Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 13:24 - ಕನ್ನಡ ಸತ್ಯವೇದವು J.V. (BSI)

24 ಆ ಸ್ತ್ರೀಯು ಮಗನನ್ನು ಹೆತ್ತು ಅವನಿಗೆ ಸಂಸೋನನೆಂದು ಹೆಸರಿಟ್ಟಳು. ಹುಡುಗನು ದೊಡ್ಡವನಾದನು. ಯೆಹೋವನ ಆಶೀರ್ವಾದವು ಅವನ ಮೇಲಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಆ ಸ್ತ್ರೀಯು ಮಗನನ್ನು ಹೆತ್ತು ಅವನಿಗೆ ಸಂಸೋನನೆಂದು ಹೆಸರಿಟ್ಟಳು. ಹುಡುಗನು ದೊಡ್ಡವನಾದನು. ಯೆಹೋವನ ಆಶೀರ್ವಾದವು ಅವನ ಮೇಲಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಆ ಮಹಿಳೆ ಒಬ್ಬ ಮಗನನ್ನು ಹೆತ್ತು ಅವನಿಗೆ ‘ಸಂಸೋನ’ ಎಂದು ಹೆಸರಿಟ್ಟಳು. ಹುಡುಗ ಬೆಳೆದು ದೊಡ್ಡವನಾದ. ಸರ್ವೇಶ್ವರನ ಆಶೀರ್ವಾದ ಅವನ ಮೇಲಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಆ ಸ್ತ್ರೀಗೆ ಒಂದು ಗಂಡುಮಗು ಜನಿಸಿತು. ಅವಳು ಅದಕ್ಕೆ ಸಂಸೋನ ಎಂದು ಹೆಸರಿಟ್ಟಳು. ಸಂಸೋನನು ಬೆಳೆದು ದೊಡ್ಡವನಾದನು. ಯೆಹೋವನು ಅವನನ್ನು ಆಶೀರ್ವದಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಆ ಸ್ತ್ರೀಯು ಮಗನನ್ನು ಹೆತ್ತು, ಅವನಿಗೆ ಸಂಸೋನ ಎಂದು ಹೆಸರಿಟ್ಟಳು. ಆ ಹುಡುಗನು ಬೆಳೆದನು. ಯೆಹೋವ ದೇವರು ಅವನನ್ನು ಆಶೀರ್ವದಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 13:24
6 ತಿಳಿವುಗಳ ಹೋಲಿಕೆ  

ಆ ಬಾಲಕನು ಬೆಳೆದು ಆತ್ಮದಲ್ಲಿ ಬಲವುಳ್ಳವನಾದನು ಮತ್ತು ಇಸ್ರಾಯೇಲ್ ಜನರಿಗೆ ತನ್ನನ್ನು ತೋರ್ಪಡಿಸಿಕೊಳ್ಳುವ ದಿನದವರೆಗೆ ಅರಣ್ಯ ಪ್ರದೇಶಗಳಲ್ಲಿ ಇದ್ದನು.


ಸಮುವೇಲನು ದೊಡ್ಡವನಾಗುತ್ತಾ ಬಂದನಷ್ಟೆ. ಯೆಹೋವನು ಅವನೊಡನೆ ಇದ್ದದರಿಂದ ಅವನ ಪ್ರವಾದನೆಗಳಲ್ಲಿ ಒಂದೂ ಬಿದ್ದುಹೋಗಲಿಲ್ಲ.


ಇನ್ನೂ ಏನು ಹೇಳಬೇಕು? ಗಿಡಿಯೋನ್ ಬಾರಾಕ್ ಸಂಸೋನ್ ಎಫ್‍ಥ ದಾವೀದ್ ಸಮುವೇಲ್ ಎಂಬವರ ವೃತ್ತಾಂತವನ್ನೂ ಪ್ರವಾದಿಗಳ ವೃತ್ತಾಂತವನ್ನೂ ವಿವರವಾಗಿ ಹೇಳಬೇಕಾದರೆ ನನಗೆ ಸಮಯ ಸಾಲದು.


ಯೇಸು ಜ್ಞಾನದಲ್ಲಿಯೂ ದೇಹಬಲದಲ್ಲಿಯೂ ವೃದ್ಧಿಯಾಗುತ್ತಾ ಬಂದನು; ಇದಲ್ಲದೆ ದೇವರ ಮತ್ತು ಮನುಷ್ಯರ ದಯೆಯು ಆತನ ಮೇಲೆ ಹೆಚ್ಚಾಗುತ್ತಾ ಬಂತು.


ಯೆಹೋವನು ಕಟಾಕ್ಷಿಸಿದದರಿಂದ ಹನ್ನಳಿಗೆ ಮೂರು ಮಂದಿ ಗಂಡು ಮಕ್ಕಳೂ ಇಬ್ಬರು ಹೆಣ್ಣುಮಕ್ಕಳೂ ಆದರು. ಬಾಲಕನಾಗಿದ್ದ ಸಮುವೇಲನು ಯೆಹೋವನ ಸನ್ನಿಧಿಯಲ್ಲೇ ದೊಡ್ಡವನಾದನು.


ಬಾಲಕನಾದ ಸಮುವೇಲನಾದರೋ ಬೆಳೆಯುತ್ತಾ ಬಂದ ಹಾಗೆಲ್ಲಾ ಯೆಹೋವನ ಮತ್ತು ಮನುಷ್ಯರ ದಯೆಗೆ ಪಾತ್ರನಾದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು