Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 11:39 - ಕನ್ನಡ ಸತ್ಯವೇದವು J.V. (BSI)

39 ಎರಡು ತಿಂಗಳು ಕಳೆದನಂತರ ಆಕೆಯು ತಿರಿಗಿ ತಂದೆಯ ಹತ್ತಿರ ಬರಲು ಅವನು ತನ್ನ ಹರಕೆಯನ್ನು ತೀರಿಸಿದನು. ಆಕೆಯು ಪುರುಷನನ್ನರಿಯದವಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

39 ಎರಡು ತಿಂಗಳು ಕಳೆದ ನಂತರ ಆಕೆ ಪುನಃ ತಂದೆಯ ಹತ್ತಿರ ಬರಲು ಅವನು ತನ್ನ ಹರಕೆಯನ್ನು ತೀರಿಸಿದನು. ಆಕೆಯು ಪುರುಷನನ್ನರಿಯದವಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

39 ಎರಡು ತಿಂಗಳು ಕಳೆದ ನಂತರ ಆಕೆ ಮರಳಿ ತಂದೆಯ ಹತ್ತಿರ ಬಂದಳು. ಅವನು ತನ್ನ ಹರಕೆಯನ್ನು ತೀರಿಸಿದನು. ಆಕೆ ಕನ್ಯೆಯಾಗಿಯೇ ಸತ್ತಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

39 ಎರಡು ತಿಂಗಳು ಗತಿಸಿದ ಮೇಲೆ ಯೆಫ್ತಾಹನ ಮಗಳು ತನ್ನ ತಂದೆಯಲ್ಲಿಗೆ ಬಂದಳು. ಯೆಫ್ತಾಹನು ದೇವರಿಗೆ ಹರಕೆ ಹೊತ್ತಂತೆ ಮಾಡಿದನು. ಯೆಫ್ತಾಹನ ಮಗಳು ಎಂದೂ ಯಾರೊಂದಿಗೂ ಲೈಂಗಿಕ ಸಂಬಂಧ ಹೊಂದಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

39 ಎರಡು ತಿಂಗಳು ತೀರಿದಾಗ ತನ್ನ ತಂದೆಯ ಬಳಿಗೆ ಬಂದಳು. ಆಗ ಅವನು ಮಾಡಿದ್ದ ತನ್ನ ಪ್ರಮಾಣದ ಪ್ರಕಾರ ಅವಳಿಗೆ ತೀರ್ಪನ್ನು ಈಡೇರಿಸಿದನು. ಅವಳು ಕನ್ಯೆಯಾಗಿಯೇ ಮರಣಹೊಂದಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 11:39
12 ತಿಳಿವುಗಳ ಹೋಲಿಕೆ  

ನಾನು ಸುರಕ್ಷಿತನಾಗಿ ಮನೆಗೆ ಮುಟ್ಟಿದಾಗ ನನ್ನನ್ನು ಎದುರುಗೊಳ್ಳುವದಕ್ಕಾಗಿ ನನ್ನ ಮನೆಯ ಬಾಗಲಿನಿಂದ ಮೊದಲು ಬರುವಂಥ ಪ್ರಾಣಿಯು ನಿನ್ನದೇ ಎಂದು ಅದನ್ನು ನಿನಗೋಸ್ಕರ ಹೋಮಮಾಡುವೆನು ಎಂದು ಹರಕೆಮಾಡಿದನು.


ಹೋರಿಯನ್ನು ವಧಿಸುವವನು ನರಬಲಿಯನ್ನು ಕೊಡುತ್ತಾನೆ; ಕುರಿಯನ್ನು ಕಡಿಯುವವನು ನಾಯಿಯ ಕತ್ತನ್ನು ಮುರಿಯುತ್ತಾನೆ; ನೈವೇದ್ಯಮಾಡುವವನು ಹಂದಿಯ ರಕ್ತವನ್ನು ಅರ್ಪಿಸುತ್ತಾನೆ; ಧೂಪಹಾಕುವವನು ವಿಗ್ರಹಾರಾಧನೆ ಮಾಡುತ್ತಾನೆ; ಇವರು ಮನಸ್ಸಿಗೆ ಬಂದ ಮಾರ್ಗಗಳನ್ನು ಆರಿಸಿಕೊಂಡು ತಮ್ಮ ಅಸಹ್ಯಕಾರ್ಯಗಳಲ್ಲಿ ಮನಃಪೂರ್ವಕವಾಗಿ ಆನಂದಿಸುತ್ತಾರೆ;


ಬಾಲಕನಾದ ಸಮುವೇಲನು ಏಫೋದೆಂಬ ನಾರುಮಡಿಯಂಗಿಯನ್ನು ತೊಟ್ಟುಕೊಂಡು ಯೆಹೋವನ ಸಾನ್ನಿಧ್ಯಸೇವೆಯನ್ನು ಮಾಡುತ್ತಿದ್ದನು.


ನಾನು ಇವನನ್ನು ಯೆಹೋವನಿಗೇ ಒಪ್ಪಿಸಿಬಿಟ್ಟಿದ್ದೇನೆ. ಇವನು ಜೀವದಿಂದಿರುವ ತನಕ ಆತನಿಗೇ ಪ್ರತಿಷ್ಠಿತನಾಗಿರುವನು ಎಂದು ಹೇಳಿದಳು. ಆಮೇಲೆ ಅವರು ಯೆಹೋವನಿಗೆ ನಮಸ್ಕರಿಸಿದರು.


ಅನಂತರ ಆಕೆಯು ಮೂರು ವರುಷದ ಒಂದು ಹೋರಿಯನ್ನೂ ಮೂವತ್ತು ಸೇರು ಹಿಟ್ಟನ್ನೂ ಒಂದು ತಿತ್ತಿ ದ್ರಾಕ್ಷಾರಸವನ್ನೂ ತೆಗೆದುಕೊಂಡು ಪುತ್ರಸಹಿತವಾಗಿ ಶೀಲೋವಿನಲ್ಲಿದ್ದ ಯೆಹೋವನ ಮಂದಿರಕ್ಕೆ ಬಂದಳು; ಮಗನು ಇನ್ನೂ ಚಿಕ್ಕವನಾಗಿದ್ದನು.


ಮಗನು ಮೊಲೆಬಿಡುವವರೆಗೂ ನಾನು ಬರುವದಿಲ್ಲ; ಅವನು ಯೆಹೋವನ ಸನ್ನಿಧಿಯಲ್ಲಿ ಕಾಣಿಸಿಕೊಂಡು ಯಾವಾಗಲೂ ಅಲ್ಲಿಯೇ ಇರುವ ಹಾಗೆ ಆಮೇಲೆ ತೆಗೆದುಕೊಂಡು ಬರುವೆನು ಎಂದು ಹೇಳಿದಳು.


ಸೇನಾಧೀಶ್ವರನಾದ ಯೆಹೋವನೇ, ನಿನ್ನ ದಾಸಿಯ ದುಃಖವನ್ನು ಪರಾಂಬರಿಸು; ನನ್ನನ್ನು ತಿರಸ್ಕರಿಸದೆ ಕನಿಕರವಿಟ್ಟು ನನಗೊಬ್ಬ ಮಗನನ್ನು ಕೊಡಬೇಕು; ಅವನು ಜೀವದಿಂದಿರುವ ತನಕ ನಿನ್ನವನಾಗಿಯೇ ಇರುವ ಹಾಗೆ ನಿನಗೆ ಪ್ರತಿಷ್ಠಿಸಿಕೊಡುವೆನು; ಅವನ ತಲೆಯ ಮೇಲೆ ಕ್ಷೌರ ಕತ್ತಿಯನ್ನು ಬರಗೊಡುವದಿಲ್ಲ ಎಂದು ಪ್ರಾರ್ಥಿಸಿ ಹರಕೆಮಾಡಿದಳು.


ಯೆಹೋವನಿಗೆ ಅಸಹ್ಯವಾಗಿರುವ ಹಲವು ಹೇಸಿಗೆ ಕೆಲಸಗಳನ್ನು ಅವರು ತಮ್ಮ ದೇವತೆಗಳಿಗೋಸ್ಕರ ನಡಿಸುತ್ತಾರಲ್ಲಾ; ತಮ್ಮ ಗಂಡು ಹೆಣ್ಣು ಮಕ್ಕಳನ್ನು ತಮ್ಮ ದೇವತೆಗಳಿಗೋಸ್ಕರ ಬೆಂಕಿಯಲ್ಲಿ ಸುಡುತ್ತಾರಲ್ಲಾ. ನೀವು ನಿಮ್ಮ ದೇವರಾದ ಯೆಹೋವನನ್ನು ಹಾಗೆ ಸೇವಿಸಲೇಬಾರದು.


ಎರಡು ತಿಂಗಳ ತನಕ ಹೋಗಿ ಬಾ ಎಂದು ಕಳುಹಿಸಿದನು. ಆಕೆಯು ಸಖಿಯರ ಸಹಿತವಾಗಿ ಬೆಟ್ಟದ ಪ್ರದೇಶಗಳಿಗೆ ಹೋಗಿ ತನ್ನ ಕನ್ಯಾವಸ್ಥೆಗೋಸ್ಕರ ಗೋಳಾಡಿದಳು.


ಇಸ್ರಾಯೇಲ್ಯರ ಹೆಣ್ಣುಮಕ್ಕಳು ಪ್ರತಿವರುಷದಲ್ಲಿಯೂ ನಾಲ್ಕು ದಿವಸ ಗಿಲ್ಯಾದ್ಯನಾದ ಯೆಪ್ತಾಹನ ಮಗಳನ್ನು ವರ್ಣಿಸುತ್ತಾರೆ. ಇದು ಅವರಲ್ಲಿ ಒಂದು ಪದ್ಧತಿ.


ಯೆರೆಮೀಯನು ಯೋಷೀಯನನ್ನು ಕುರಿತು ಶೋಕಗೀತವನ್ನು ರಚಿಸಿದನು. ಎಲ್ಲಾ ಗಾಯಕರೂ ಗಾಯಕಿಯರೂ ಅವನನ್ನು ಇಂದಿನವರೆಗೆ ತಮ್ಮ ಶೋಕಗೀತಗಳಲ್ಲಿ ವರ್ಣಿಸುತ್ತಿರುತ್ತಾರೆ. ಆ ಗೀತಗಳನ್ನು ಹಾಡುವದು ಇಸ್ರಾಯೇಲ್ಯರಲ್ಲಿ ಒಂದು ಪದ್ಧತಿಯಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು