ನ್ಯಾಯಸ್ಥಾಪಕರು 11:17 - ಕನ್ನಡ ಸತ್ಯವೇದವು J.V. (BSI)17 ಅವರು ಅಲ್ಲಿಂದ ಎದೋಮ್ಯರ ಅರಸನ ಬಳಿಗೆ ದೂತರನ್ನು ಕಳುಹಿಸಿ - ನಿನ್ನ ದೇಶವನ್ನು ದಾಟಿಹೋಗುವದಕ್ಕೆ ಅಪ್ಪಣೆಯಾಗಬೇಕೆಂದು ಬೇಡಿಕೊಳ್ಳಲು ಅವನು ಒಪ್ಪಿಕೊಳ್ಳಲಿಲ್ಲ. ತರುವಾಯ ಮೋವಾಬ್ಯರ ಅರಸನ ಬಳಿಗೆ ದೂತರನ್ನು ಕಳುಹಿಸಲು ಅವನೂ ಒಪ್ಪಿಕೊಳ್ಳಲಿಲ್ಲ; ಆದದರಿಂದ ಅವರು ಕಾದೇಶಿನಲ್ಲಿಯೇ ನಿಂತರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಅವರು ಅಲ್ಲಿಂದ ಎದೋಮ್ಯರ ಅರಸನ ಬಳಿಗೆ ದೂತರನ್ನು ಕಳುಹಿಸಿ, ‘ನಿನ್ನ ದೇಶವನ್ನು ದಾಟಿಹೋಗುವುದಕ್ಕೆ ಅಪ್ಪಣೆಯಾಗಬೇಕು’ ಎಂದು ಬೇಡಿಕೊಳ್ಳಲು ಅವನು ಒಪ್ಪಿಕೊಳ್ಳಲಿಲ್ಲ. ತರುವಾಯ ಮೋವಾಬ್ಯರ ಅರಸನ ಬಳಿಗೆ ದೂತರನ್ನು ಕಳುಹಿಸಲು ಅವನೂ ಒಪ್ಪಿಕೊಳ್ಳಲಿಲ್ಲ; ಆದುದರಿಂದ ಅವರು ಕಾದೇಶಿನಲ್ಲಿಯೇ ಉಳಿದುಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಅವರು ಅಲ್ಲಿಂದ ಎದೋಮ್ಯರ ಅರಸನ ಬಳಿಗೆ ದೂತರನ್ನು ಕಳುಹಿಸಿ, ‘ನಿನ್ನ ದೇಶವನ್ನು ದಾಟಿ ಹೋಗುವುದಕ್ಕೆ ಅಪ್ಪಣೆಯಾಗಬೇಕು,’ ಎಂದು ಬೇಡಿಕೊಳ್ಳಲು ಅವನು ಒಪ್ಪಿಕೊಳ್ಳಲಿಲ್ಲ. ತರುವಾಯ ಮೋವಾಬ್ಯರ ಅರಸನ ಬಳಿಗೆ ದೂತರನ್ನು ಕಳುಹಿಸಲು ಅವನು ಒಪ್ಪಿಕೊಳ್ಳಲಿಲ್ಲ; ಆದುದರಿಂದ ಅವರು ಕಾದೇಶಿನಲ್ಲಿಯೇ ನಿಂತರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಅವರು ಎದೋಮ್ಯರ ಅರಸನ ಬಳಿಗೆ ದೂತರನ್ನು ಕಳುಹಿಸಿ, ‘ನಿನ್ನ ಪ್ರದೇಶವನ್ನು ದಾಟಿಹೋಗುವುದಕ್ಕೆ ದಯವಿಟ್ಟು ಅನುಮತಿಕೊಡು’ ಎಂದು ಕೇಳಿಕೊಂಡರು. ಆದರೆ ಎದೋಮಿನ ಅರಸನು ಅವರಿಗೆ ತಮ್ಮ ದೇಶವನ್ನು ದಾಟಿಹೋಗಲು ಅನುಮತಿಕೊಡಲಿಲ್ಲ. ತರುವಾಯ ಅವರು ಮೋವಾಬ್ಯರ ಅರಸನ ಬಳಿಗೆ ಅದೇ ಸಂದೇಶವನ್ನು ಕಳುಹಿಸಿದರು. ಆದರೆ ಮೋವಾಬ್ಯರ ಅರಸನು ಸಹ ಅವರಿಗೆ ಅವರ ದೇಶವನ್ನು ದಾಟಿಹೋಗಲು ಅನುಮತಿ ಕೊಡಲಿಲ್ಲ. ಆದ್ದರಿಂದ ಇಸ್ರೇಲರು ಕಾದೇಶಿನಲ್ಲಿ ನೆಲೆನಿಂತರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಎದೋಮಿನ ಅರಸನ ಬಳಿಗೆ ದೂತರನ್ನು ಕಳುಹಿಸಿ, ‘ನಾನು ನಿನ್ನ ದೇಶವನ್ನು ಹಾದು ಹೋಗಲು ಅಪ್ಪಣೆ ಆಗಬೇಕು,’ ಎಂದು ಹೇಳಿದರು. ಆದರೆ ಎದೋಮಿನ ಅರಸನು ಕೇಳದೆ ಹೋದನು. ಅವರು ಮೋವಾಬಿನ ಅರಸನ ಬಳಿಗೂ ಹಾಗೆಯೇ ಕಳುಹಿಸಿದರು; ಅವನೂ ಒಪ್ಪದೆ ಹೋದನು. ಆದ್ದರಿಂದ ಇಸ್ರಾಯೇಲರು ಕಾದೇಶಿನಲ್ಲಿ ವಾಸಮಾಡಿದರು. ಅಧ್ಯಾಯವನ್ನು ನೋಡಿ |
ನಾವು ಯೊರ್ದನ್ ಹೊಳೆಯನ್ನು ದಾಟಿ ನಮ್ಮ ದೇವರಾದ ಯೆಹೋವನು ನಮಗೆ ಕೊಡುವ ದೇಶವನ್ನು ಸೇರಬೇಕೆಂದಿದ್ದೇವೆ. ಸೇಯೀರಿನಲ್ಲಿರುವ ಏಸಾವ್ಯರೂ ಆರ್ ಪ್ರದೇಶದಲ್ಲಿರುವ ಮೋವಾಬ್ಯರೂ ನಮಗೆ ದಾರಿಕೊಟ್ಟಂತೆ ನೀನೂ ಕೊಡಬೇಕು. ಕಾಲ್ನಡೆಯಾಗಿ ನಿನ್ನ ದೇಶವನ್ನು ದಾಟಿಹೋಗುವದಕ್ಕೆ ನಿನ್ನ ಅಪ್ಪಣೆಯಾಗಬೇಕೇ ಹೊರತು ಬೇರೆ ಏನೂ ಬೇಕಿಲ್ಲವೆಂದು ವಿನಯಪೂರ್ವಕವಾದ ಮಾತುಗಳಿಂದ ಹೇಳಿಸಿದೆನು.