Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 11:36 - ಕನ್ನಡ ಸತ್ಯವೇದವು J.V. (BSI)

36 ಆಕೆಯು ಅವನಿಗೆ - ನನ್ನ ತಂದೆಯೇ, ನೀನು ಬಾಯ್ದೆರೆದು ಯೆಹೋವನಿಗೆ ಹರಕೆ ಮಾಡಿದ ಮೇಲೆ ಆತನು ನಿನ್ನ ಶತ್ರುಗಳಾದ ಅಮ್ಮೋನಿಯರಿಗೆ ಮುಯ್ಯಿತೀರಿಸಿದದರಿಂದ ನಿನ್ನ ಬಾಯಿಂದ ಹೊರಟದ್ದನ್ನೇ ನೆರವೇರಿಸು ಅಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

36 ಆಕೆಯು ಅವನಿಗೆ, “ನನ್ನ ತಂದೆಯೇ, ನೀನು ಬಾಯ್ದೆರೆದು ಯೆಹೋವನಿಗೆ ಹರಕೆಮಾಡಿದ ಮೇಲೆ ಆತನು ನಿನ್ನ ಶತ್ರುಗಳಾದ ಅಮ್ಮೋನಿಯರಿಗೆ ಮುಯ್ಯಿತೀರಿಸಿದ್ದರಿಂದ ನಿನ್ನ ಬಾಯಿಂದ ಹೊರಟದ್ದನ್ನೇ ನೆರವೇರಿಸು” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

36 ಆಕೆ ಅವನಿಗೆ, “ಅಪ್ಪಾ, ನೀನು ಬಾಯಾರೆ ಸರ್ವೇಶ್ವರನಿಗೆ ಹರಕೆ ಮಾಡಿದ ಮೇಲೆ ಅವರು ನಿನ್ನ ಶತ್ರುಗಳಾದ ಅಮ್ಮೋನಿಯರಿಗೆ ಮುಯ್ಯಿ ತೀರಿಸಿದ್ದಾರೆ. ಆದ್ದರಿಂದ ನಿನ್ನ ಬಾಯಿಂದ ಬಂದದ್ದನ್ನೇ ನೆರವೇರಿಸು,” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

36 ಆಗ ಯೆಫ್ತಾಹನ ಮಗಳು ಅವನಿಗೆ, “ನನ್ನ ತಂದೆಯೇ, ನೀನು ಯೆಹೋವನಿಗೆ ಹರಕೆ ಹೊತ್ತಿರುವೆ. ನಿನ್ನ ಹರಕೆಯನ್ನು ಪೂರ್ಣಗೊಳಿಸು. ಏನು ಮಾಡುವೆನೆಂದು ಹೇಳಿದ್ದಿಯೋ ಅದನ್ನು ಮಾಡು. ನಿನ್ನ ಶತ್ರುಗಳಾದ ಅಮ್ಮೋನಿಯರನ್ನು ಸೋಲಿಸಲು ಯೆಹೋವನು ನಿನಗೆ ಸಹಾಯ ಮಾಡಿದ್ದಾನೆ” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

36 ಅವಳು ಅವನಿಗೆ, “ಅಪ್ಪಾ, ನೀನು ಯೆಹೋವ ದೇವರಿಗೆ ನಿನ್ನ ಬಾಯಿ ತೆರೆದೆಯಲ್ಲ. ಯೆಹೋವ ದೇವರು ಅಮ್ಮೋನಿಯರಾದ ನಿನ್ನ ಶತ್ರುಗಳಿಗೆ ನಿನ್ನಿಂದ ಮುಯ್ಯಿ ತೀರಿಸಿದ್ದರಿಂದ, ಅವರಿಗೆ ನಿನ್ನ ಬಾಯಿಂದ ಹೊರಟ ಮಾತಿನ ಪ್ರಕಾರವೇ ನನಗೆ ಮಾಡು,” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 11:36
10 ತಿಳಿವುಗಳ ಹೋಲಿಕೆ  

ಚಾದೋಕನ ಮಗನಾದ ಅಹೀಮಾಚನು ಯೋವಾಬನಿಗೆ - ಅಪ್ಪಣೆಯಾಗಲಿ, ನಾನು ಅರಸನ ಬಳಿಗೆ ಓಡಿಹೋಗಿ ಯೆಹೋವನು ಅವನ ವೈರಿಗಳಿಗೆ ಮುಯ್ಯಿ ತೀರಿಸಿದ್ದಾನೆಂಬ ಶುಭವರ್ತಮಾನವನ್ನು ತಿಳಿಸುವೆನು ಅನ್ನಲು


ಅವರು ನನ್ನ ಪ್ರಾಣದ ಸಂರಕ್ಷಣೆಗಾಗಿ ತಮ್ಮ ಪ್ರಾಣಗಳನ್ನು ಅಪಾಯಕ್ಕೆ ಗುರಿಮಾಡಿದರು. ನಾನು ಮಾತ್ರವೇ ಅಲ್ಲ, ಅನ್ಯಜನರ ಸಭೆಗಳವರೆಲ್ಲರೂ ಅವರ ಉಪಕಾರವನ್ನು ಸ್ಮರಿಸುತ್ತಾರೆ.


ಅದಕ್ಕೆ ಪೌಲನು - ನೀವು ಅತ್ತತ್ತು ಯಾಕೆ ನನ್ನನ್ನು ಎದೆ ಒಡಿಸುತ್ತೀರಿ? ನಾನು ಕರ್ತನಾದ ಯೇಸುವಿನ ಹೆಸರಿನ ನಿವಿುತ್ತವಾಗಿ ಯೆರೂಸಲೇವಿುನಲ್ಲಿ ಬೇಡೀಹಾಕಿಸಿಕೊಳ್ಳುವದಕ್ಕೆ ಮಾತ್ರವಲ್ಲದೆ ಸಾಯುವದಕ್ಕೂ ಸಿದ್ಧವಾಗಿದ್ದೇನೆ ಅಂದನು.


ಆದರೆ ಪ್ರಾಣವನ್ನು ಉಳಿಸಿಕೊಳ್ಳುವದೇ ವಿಶೇಷವೆಂದು ನಾನು ಎಣಿಸುವದಿಲ್ಲ. ದೇವರ ಕೃಪೆಯ ವಿಷಯವಾದ ಸುವಾರ್ತೆಯನ್ನು ಆಸಕ್ತಿಯಿಂದ ಪ್ರಕಟಿಸಬೇಕೆಂಬದಾಗಿ ಕರ್ತನಾದ ಯೇಸುವಿನಿಂದ ನಾನು ಹೊಂದಿರುವ ಸೇವೆಯೆಂಬ ಓಟವನ್ನು ಕಡೆಗಾಣಿಸುವದೊಂದೇ ನನ್ನ ಅಪೇಕ್ಷೆ.


ಅದಕ್ಕೆ ಮೆಫೀಬೋಶೆತನು - ಚೀಬನು ಎಲ್ಲವನ್ನು ತಾನೇ ತೆಗೆದುಕೊಂಡರೂ ತೆಗೆದುಕೊಳ್ಳಲಿ, ನನ್ನ ಒಡೆಯನಾದ ಅರಸನು ತನ್ನ ಮನೆಗೆ ಸುರಕ್ಷಿತವಾಗಿ ಬಂದದ್ದೇ ಸಾಕು ಅಂದನು.


ಅಷ್ಟರಲ್ಲಿ ಕೂಷ್ಯನೂ ಬಂದು - ನನ್ನ ಒಡೆಯನಾದ ಅರಸನಿಗೆ ಶುಭವರ್ತಮಾನ ತಂದಿದ್ದೇನೆ; ಯೆಹೋವನು ನಿನಗೆ ವಿರೋಧವಾಗಿ ಎದ್ದವರೆಲ್ಲರಿಗೂ ಮುಯ್ಯಿತೀರಿಸಿದ್ದಾನೆ ಅಂದನು.


ಯಾವನಾದರೂ ಯೆಹೋವನಿಗೆ ಹರಕೆಮಾಡಿದರೆ ಇಲ್ಲವೆ ತಾನು ಯಾವದಾದರೂ ಒಂದನ್ನು ಮುಟ್ಟದೆ ಇರುವೆನೆಂದು ಆಣೆಯಿಟ್ಟುಕೊಂಡರೆ ಅವನು ತನ್ನ ಮಾತನ್ನು ಮೀರದೆ ಹೇಳಿದಂತೆಯೇ ನೆರವೇರಿಸಬೇಕು.


[ಅವರಲ್ಲಿ ಮೊದಲನೆಯವನು] ಹೆಷ್ಬೋನಿನಲ್ಲಿದ್ದ ಅಮೋರಿಯರ ಅರಸನಾದ ಸೀಹೋನ್ ಎಂಬವನು. ಅರ್ನೋನ್ ತಗ್ಗಿನ ಅಂಚಿನಲ್ಲಿರುವ ಅರೋಯೇರ್ ಪಟ್ಟಣವು ಮತ್ತು ತಗ್ಗಿನಲ್ಲಿಯೇ ಇರುವ ಪಟ್ಟಣವು ಇವುಗಳು ಮೊದಲುಗೊಂಡು ಅಮ್ಮೋನಿಯರ ಮೇರೆಯಾಗಿರುವ ಯಬ್ಬೋಕ್ ಹೊಳೆಯವರೆಗಿರುವ ಗಿಲ್ಯಾದಿನ ಅರ್ಧ ಪ್ರಾಂತವು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು