ನ್ಯಾಯಸ್ಥಾಪಕರು 12:14 - ಕನ್ನಡ ಸತ್ಯವೇದವು J.V. (BSI)14 ಇವನಿಗೆ ನಾಲ್ವತ್ತು ಮಂದಿ ಮಕ್ಕಳೂ ಮೂವತ್ತು ಮಂದಿ ಮೊಮ್ಮಕ್ಕಳೂ ಇದ್ದರು. ಇವರೆಲ್ಲರಿಗೆ ಸವಾರಿಮಾಡುವದಕ್ಕೋಸ್ಕರ ಎಪ್ಪತ್ತು ಕತ್ತೆಗಳಿದ್ದವು. ಪಿರಾತೋನಿನವನೂ ಹಿಲ್ಲೇಲನ ಮಗನೂ ಆದ ಅಬ್ದೋನನು ಇಸ್ರಾಯೇಲ್ಯರನ್ನು ಎಂಟು ವರುಷ ಪಾಲಿಸಿದನಂತರ ಮರಣಹೊಂದಿದನು; ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಇವನಿಗೆ ನಲ್ವತ್ತು ಮಂದಿ ಮಕ್ಕಳೂ, ಮೂವತ್ತು ಮಂದಿ ಮೊಮ್ಮಕ್ಕಳೂ ಇದ್ದರು. ಇವರೆಲ್ಲರಿಗೆ ಸವಾರಿಮಾಡುವುದಕ್ಕೋಸ್ಕರ ಎಪ್ಪತ್ತು ಕತ್ತೆಗಳಿದ್ದವು. ಪಿರಾತೋನಿನವನೂ ಹಿಲ್ಲೇಲನ ಮಗನೂ ಆದ ಅಬ್ದೋನನು ಇಸ್ರಾಯೇಲರನ್ನು ಎಂಟು ವರ್ಷಗಳ ಕಾಲ ಪಾಲಿಸಿದ ನಂತರ ಮರಣಹೊಂದಿದನು; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಇವನಿಗೆ ನಾಲ್ವತ್ತು ಮಂದಿ ಮಕ್ಕಳೂ ಮೂವತ್ತು ಮಂದಿ ಮೊಮ್ಮಕ್ಕಳೂ ಇದ್ದರು. ಇವರೆಲ್ಲರಿಗೆ ಸವಾರಿ ಮಾಡುವುದಕ್ಕಾಗಿ ಎಪ್ಪತ್ತು ಹೇಸರಕತ್ತೆಗಳಿದ್ದವು. ಪಿರಾತೋನಿನವನೂ ಹಿಲ್ಲೇಲನ ಮಗನೂ ಆದ ಅಬ್ದೋನನು ಇಸ್ರಯೇಲರನ್ನು ಎಂಟು ವರ್ಷ ಪಾಲಿಸಿದ ನಂತರ ಮರಣಹೊಂದಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಅಬ್ದೋನನಿಗೆ ನಲವತ್ತು ಮಕ್ಕಳೂ ಮೂವತ್ತು ಮೊಮ್ಮಕ್ಕಳೂ ಇದ್ದರು. ಇವರೆಲ್ಲರಿಗೆ ಸವಾರಿ ಮಾಡುವುದಕ್ಕೋಸ್ಕರ ಎಪ್ಪತ್ತು ಕತ್ತೆಗಳಿದ್ದವು. ಅಬ್ದೋನನು ಎಂಟು ವರ್ಷ ಇಸ್ರೇಲರಿಗೆ ನ್ಯಾಯಾಧೀಶನಾಗಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಅವನಿಗೆ ಎಪ್ಪತ್ತು ಕತ್ತೆಗಳ ಮೇಲೆ ಏರುವ ನಾಲ್ವತ್ತು ಮಂದಿ ಮಕ್ಕಳೂ, ಮೂವತ್ತು ಮಂದಿ ಮೊಮ್ಮಕ್ಕಳೂ ಇದ್ದರು. ಅವನು ಇಸ್ರಾಯೇಲಿಗೆ ಎಂಟು ವರ್ಷ ನ್ಯಾಯತೀರಿಸಿದನು. ಅಧ್ಯಾಯವನ್ನು ನೋಡಿ |