Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 13:25 - ಕನ್ನಡ ಸತ್ಯವೇದವು J.V. (BSI)

25 ಇದಲ್ಲದೆ ಅವನು ಚೊರ್ಗಕ್ಕೂ ಎಷ್ಟಾವೋಲಿಗೂ ಮಧ್ಯದಲ್ಲಿರುವ ದಾನ್‍ಕುಲದ ಪಾಳೆಯದಲ್ಲಿದ್ದಾಗ ಯೆಹೋವನ ಆತ್ಮವು ಅವನನ್ನು ಪ್ರೇರೇಪಿಸಹತ್ತಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಇದಲ್ಲದೆ ಅವನು ಚೊರ್ಗಕ್ಕೂ, ಎಷ್ಟಾವೋಲಿಗೂ ಮಧ್ಯದಲ್ಲಿರುವ ದಾನ್ ಕುಲದ ಪಾಳೆಯದಲ್ಲಿದ್ದಾಗ ಯೆಹೋವನ ಆತ್ಮವು ಅವನನ್ನು ಪ್ರೇರೇಪಿಸುವುದಕ್ಕೆ ಪ್ರಾರಂಭಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಇದಲ್ಲದೆ, ಅವನು ಚೊರ್ಗಕ್ಕೂ ಎಷ್ಟಾವೋಲಿಗೂ ಮಧ್ಯದಲ್ಲಿರುವ ದಾನ್ ಕುಲದ ಪಾಳೆಯದಲ್ಲಿದ್ದಾಗ ಸರ್ವೇಶ್ವರನ ಆತ್ಮ ಅವನನ್ನು ಚೇತನಗೊಳಿಸತೊಡಗಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಅವನು ಮಾಹಾನೆಹದಾನ ನಗರದಲ್ಲಿದ್ದಾಗ ಯೆಹೋವನ ಆತ್ಮವು ಸಂಸೋನನನ್ನು ಪ್ರೇರೇಪಿಸತೊಡಗಿತು. ಈ ನಗರವು ಚೊರ್ಗ ಮತ್ತು ಎಷ್ಟಾವೋಲ್ ನಗರಗಳ ಮಧ್ಯದಲ್ಲಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಇದಲ್ಲದೆ ಚೊರ್ಗಕ್ಕೂ ಎಷ್ಟಾವೋಲಿಗೂ ಮಧ್ಯದಲ್ಲಿ ದಾನನ ದಂಡಿನಲ್ಲಿ ಅವನನ್ನು ಯೆಹೋವ ದೇವರ ಆತ್ಮರು ಆಗಾಗ್ಗೆ ಪ್ರೇರೇಪಿಸುವುದಕ್ಕೆ ಪ್ರಾರಂಭಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 13:25
13 ತಿಳಿವುಗಳ ಹೋಲಿಕೆ  

ಯೆಹೋವನ ಆತ್ಮವು ಅವನ ಮೇಲೆ ಬಂದದರಿಂದ ಅವನು ಇಸ್ರಾಯೇಲ್ಯರ ನ್ಯಾಯಸ್ಥಾಪನೆಗೋಸ್ಕರ ಯುದ್ಧಕ್ಕೆ ಹೊರಟನು. ಯೆಹೋವನು ಎರಡು ನದಿಗಳ ಮಧ್ಯದಲ್ಲಿರುವ ಅರಾಮ್ ರಾಜ್ಯದ ಅರಸನಾದ ಕೂಷನ್ ರಿಷಾತಯಿಮನನ್ನು ಅವನ ಕೈಗೆ ಒಪ್ಪಿಸಿಕೊಟ್ಟದರಿಂದ ಅವನು ಅವನನ್ನು ಪೂರ್ಣವಾಗಿ ಸೋಲಿಸಿಬಿಟ್ಟನು.


ಇಳಕಲಿನ ಪ್ರದೇಶದಲ್ಲಿ


ಹೇಗಂದರೆ ದೇವರು ಯಾರನ್ನು ಕಳುಹಿಸಿದ್ದಾನೋ ಆತನಿಗೆ ಆತ್ಮವರವನ್ನು ಅಳತೆಮಾಡದೆ ಅನುಗ್ರಹಿಸುವದರಿಂದ ಆತನು ದೇವರ ಮಾತುಗಳನ್ನೇ ಆಡುತ್ತಾನೆ.


ಆಗ ಯೇಸು ಸೈತಾನನಿಂದ ಶೋಧಿಸಲ್ಪಡುವದಕ್ಕಾಗಿ ಆತ್ಮನು ಆತನನ್ನು ಅಡವಿಗೆ ಒಯ್ದನು.


ಆಗ ಯೆಹೋವನ ಆತ್ಮವು ಅವನ ಮೇಲೆ ಬಂದಿತು. ಅವನು ಅತ್ಯಂತ ಕುಪಿತನಾಗಿ


ಆಗ ಯೆಹೋವನ ಆತ್ಮವು ಯೆಪ್ತಾಹನ ಮೇಲೆ ಬಂದಿತು. ಅವನು ಗಿಲ್ಯಾದ್ ಪ್ರಾಂತ, ಮನಸ್ಸೆಯ ದೇಶ ಇವುಗಳಲ್ಲಿ ಸಂಚರಿಸಿ ತಿರಿಗಿ ಗಿಲ್ಯಾದಿನ ವಿುಚ್ಪೆಗೆ ಬಂದು ಅಲ್ಲಿಂದ ಅಮ್ಮೋನಿಯರ ಮೇಲೆ ಯುದ್ಧಕ್ಕೆ ಹೋದನು.


ಆಗ ಗಿದ್ಯೋನನು ಯೆಹೋವನ ಆತ್ಮನ ಆವೇಶವುಳ್ಳವನಾಗಿ ಕೊಂಬನ್ನು ಊದಲು ಅಬೀಯೆಜೆರನ ಗೋತ್ರದವರು ಬಂದು ಅವನನ್ನು ಹಿಂಬಾಲಿಸಿದರು.


ಸಂಸೋನನು ಗಟ್ಟಾ ಇಳಿದು ತಿಮ್ನಾ ಊರಿಗೆ ಹೋಗಿ ಅಲ್ಲಿನ ಫಿಲಿಷ್ಟಿಯರ ಹೆಣ್ಣುಗಳಲ್ಲಿ ಒಬ್ಬಳನ್ನು ನೋಡಿ


ಯೆಹೋವನ ಆತ್ಮವು ಫಕ್ಕನೆ ಅವನ ಮೇಲೆ ಬಂದಿತು; ಅವನು ಅಷ್ಕೆಲೋನಿಗೆ ಹೋಗಿ ಅಲ್ಲಿನ ಮೂವತ್ತು ಮಂದಿಯನ್ನು ಹೊಡೆದು ಅವರ ವಸ್ತ್ರಗಳನ್ನು ಸುಲುಕೊಂಡು ಒಗಟನ್ನು ಬಿಚ್ಚಿದವರಿಗೆ ತಂದುಕೊಟ್ಟನು. ಮತ್ತು ರೇಗಿದವನಾಗಿ ತನ್ನ ತಂದೆಯ ಮನೆಗೆ ಹೋದನು.


ಮತ್ತು ಅವರು ಚೊರ್ಗಾ, ಎಷ್ಟಾವೋಲ್ ಎಂಬ ಊರುಗಳಿಂದ ತಮ್ಮ ಕುಲದಲ್ಲಿ ಐದು ಮಂದಿ ಪರಾಕ್ರಮ ಶಾಲಿಗಳಾದ ಗೂಢಚಾರರನ್ನು ಆರಿಸಿ ಅವರಿಗೆ - ನೀವು ಹೋಗಿ [ಲಯಿಷ್] ದೇಶವನ್ನು ಸಂಚರಿಸಿ ನೋಡಿರಿ ಎಂದು ಆಜ್ಞಾಪಿಸಿ ಕಳುಹಿಸಿದರು. ಇವರು ಪ್ರಯಾಣಮಾಡುತ್ತಾ ಎಫ್ರಾಯೀಮ್ ಬೆಟ್ಟದ ಸೀಮೆಯಲ್ಲಿದ್ದ ಮೀಕನ ಮನೆಗೆ ಬಂದು ಇಳುಕೊಂಡರು.


ಅವನ ಬಂಧುಗಳೂ ತಂದೆಯ ಮನೆಯವರೆಲ್ಲರೂ ಬಂದು ಅವನ ಶವವನ್ನು ಎತ್ತಿ ತೆಗೆದುಕೊಂಡು ಹೋಗಿ ಚೊರ್ಗಕ್ಕೂ ಎಷ್ಟಾವೋಲಿಗೂ ಮಧ್ಯದಲ್ಲಿದ್ದ ಅವನ ತಂದೆಯಾದ ಮಾನೋಹನ ಸಮಾಧಿಯಲ್ಲಿ ಹೂಣಿಟ್ಟರು. ಅವನು ಇಸ್ರಾಯೇಲ್ಯರನ್ನು ಇಪ್ಪತ್ತು ವರುಷ ಪಾಲಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು