Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 12:5 - ಕನ್ನಡ ಸತ್ಯವೇದವು J.V. (BSI)

5 ಇದಲ್ಲದೆ ಅವರು ಎಫ್ರಾಯೀವಿುಗೆ ಹೋಗುವ ಯೊರ್ದನಿನ ಹಾಯಗಡಗಳನ್ನೆಲ್ಲಾ ಹಿಡಿದರು. ತಪ್ಪಿಸಿಕೊಂಡ ಎಫ್ರಾಯೀಮ್ಯರಲ್ಲೊಬ್ಬನು ಅಲ್ಲಿಗೆ ಬಂದು ನನ್ನನ್ನು ದಾಟಗೊಡಿರಿ ಎಂದು ಅವರನ್ನು ಕೇಳಿದರೆ ಅವರು - ನೀನು ಎಫ್ರಾಯೀಮ್ಯನೋ ಎಂದು ಕೇಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಇದಲ್ಲದೆ ಅವರು ಎಫ್ರಾಯೀಮಿಗೆ ಹೋಗುವ ಯೊರ್ದನಿನ ಹಾಯಗಡಗಳನ್ನೆಲ್ಲಾ ಹಿಡಿದರು. ತಪ್ಪಿಸಿಕೊಂಡ ಎಫ್ರಾಯೀಮ್ಯರಲ್ಲೊಬ್ಬನು ಅಲ್ಲಿಗೆ ಬಂದು ನನ್ನನ್ನು ದಾಟಗೊಡಿಸಿರಿ ಎಂದು ಅವರನ್ನು ಕೇಳಿದರೆ ಅವರು, “ನೀನು ಎಫ್ರಾಯೀಮ್ಯನೋ” ಎಂದು ಕೇಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಇದಲ್ಲದೆ, ಅವರು ತಪ್ಪಿಸಿಕೊಂಡು ಹೋಗದಂತೆ ಎಫ್ರಯಿಮಿಗೆ ಹೋಗುವ ಜೋರ್ಡನಿನ ಹಾಯಗಡಗಳನ್ನೆಲ್ಲಾ ಹಿಡಿದರು. ತಪ್ಪಿಸಿಕೊಂಡ ಎಫ್ರಯಿಮ್ಯರಲ್ಲಿ ಒಬ್ಬನು ಅಲ್ಲಿಗೆ ಬಂದು ನನ್ನನ್ನು ದಾಟಗೊಡಿರಿ ಎಂದು ಅವರನ್ನು ಕೇಳಿದಾಗ ಅವರು, “ನೀನು ಎಫ್ರಯಿಮನೋ?’ ಎಂದು ಕೇಳುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಗಿಲ್ಯಾದಿನ ಜನರು ಜೋರ್ಡನ್ ನದಿಯನ್ನು ದಾಟಲು ಅನುಕೂಲವಾದ ಸ್ಥಳಗಳನ್ನೆಲ್ಲಾ ವಶಪಡಿಸಿಕೊಂಡರು. ಅವು ಎಫ್ರಾಯೀಮ್ ಪ್ರದೇಶದೊಳಕ್ಕೆ ಹೋಗುವ ಮಾರ್ಗದಲ್ಲಿಯೇ ಇದ್ದವು. ಯಾವಾಗಲಾದರೂ ಎಫ್ರಾಯೀಮ್ ಕುಲದವರಲ್ಲಿ ಅಳಿದುಳಿದವನೊಬ್ಬ ಅಲ್ಲಿಗೆ ಬಂದು, “ನನ್ನನ್ನು ದಾಟಗೊಡಿರಿ” ಎಂದು ಕೇಳಿದರೆ ಗಿಲ್ಯಾದಿನವರು, “ನೀನು ಎಫ್ರಾಯೀಮಿನವನೇ?” ಎಂದು ಕೇಳುತ್ತಿದ್ದರು. ಅವನು “ಅಲ್ಲ” ಎಂದು ಉತ್ತರಿಸಿದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಗಿಲ್ಯಾದ್ಯರು ಎಫ್ರಾಯೀಮ್ಯರಿಗೆ ಮುಂದುಗಡೆ ಯೊರ್ದನ್ ನದಿ ರೇವುಗಳನ್ನು ಹಿಡಿದರು. ಆಗ ಏನಾಯಿತೆಂದರೆ, ಎಫ್ರಾಯೀಮ್ಯರಲ್ಲಿ ತಪ್ಪಿಸಿಕೊಂಡ ಯಾವನಾದರೂ ಬಂದು, “ದಾಟುತ್ತೇನೆ,” ಎಂದು ಹೇಳಿದರೆ, ಗಿಲ್ಯಾದ್ಯರು, “ನೀನು ಎಫ್ರಾಯೀಮ್ಯನೋ?” ಎಂದು ಅವನನ್ನು ಕೇಳುತ್ತಿದ್ದರು. ಅವನು, “ಇಲ್ಲ,” ಎಂದರೆ, ಅವನಿಗೆ, “ನೀನು ಷಿಬ್ಬೋಲೆತ್ ಅನ್ನು,” ಎಂದು ಹೇಳುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 12:5
9 ತಿಳಿವುಗಳ ಹೋಲಿಕೆ  

ಅವನು ಅವರ ನಾಯಕನಾಗಿ - ನನ್ನನ್ನು ಹಿಂಬಾಲಿಸಿರಿ; ಯೆಹೋವನು ನಿಮ್ಮ ಶತ್ರುಗಳಾದ ಮೋವಾಬ್ಯರನ್ನು ನಿಮ್ಮ ಕೈಗೆ ಒಪ್ಪಿಸಿದ್ದಾನೆಂದು ಹೇಳಲು ಅವರು ಅವನನ್ನು ಹಿಂಬಾಲಿಸಿ ಮೋವಾಬಿಗೆ ಹೋಗುವ ಹಾಯಗಡಗಳನ್ನೆಲ್ಲಾ ಹಿಡಿದರು; ಯಾರನ್ನೂ ದಾಟಗೊಡಲಿಲ್ಲ.


ರೂಬೇನ್ಯರೂ ಗಾದ್ಯರೂ ಮನಸ್ಸೆಕುಲದ ಅರ್ಧಜನರೂ ಇಸ್ರಾಯೇಲ್‍ದೇಶವಾದ ಕಾನಾನಿನ ಪೂರ್ವಕ್ಕಿರುವ ಯೊರ್ದನ್‍ಹೊಳೆಯ ತೀರಪ್ರದೇಶದಲ್ಲಿ ವೇದಿಯನ್ನು ಕಟ್ಟಿದ್ದಾರೆಂಬ ವರ್ತಮಾನವು ವಿುಕ್ಕ ಇಸ್ರಾಯೇಲ್ಯರಿಗೆ ಮುಟ್ಟಿದಾಗ


ಇದಲ್ಲದೆ ಗಿದ್ಯೋನನು ಎಫ್ರಾಯೀಮ್ ಪರ್ವತಪ್ರದೇಶಗಳಿಗೆ ದೂತರನ್ನು ಅಟ್ಟಿ ಅಲ್ಲಿನವರಿಗೆ - ನೀವು ವಿುದ್ಯಾನ್ಯರಿಗೆ ವಿರೋಧವಾಗಿ ಹೊರಟು ಅವರು ಬೇತ್‍ಬಾರದವರೆಗಿರುವ ಪ್ರವಾಹಗಳನ್ನೂ ಯೊರ್ದನ್ ಹೊಳೆಯನ್ನೂ ದಾಟಿ ಹೋಗದಂತೆ ಅಡ್ಡಗಟ್ಟಿರಿ ಎಂದು ಹೇಳಿಸಿದನು. ಆಗ ಎಫ್ರಾಯೀಮ್ಯರೆಲ್ಲರೂ ಬೇತ್‍ಬಾರದವರೆಗಿರುವ ಪ್ರವಾಹಗಳಿಗೂ ಯೊರ್ದನ್‍ಹೊಳೆಗೂ ಬಂದು ಅವುಗಳ ಹಾಯಗಡಗಳನ್ನೆಲ್ಲಾ ಹಿಡಿದರು.


ಅರಸನ ಆಳುಗಳು ಯೊರ್ದನಿನ ದಾರಿಹಿಡಿದು ಹೋಗಿ ಹೊಳೆದಾಟುವ ಸ್ಥಳಗಳವರೆಗೂ ಹುಡುಕಿದರು. ಹುಡುಕುವವರು ಹೊರಟ ಕೂಡಲೆ ಊರುಬಾಗಲನ್ನು ಮುಚ್ಚಿದರು.


ಗಿಲ್ಯಾದಿನವರೆಲ್ಲರನ್ನೂ ಕೂಡಿಸಿ ಎಫ್ರಾಯೀಮ್ಯರಿಗೆ ವಿರೋಧವಾಗಿ ಯುದ್ಧಕ್ಕೆ ನಿಂತನು. ಗಿಲ್ಯಾದ್ಯರಾದ ನೀವು ನಮ್ಮ ಮತ್ತು ಮನಸ್ಸೆಯವರ ಮಧ್ಯದಲ್ಲಿದ್ದು ಸ್ವಕುಲವನ್ನು ಬಿಟ್ಟು ಇಲ್ಲಿಗೆ ಓಡಿ ಬಂದಿರಿ ಎಂದು ಎಫ್ರಾಯೀಮ್ಯರು ಅಂದದರಿಂದ ಗಿಲ್ಯಾದ್ಯರು [ಕೋಪಗೊಂಡು] ಅವರನ್ನು ಪೂರ್ಣವಾಗಿ ಸೋಲಿಸಿಬಿಟ್ಟರು.


ಅವನು ಅಲ್ಲವೆಂದರೆ ಅವನಿಗೆ - ನೀನು ಷಿಬ್ಬೋಲೆತ್ ಅನ್ನು ಎಂದು ಹೇಳುವರು. ಹಾಗೆ ಅನ್ನಲಿಕ್ಕೆ ಬಾರದೆ ಅವನು ಸಿಬ್ಬೋಲೆತ್ ಅನ್ನುವನು. ಕೂಡಲೆ ಅವರು ಅವನನ್ನು ಹಿಡಿದು ಯೊರ್ದನಿನ ಹಾಯಗಡಗಳ ಬಳಿಯಲ್ಲೇ ಕೊಂದುಹಾಕುವರು. ಹೀಗೆ ಆ ಕಾಲದಲ್ಲಿ ಎಫ್ರಾಯೀಮ್ಯರೊಳಗೆ ನಾಲ್ವತ್ತೆರಡು ಸಾವಿರ ಜನರು ಹತರಾದರು.


ಯೆಹೂದದ ಬೇತ್ಲೆಹೇವಿುನವನೂ ಯೆಹೂದ ಕುಲದವನೂ ಆಗಿದ್ದ ಒಬ್ಬ ಯೌವನಸ್ಥನಾದ ಲೇವಿಯು


ಎಫ್ರಾಯೀಮ್ ಬೆಟ್ಟದ ಸೀಮೆಯಲ್ಲಿನ ರಾಮಾತಯಿಮ್ ಚೋಫೀಮ್ ಊರಿನಲ್ಲಿ ಎಲ್ಕಾನನೆಂಬ ಒಬ್ಬ ಮನುಷ್ಯನಿದ್ದನು. ಇವನು ಯೆರೋಹಾಮನ ಮಗನೂ ಎಲೀಹುವಿನ ಮೊಮ್ಮಗನೂ ತೋಹುವಿನ ಮರಿಮಗನೂ ಆಗಿದ್ದನು. ತೋಹು ಎಂಬವನು ಎಫ್ರಾಯೀಮ್ಯನಾದ ಚೂಫನ ಮಗನು.


ಅರಸನಾದ ಸೊಲೊಮೋನನಿಗೆ ವಿರೋಧವಾಗಿ ಎದ್ದವರಲ್ಲಿ ಅವನ ಸೇವಕನೂ ಚರೇದ ಊರಿನ ಎಫ್ರಾಯೀಮ್ಯನಾದ ನೆಬಾಟನ ಮಗನೂ ಆಗಿದ್ದ ಯಾರೊಬ್ಬಾಮನೆಂಬವನು ಮತ್ತೊಬ್ಬನು; ಚೆರೂಗಳೆಂಬ ವಿಧವೆಯು ಅವನ ತಾಯಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು