ್ನು ಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಇದಲ್ಲದೆ ಅಮ್ಮೋನನ ಮಕ್ಕಳು ಯೆಹೂದ ಹಾಗೂ ಬೆನ್ಯಾಮೀನರಿಗೆ ವಿರೋಧವಾಗಿಯೂ, ಎಫ್ರಾಯೀಮರ ಮನೆಗೆ ವಿರೋಧವಾಗಿಯೂ ಯುದ್ಧಮಾಡುವುದಕ್ಕೆ ಯೊರ್ದನನ್ನು ದಾಟಿ ಬಂದರು. ಹೀಗೆ ಇಸ್ರಾಯೇಲಿಗೆ ಬಹು ಸಂಕಟವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 10:9
13 ತಿಳಿವುಗಳ ಹೋಲಿಕೆ  

ಆ ಕಾಲದಲ್ಲಿ ಯಾರಿಗೂ ನಿರ್ಭಯವಾಗಿ ತಿರುಗಾಡುವದಕ್ಕೆ ಆಗುತ್ತಿರಲಿಲ್ಲ; ದೇಶ ನಿವಾಸಿಗಳೆಲ್ಲರೂ ಕಳವಳಗೊಂಡಿದ್ದರು.


ಕೂಷ್ಯನಾದ ಜೆರಹನು ಹತ್ತು ಲಕ್ಷ ಸೈನ್ಯವನ್ನೂ ಮುನ್ನೂರು ರಥಗಳನ್ನೂ ತೆಗೆದುಕೊಂಡು ಇಸ್ರಾಯೇಲ್ಯರಿಗೆ ವಿರುದ್ಧವಾಗಿ ಯುದ್ಧಕ್ಕೆ ಹೊರಟು ಮಾರೇಷಕ್ಕೆ ಬಂದನು.


ಆಗ ಸಮುವೇಲನು ಸೌಲನನ್ನು - ನೀನು ನನ್ನ ವಿಶ್ರಾಂತಿಯನ್ನು ಕೆಡಿಸಿದ್ದೇಕೆ? ನನ್ನನ್ನು ಇಲ್ಲಿಗೆ ಯಾಕೆ ಬರಮಾಡಿದಿ ಎಂದು ಕೇಳಿದನು. ಅದಕ್ಕೆ ಸೌಲನು - ನಾನು ಬಲು ಇಕ್ಕಟ್ಟಿನಲ್ಲಿದ್ದೇನೆ; ಫಿಲಿಷ್ಟಿಯರು ನನಗೆ ವಿರೋಧವಾಗಿ ಯುದ್ಧಕ್ಕೆ ಬಂದಿದ್ದಾರೆ; ದೇವರು ನನ್ನನ್ನು ಬಿಟ್ಟು ದೂರಹೋಗಿದ್ದಾನೆ; ಆತನು ನನಗೆ ಪ್ರವಾದಿಗಳಿಂದಾಗಲಿ ಕನಸುಗಳಿಂದಾಗಲಿ ಉತ್ತರಕೊಡಲೊಲ್ಲನು. ಆದದರಿಂದ ನಾನು ಮಾಡಬೇಕಾದದ್ದನ್ನು ನೀನು ತಿಳಿಸುವಿಯೆಂದು ನಿನ್ನನ್ನು ಇಲ್ಲಿಗೆ ಬರಮಾಡಿದೆನು ಅಂದನು.


ಆ ದೇಶಗಳಲ್ಲಿ ನಿಮಗೆ ಯಾವ ವಿಶ್ರಾಂತಿಯೂ ದೊರೆಯುವದಿಲ್ಲ; ಸ್ವಲ್ಪ ಹೊತ್ತು ಅಂಗಾಲಿಡುವದಕ್ಕೂ ಸ್ಥಳ ಸಿಕ್ಕುವದಿಲ್ಲ. ನೀವು ನಡುಗುವ ಹೃದಯವುಳ್ಳವರಾಗಿಯೂ ದಿಕ್ಕು ತೋರದೆ ಕಂಗೆಟ್ಟವರಾಗಿಯೂ ಮನಗುಂದಿದವರಾಗಿಯೂ ಇರುವಂತೆ ಯೆಹೋವನು ಮಾಡುವನು.


ಇವರು ಆ ವರುಷದಿಂದ ಹದಿನೆಂಟು ವರುಷಗಳವರೆಗೆ ಯೊರ್ದನಿನ ಆಚೆ ಗಿಲ್ಯಾದಿನಲ್ಲಿದ್ದ ಇಸ್ರಾಯೇಲ್ಯರನ್ನು ಬಹಳವಾಗಿ ಪೀಡಿಸುತ್ತಾ ಕುಗ್ಗಿಸುತ್ತಾ ಇದ್ದರು. ಈ ದೇಶವು ಮೊದಲು ಅಮೋರಿಯರದಾಗಿತ್ತು.


ಆಗ ಅವರು ಯೆಹೋವನಿಗೆ - ನಾವು ನಮ್ಮ ದೇವರಾದ ನಿನ್ನನ್ನು ಬಿಟ್ಟು ಬಾಳನ ಪ್ರತಿಮೆಗಳನ್ನು ಪೂಜಿಸಿ ನಿನಗೆ ವಿರುದ್ಧವಾಗಿ ಪಾಪ ಮಾಡಿದ್ದೇವೆ ಎಂದು ಮೊರೆಯಿಡಲು ಆತನು ಅವರಿಗೆ -


ಇಸ್ರಾಯೇಲ್ಯರಿಗೆ ವಿರೋಧವಾಗಿ ಬಂದ ಅಮ್ಮೋನಿಯರು ಸ್ವಲ್ಪದಿನಗಳಾದ ಮೇಲೆ ಯುದ್ಧವನ್ನು ಪ್ರಾರಂಭಿಸಿದರು.


ಯೆಹೋವನು ತಾನು ಮೊದಲೇ ಆಣೆಯಿಟ್ಟು ಹೇಳಿದಂತೆ ಎಲ್ಲಿ ಹೋದರೂ ಆತನ ಕೈ ಅವರಿಗೆ ವಿರೋಧವಾಗಿಯೇ ಇತ್ತು; ಅವರಿಗೆ ಬಹುಸಂಕಟವಾಯಿತು.


ವಿುದ್ಯಾನ್ಯರ ಹಸ್ತವು ಬಲಗೊಂಡದರಿಂದ ಇಸ್ರಾಯೇಲ್ಯರು ಅವರಿಗೆ ಹೆದರಿ ಪರ್ವತಗಳಲ್ಲಿ ಕಂದರಗುಹೆದುರ್ಗಗಳನ್ನು ಮಾಡಿ ಸೇರಿಕೊಂಡರು.


ಇಸ್ರಾಯೇಲ್ಯರಿಗೆ ಕೇಡು ಬಂದಿತು. ತಾವು ಇಕ್ಕಟ್ಟಿನಲ್ಲಿದ್ದೇವೆಂದು ಅವರು ತಿಳಿದು ಗವಿ, ಕಾಡು, ಬಂಡೆ, ನೆಲಮನೆ, ಗುಂಡಿ ಇವುಗಳಲ್ಲಿ ಅಡಗಿಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು