Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 12:3 - ಕನ್ನಡ ಸತ್ಯವೇದವು J.V. (BSI)

3 ನೀವು ಸಹಾಯಮಾಡುವದಿಲ್ಲವೆಂದು ತಿಳಿದು ಜೀವವನ್ನು ಕೈಯಲ್ಲಿ ಹಿಡಿದು ಅಮ್ಮೋನಿಯರೊಡನೆ ಯುದ್ಧಕ್ಕೆ ಹೋದೆನು; ಯೆಹೋವನು ಅವರನ್ನು ನನ್ನ ಕೈಗೆ ಒಪ್ಪಿಸಿದನು. ಹೀಗಿರಲು ನೀವು ಈಗ ಬಂದು ನನ್ನೊಡನೆ ಕಲಹಮಾಡುವದೇಕೆ ಎಂದು ಉತ್ತರಕೊಟ್ಟು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ನೀವು ಸಹಾಯಮಾಡುವುದಿಲ್ಲವೆಂದು ತಿಳಿದು ಜೀವವನ್ನು ಕೈಯಲ್ಲಿ ಹಿಡಿದು ಅಮ್ಮೋನಿಯರೊಡನೆ ಯುದ್ಧಕ್ಕೆ ಹೋದೆನು. ಯೆಹೋವನು ಅವರನ್ನು ನನ್ನ ಕೈಗೆ ಒಪ್ಪಿಸಿದನು. ಹೀಗಿರಲು ನೀವು ಈಗ ಬಂದು ನನ್ನೊಡನೆ ಕಲಹಮಾಡುವುದೇಕೆ?” ಎಂದು ಉತ್ತರಿಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ನೀವು ಸಹಾಯ ಮಾಡುವುದಿಲ್ಲ ಎಂದು ತಿಳಿದು ಪ್ರಾಣವನ್ನು ಕೈಯಲ್ಲಿ ಹಿಡಿದು ಅಮ್ಮೋನಿಯರೊಡನೆ ಯುದ್ಧಕ್ಕೆ ಹೋದೆ; ಸರ್ವೇಶ್ವರ ಅವರನ್ನು ನನ್ನ ಕೈಗೆ ಒಪ್ಪಿಸಿದರು. ಹೀಗಿರಲು, ನೀವು ಈಗ ಬಂದು ನನ್ನೊಡನೆ ಕಲಹಮಾಡುವುದೇಕೆ?” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ನೀವು ನಮ್ಮ ಸಹಾಯಕ್ಕೆ ಬರುವುದಿಲ್ಲವೆಂದು ತಿಳಿದಾಗ ನಾನು ನನ್ನ ಜೀವವನ್ನೇ ಗಂಡಾಂತರಕ್ಕೆ ಒಡ್ಡಿದೆ. ಅಮ್ಮೋನಿಯರ ವಿರುದ್ಧ ಯುದ್ಧಮಾಡಲು ನಾನು ನದಿಯನ್ನು ದಾಟಿಹೋದೆ. ಅವರನ್ನು ಸೋಲಿಸಲು ಯೆಹೋವನು ನನಗೆ ಸಹಾಯ ಮಾಡಿದನು. ಈಗ ನೀವು ನನ್ನ ಸಂಗಡ ಯುದ್ಧ ಮಾಡುವುದಕ್ಕಾಗಿ ಏಕೆ ಬಂದಿದ್ದೀರಿ?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ನೀವು ನನ್ನನ್ನು ರಕ್ಷಿಸುವುದಿಲ್ಲವೆಂದು ನಾನು ಕಂಡು ನನ್ನ ಪ್ರಾಣವನ್ನು ಕೈಯಲ್ಲಿ ಹಿಡಿದುಕೊಂಡು, ಅಮ್ಮೋನಿಯರಿಗೆ ವಿರೋಧವಾಗಿ ಹೋದೆನು. ಯೆಹೋವ ದೇವರು ಅವರನ್ನು ನನ್ನ ಕೈಯಲ್ಲಿ ಒಪ್ಪಿಸಿಕೊಟ್ಟರು. ನೀವು ನನ್ನ ಸಂಗಡ ಯುದ್ಧಮಾಡುವುದಕ್ಕೆ ಈ ಹೊತ್ತು ನನಗೆ ವಿರೋಧವಾಗಿ ಏಕೆ ಬಂದಿರಿ?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 12:3
11 ತಿಳಿವುಗಳ ಹೋಲಿಕೆ  

ನನ್ನ ಪ್ರಾಣವನ್ನು ಬಾಯಿಂದ ಕಚ್ಚಿಕೊಂಡಿರುವೆನು, ನನ್ನ ಜೀವವನ್ನು ಕೈಯಲ್ಲಿ ಹಿಡಿದುಕೊಂಡಿರುವೆನು,


ಆ ಸ್ತ್ರೀಯು ಸೌಲನ ಹತ್ತಿರ ಬಂದು ಅವನು ಬಹು ಭೀತನಾಗಿದ್ದಾನೆಂದು ಕಂಡು ಅವನಿಗೆ - ನಿನ್ನ ದಾಸಿಯಾದ ನಾನು ನಿನ್ನ ಮಾತು ಕೇಳಿದೆನು; ಕೈಯಲ್ಲಿ ಜೀವಹಿಡಿದವಳಾಗಿ ನಿನ್ನ ಅಪ್ಪಣೆಯನ್ನು ನೆರವೇರಿಸಿದೆನು.


ತನ್ನ ಜೀವವನ್ನು ಕೈಯಲ್ಲಿ ಹಿಡಿದುಕೊಂಡು ಹೋಗಿ ಆ ಫಿಲಿಷ್ಟಿಯನನ್ನು ಕೊಂದನು; ಯೆಹೋವನು ಇಸ್ರಾಯೇಲ್ಯರಿಗೆ ಮಹಾಜಯವನ್ನುಂಟುಮಾಡಿದನು. ನೀನು ಅದನ್ನು ನೋಡಿ ಸಂತೋಷಪಟ್ಟಿಯಲ್ಲಾ; ದಾವೀದನನ್ನು ನಿಷ್ಕಾರಣವಾಗಿ ಕೊಂದು ನಿರ್ದೋಷಿಯ ರಕ್ತವನ್ನು ಸುರಿಸಿದ ಅಪರಾಧಕ್ಕೆ ನೀನೇಕೆ ಗುರಿಯಾಗುತ್ತೀ ಅಂದನು.


ನಾನು ಯಾವಾಗಲೂ ಕೈಯಲ್ಲಿ ಜೀವ ಹಿಡಿದಿದ್ದೇನೆ; ಆದರೂ ನಿನ್ನ ಧರ್ಮಶಾಸ್ತ್ರವನ್ನು ಮರೆಯುವದಿಲ್ಲ.


ಅವರು ಪ್ರಾಣದ ಮೇಲಣ ಪ್ರೀತಿಯನ್ನು ತೊರೆದು ಮರಣಕ್ಕೆ ಹಿಂತೆಗೆಯದೆ ಯಜ್ಞದ ಕುರಿಯಾದಾತನ ರಕ್ತದ ಬಲದಿಂದಲೂ ತಮ್ಮ ವಾಕ್ಯದ ಬಲದಿಂದಲೂ ಅವನನ್ನು ಜಯಿಸಿದರು.


ಅವರು ನನ್ನ ಪ್ರಾಣದ ಸಂರಕ್ಷಣೆಗಾಗಿ ತಮ್ಮ ಪ್ರಾಣಗಳನ್ನು ಅಪಾಯಕ್ಕೆ ಗುರಿಮಾಡಿದರು. ನಾನು ಮಾತ್ರವೇ ಅಲ್ಲ, ಅನ್ಯಜನರ ಸಭೆಗಳವರೆಲ್ಲರೂ ಅವರ ಉಪಕಾರವನ್ನು ಸ್ಮರಿಸುತ್ತಾರೆ.


ಇಗೋ, ದೇವರು ನಾಯಕನಾಗಿ ನಮ್ಮೊಂದಿಗಿರುತ್ತಾನೆ; ನಿಮಗೆ ವಿರೋಧವಾಗಿ ಆರ್ಭಟದಿಂದ ಊದತಕ್ಕ ತುತೂರಿಗಳನ್ನು ಹಿಡಿದಿರುವ ಯಾಜಕರೂ ನಮ್ಮೊಂದಿಗಿರುತ್ತಾರೆ. ಇಸ್ರಾಯೇಲ್ಯರೇ, ನಿಮ್ಮ ಪಿತೃಗಳ ದೇವರಾದ ಯೆಹೋವನೊಡನೆ ಯುದ್ಧ ಮಾಡಬೇಡಿರಿ, ನೀವು ಸಫಲರಾಗಲಿಕ್ಕಿಲ್ಲ ಎಂದು ಕೂಗಿ ಹೇಳಿದನು.


ನಾನು ನಿನಗೆ ಯಾವ ಅನ್ಯಾಯವನ್ನೂ ಮಾಡಲಿಲ್ಲ. ನೀನು ಈಗ ನನಗೆ ವಿರೋಧವಾಗಿ ಯುದ್ಧಕ್ಕೆ ಬಂದದರಿಂದ ನೀನೇ ಅನ್ಯಾಯಮಾಡಿದ ಹಾಗಾಯಿತು. ನ್ಯಾಯಸ್ಥಾಪಕನಾದ ಯೆಹೋವನೇ ಈ ಹೊತ್ತು ಇಸ್ರಾಯೇಲ್ಯರಿಗೂ ಅಮ್ಮೋನಿಯರಿಗೂ ಮಧ್ಯದಲ್ಲಿ ನ್ಯಾಯತೀರಿಸಲಿ ಎಂದು ಹೇಳಿಸಿದನು.


ನನ್ನ ತಂದೆಯು ತನ್ನ ಜೀವದ ಆಶೆಯನ್ನು ತೊರೆದು ಹೋರಾಡಿ ನಿಮ್ಮನ್ನು ವಿುದ್ಯಾನ್ಯರ ಕೈಯಿಂದ ಬಿಡಿಸಿದನಲ್ಲಾ.


ಆಗ ಅವನು ಅವರಿಗೆ - ನನಗೂ ನನ್ನ ಜನರಿಗೂ ಅಮ್ಮೋನಿಯರೊಡನೆ ವ್ಯಾಜ್ಯವಿದ್ದಾಗ ನಾನು ನಿಮ್ಮನ್ನು ಕರೆದೆನು; ಆದರೆ ನೀವು ಬಂದು ನನ್ನನ್ನು ಅವರ ಕೈಯಿಂದ ಬಿಡಿಸಲಿಲ್ಲ.


ಗಿಲ್ಯಾದಿನವರೆಲ್ಲರನ್ನೂ ಕೂಡಿಸಿ ಎಫ್ರಾಯೀಮ್ಯರಿಗೆ ವಿರೋಧವಾಗಿ ಯುದ್ಧಕ್ಕೆ ನಿಂತನು. ಗಿಲ್ಯಾದ್ಯರಾದ ನೀವು ನಮ್ಮ ಮತ್ತು ಮನಸ್ಸೆಯವರ ಮಧ್ಯದಲ್ಲಿದ್ದು ಸ್ವಕುಲವನ್ನು ಬಿಟ್ಟು ಇಲ್ಲಿಗೆ ಓಡಿ ಬಂದಿರಿ ಎಂದು ಎಫ್ರಾಯೀಮ್ಯರು ಅಂದದರಿಂದ ಗಿಲ್ಯಾದ್ಯರು [ಕೋಪಗೊಂಡು] ಅವರನ್ನು ಪೂರ್ಣವಾಗಿ ಸೋಲಿಸಿಬಿಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು