Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 11:32 - ಕನ್ನಡ ಸತ್ಯವೇದವು J.V. (BSI)

32 ಯೆಪ್ತಾಹನು ಅಮ್ಮೋನಿಯರಿಗೆ ವಿರೋಧವಾಗಿ ಯುದ್ಧಕ್ಕೆ ಹೋಗಲು ಯೆಹೋವನು ಅವರನ್ನು ಅವನ ಕೈಗೆ ಒಪ್ಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಯೆಪ್ತಾಹನು ಅಮ್ಮೋನಿಯರಿಗೆ ವಿರೋಧವಾಗಿ ಯುದ್ಧಕ್ಕೆ ಹೋಗಲು ಯೆಹೋವನು ಅವರನ್ನು ಅವನ ಕೈಗೆ ಒಪ್ಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 ಯೆಪ್ತಾಹನು ನದಿಯನ್ನು ದಾಟಿ ಅಮ್ಮೋನಿಯರಿಗೆ ವಿರುದ್ಧ ಯುದ್ಧಕ್ಕೆ ಹೋಗಲು ಅವರನ್ನು ಸರ್ವೇಶ್ವರ ಅವನ ಕೈಗೆ ಒಪ್ಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ಆಮೇಲೆ ಯೆಫ್ತಾಹನು ಅಮ್ಮೋನಿಯರ ದೇಶಕ್ಕೆ ಹೋಗಿ ಯುದ್ಧಮಾಡಿದನು. ಅವರನ್ನು ಸೋಲಿಸಲು ಯೆಹೋವನು ಯೆಫ್ತಾಹನಿಗೆ ಸಹಾಯ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ಹೀಗೆ ಯೆಫ್ತಾಹನು ಅಮ್ಮೋನಿಯರ ಮೇಲೆ ಯುದ್ಧಮಾಡುವುದಕ್ಕೆ ಅವರೆದುರಿಗೆ ಹೊರಟುಹೋದನು. ಯೆಹೋವ ದೇವರು ಅವರನ್ನು ಅವನ ಕೈಯಲ್ಲಿ ಒಪ್ಪಿಸಿಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 11:32
6 ತಿಳಿವುಗಳ ಹೋಲಿಕೆ  

ಯೆಹೋವನ ಆತ್ಮವು ಅವನ ಮೇಲೆ ಬಂದದರಿಂದ ಅವನು ಇಸ್ರಾಯೇಲ್ಯರ ನ್ಯಾಯಸ್ಥಾಪನೆಗೋಸ್ಕರ ಯುದ್ಧಕ್ಕೆ ಹೊರಟನು. ಯೆಹೋವನು ಎರಡು ನದಿಗಳ ಮಧ್ಯದಲ್ಲಿರುವ ಅರಾಮ್ ರಾಜ್ಯದ ಅರಸನಾದ ಕೂಷನ್ ರಿಷಾತಯಿಮನನ್ನು ಅವನ ಕೈಗೆ ಒಪ್ಪಿಸಿಕೊಟ್ಟದರಿಂದ ಅವನು ಅವನನ್ನು ಪೂರ್ಣವಾಗಿ ಸೋಲಿಸಿಬಿಟ್ಟನು.


ವೈರಿಗಳ ಹಿಂಸೆಯನ್ನು ತಾಳಲಾರದ ಇಸ್ರಾಯೇಲ್ಯರ ಗೋಳಾಟವನ್ನು ಯೆಹೋವನು ಕೇಳಿ ಕನಿಕರಪಟ್ಟು ನ್ಯಾಯಸ್ಥಾಪಕರನ್ನು ಎಬ್ಬಿಸಿ ಅವರ ಜೀವಮಾನವೆಲ್ಲಾ ಅವರ ಸಂಗಡ ಇದ್ದು ಅವರ ಮೂಲಕವಾಗಿ ಇಸ್ರಾಯೇಲ್ಯರನ್ನು ಶತ್ರುಗಳಿಂದ ಬಿಡಿಸಿದನು.


ಅವರು ಒಪ್ಪಿ ಯೆಹೂದ್ಯರ ಜೊತೆಯಲ್ಲಿ ಯುದ್ಧಕ್ಕೆ ಹೋದರು. ಆಗ ಯೆಹೋವನು ಕಾನಾನ್ಯರನ್ನೂ ಪೆರಿಜ್ಜೀಯರನ್ನೂ ಅವರ ಕೈಗೆ ಒಪ್ಪಿಸಿದ್ದರಿಂದ ಅವರು ಅವರಲ್ಲಿ ಹತ್ತು ಸಾವಿರ ಮಂದಿಯನ್ನು ಬೆಜೆಕಿನಲ್ಲಿ ಹತಮಾಡಿದರು.


ನಾನು ಸುರಕ್ಷಿತನಾಗಿ ಮನೆಗೆ ಮುಟ್ಟಿದಾಗ ನನ್ನನ್ನು ಎದುರುಗೊಳ್ಳುವದಕ್ಕಾಗಿ ನನ್ನ ಮನೆಯ ಬಾಗಲಿನಿಂದ ಮೊದಲು ಬರುವಂಥ ಪ್ರಾಣಿಯು ನಿನ್ನದೇ ಎಂದು ಅದನ್ನು ನಿನಗೋಸ್ಕರ ಹೋಮಮಾಡುವೆನು ಎಂದು ಹರಕೆಮಾಡಿದನು.


ಅವನು ಅವರನ್ನು ಸೋಲಿಸಿ ಅರೋಯೇರಿನಿಂದ ವಿುನ್ನೀತಿನ ದಾರಿಯವರೆಗೂ ಆಬೇಲ್ ಕೆರಾಮೀವಿುನವರೆಗೂ ಇಪ್ಪತ್ತು ಪಟ್ಟಣಗಳನ್ನು ಹಾಳುಮಾಡಿಬಿಟ್ಟನು. ಹೀಗೆ ದೊಡ್ಡ ಜಯವಾಗಿ ಅಮ್ಮೋನಿಯರು ಇಸ್ರಾಯೇಲ್ಯರ ಮುಂದೆ ತಗ್ಗಿಸಲ್ಪಟ್ಟರು.


ಆಗ ಯೆಹೋವನು ಅವರನ್ನು ಸೂರೆ ಮಾಡುವವರ ಕೈಯಿಂದ ತಪ್ಪಿಸುವದಕ್ಕೋಸ್ಕರ ನ್ಯಾಯಸ್ಥಾಪಕರನ್ನು ಕಳುಹಿಸಿದರೂ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು