ನ್ಯಾಯಸ್ಥಾಪಕರು 11:20 - ಕನ್ನಡ ಸತ್ಯವೇದವು J.V. (BSI)20 ಆದರೆ ಸೀಹೋನನು ಅವರನ್ನು ನಂಬದವನಾಗಿ ತನ್ನ ಸೀಮೆಯನ್ನು ದಾಟಿಹೋಗುವದಕ್ಕೆ ಅಪ್ಪಣೆಕೊಡದೆ ತನ್ನ ಜನರನ್ನು ಕೂಡಿಸಿಕೊಂಡು ಯಹಚಕ್ಕೆ ಬಂದು ಅವರೊಡನೆ ಯುದ್ಧಮಾಡಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಆದರೆ ಸೀಹೋನನು ಅವರನ್ನು ನಂಬದೆ ತನ್ನ ಸೀಮೆಯನ್ನು ದಾಟಿಹೋಗುವುದಕ್ಕೆ ಅಪ್ಪಣೆಕೊಡದೆ ತನ್ನ ಜನರನ್ನು ಕೂಡಿಸಿಕೊಂಡು ಯಹಚಕ್ಕೆ ಬಂದು ಅವರೊಡನೆ ಯುದ್ಧಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಆದರೆ ಸೀಹೋನನು ಅವರನ್ನು ನಂಬದೆ ತನ್ನ ಸೀಮೆಯನ್ನು ದಾಟಿಹೋಗುವುದಕ್ಕೆ ಅಪ್ಪಣೆಕೊಡದೆ ತನ್ನ ಜನರನ್ನು ಕೂಡಿಸಿಕೊಂಡು ಯಹಚಕ್ಕೆ ಬಂದು ಅವರೊಡನೆ ಯುದ್ಧಮಾಡಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಆದರೆ ಅಮೋರಿಯರ ಅರಸನಾದ ಸೀಹೋನನು ಇಸ್ರೇಲರಿಗೆ ತನ್ನ ಪ್ರದೇಶದ ಸೀಮೆಯನ್ನು ದಾಟಲು ಬಿಡಲಿಲ್ಲ. ಸೀಹೋನನು ತನ್ನ ಜನರನ್ನೆಲ್ಲಾ ಸೇರಿಸಿ ಯಹಚದಲ್ಲಿ ಪಾಳೆಯಮಾಡಿಕೊಂಡನು. ಅಮೋರಿಯರು ಇಸ್ರೇಲರೊಂದಿಗೆ ಯುದ್ಧಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಆದರೆ ಸೀಹೋನನು ತನ್ನ ಮೇರೆಯನ್ನು ದಾಟುವುದಕ್ಕೆ ಇಸ್ರಾಯೇಲರನ್ನು ನಂಬದೆ, ತನ್ನ ಜನರನ್ನೆಲ್ಲಾ ಕೂಡಿಸಿ, ಯಹಚಿನಲ್ಲಿ ದಂಡಿಳಿದು, ಇಸ್ರಾಯೇಲರಿಗೆ ವಿರೋಧವಾಗಿ ಯುದ್ಧಮಾಡಿದನು. ಅಧ್ಯಾಯವನ್ನು ನೋಡಿ |