Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 13:3 - ಕನ್ನಡ ಸತ್ಯವೇದವು J.V. (BSI)

3 ಒಂದಾನೊಂದು ದಿವಸ ಯೆಹೋವನ ದೂತನು ಆಕೆಗೆ ಪ್ರತ್ಯಕ್ಷನಾಗಿ - ಇಗೋ, ಬಂಜೆಯಾಗಿ ಮಕ್ಕಳಿಲ್ಲದಿರುವ ನೀನು ಗರ್ಭವತಿಯಾಗಿ ಮಗನನ್ನು ಹೆರುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಒಂದಾನೊಂದು ದಿನ ಯೆಹೋವನ ದೂತನು ಆಕೆಗೆ ಪ್ರತ್ಯಕ್ಷನಾಗಿ, “ಇಗೋ, ಬಂಜೆಯಾಗಿ ಮಕ್ಕಳಿಲ್ಲದಿರುವ ನೀನು ಗರ್ಭವತಿಯಾಗಿ ಮಗನನ್ನು ಹೆರುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಒಂದಾನೊಂದು ದಿನ ಸರ್ವೇಶ್ವರನ ದೂತ ಆಕೆಗೆ ಪ್ರತ್ಯಕ್ಷನಾಗಿ, “ಇಗೋ, ಬಂಜೆಯಾಗಿ ಮಕ್ಕಳಿಲ್ಲದಿರುವ ನೀನು ಗರ್ಭವತಿಯಾಗಿ ಒಬ್ಬ ಮಗನನ್ನು ಹೆರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಒಮ್ಮೆ ಯೆಹೋವನ ದೂತನು ಮಾನೋಹನ ಹೆಂಡತಿಗೆ ಪ್ರತ್ಯಕ್ಷನಾಗಿ, “ನೀನು ಮಕ್ಕಳನ್ನು ಪಡೆಯಲು ಸಾಧ್ಯವಾಗಿಲ್ಲ; ಆದರೆ ನೀನು ಗರ್ಭವತಿಯಾಗಿ ಒಬ್ಬ ಮಗನನ್ನು ಹೆರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಯೆಹೋವ ದೇವರ ದೂತನು ಆ ಸ್ತ್ರೀಗೆ ಪ್ರತ್ಯಕ್ಷವಾಗಿ ಅವಳಿಗೆ, “ಇಗೋ, ನೀನು ಮಕ್ಕಳನ್ನು ಹೆರದೆ ಬಂಜೆಯಾಗಿದ್ದೀಯೆ. ಆದರೆ ನೀನು ಗರ್ಭಧರಿಸಿ ಒಬ್ಬ ಮಗನನ್ನು ಹೆರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 13:3
16 ತಿಳಿವುಗಳ ಹೋಲಿಕೆ  

ಆದರೆ ಆ ದೂತನು ಅವನಿಗೆ - ಜಕರೀಯಾ, ಭಯಪಬೇಡ; ನಿನ್ನ ವಿಜ್ಞಾಪನೆ ದೇವರಿಗೆ ಮುಟ್ಟಿತು; ನಿನ್ನ ಹೆಂಡತಿಯಾದ ಎಲಿಸಬೇತಳು ನಿನಗೆ ಒಬ್ಬ ಮಗನನ್ನು ಹೆರುವಳು.


ಕರ್ತನ ದೂತನು ಧೂಪಪೀಠದ ಬಲಗಡೆಯಲ್ಲಿ ನಿಂತುಕೊಂಡವನಾಗಿ ಅವನಿಗೆ ಕಾಣಿಸಿಕೊಂಡನು.


ಮಾನೋಹನು ಇದನ್ನು ಕೇಳಿ ಯೆಹೋವನಿಗೆ - ಸ್ವಾಮೀ, ದಯವಿರಲಿ; ನೀನು ಕಳುಹಿಸಿದ ದೇವಪುರುಷನು ಇನ್ನೊಂದು ಸಾರಿ ನಮ್ಮ ಬಳಿಗೆ ಬಂದು ಹುಟ್ಟಲಿಕ್ಕಿರುವ ಮಗುವಿಗೋಸ್ಕರ ಮಾಡಬೇಕಾದದ್ದನ್ನು ನಮಗೆ ಬೋಧಿಸಲಿ ಎಂದು ಬೇಡಿಕೊಳ್ಳಲು ದೇವರು ಅವನ ಮೊರೆಯನ್ನು ಕೇಳಿದನು;


ಯೆಹೋವನ ದೂತನು ಗಿಲ್ಗಾಲಿನಿಂದ ಬೋಕೀವಿುಗೆ ಬಂದು ಇಸ್ರಾಯೇಲ್ಯರಿಗೆ - ನಾನು ನಿಮ್ಮನ್ನು ಐಗುಪ್ತದಿಂದ ಬರಮಾಡಿ ನಿಮ್ಮ ಪಿತೃಗಳಿಗೆ ಪ್ರಮಾಣ ಮಾಡಿದ ದೇಶಕ್ಕೆ ಕರತಂದೆನು. ನಿಮ್ಮೊಡನೆ ಮಾಡಿಕೊಂಡ ಒಡಂಬಡಿಕೆಯನ್ನು ಎಂದೂ ಭಂಗಪಡಿಸುವದಿಲ್ಲವೆಂದು ನಾನು ಮಾತು ಕೊಟ್ಟಾಗ -


ಎಲೀಷನು ಆಕೆಗೆ - ನೀನು ಬರುವ ವರುಷ ಇದೇ ಕಾಲದಲ್ಲಿ ಒಬ್ಬ ಮಗನನ್ನು ಅಪ್ಪಿಕೊಂಡಿರುವಿ ಅಂದನು. ಅದಕ್ಕೆ ಆಕೆಯು - ದೇವರ ಮನುಷ್ಯನೇ, ಒಡೆಯನೇ, ಹೀಗೆ ಹೇಳಿ ನಿನ್ನ ದಾಸಿಯನ್ನು ವಂಚಿಸಬೇಡ ಎಂದು ನುಡಿದಳು.


ಅದಕ್ಕಾತನು - ಬರುವ ವರುಷದ ಇದೇ ಕಾಲದಲ್ಲಿ ನಾನು ತಪ್ಪದೆ ತಿರಿಗಿ ನಿನ್ನ ಬಳಿಗೆ ಬರುತ್ತೇನೆ; ಬಂದಾಗ ನಿನ್ನ ಪತ್ನಿಯಾದ ಸಾರಳಿಗೆ ಮಗನಿರುವನು ಅಂದನು. ಆ ಮಾತು ಹಿಂದೆ ಗುಡಾರದ ಬಾಗಲಲ್ಲಿ ನಿಂತಿದ್ದ ಸಾರಳ ಕಿವಿಗೆ ಬಿತ್ತು.


ನಾನು ಆಕೆಯನ್ನು ಆಶೀರ್ವದಿಸಿ ಆಕೆಯಲ್ಲಿ ನಿನಗೆ ಮಗನನ್ನು ಕೊಡುವೆನು. ನಾನು ಆಕೆಯನ್ನು ಆಶೀರ್ವದಿಸಿದ್ದರಿಂದ ಆಕೆಯಿಂದ ಅನೇಕ ಜನಾಂಗಗಳೂ ಅರಸರೂ ಉತ್ಪತ್ತಿಯಾಗುವರು ಎಂದು ಹೇಳಲು ಅಬ್ರಹಾಮನು ಅಡ್ಡಬಿದ್ದು ನಕ್ಕು -


ದಿನತುಂಬಿದ ಮೇಲೆ ಒಬ್ಬ ಮಗನನ್ನು ಹೆತ್ತಳು. ಯೆಹೋವನನ್ನು ಬೇಡಿ ಪಡಕೊಂಡೆನೆಂದು ಹೇಳಿ ಆ ಮಗನಿಗೆ ಸಮುವೇಲನೆಂದು ಹೆಸರಿಟ್ಟಳು.


ಆದದರಿಂದ ಆಕೆಯು ಬೇಗನೆ ಗಂಡನ ಬಳಿಗೆ ಹೋಗಿ - ಮೊನ್ನೆ ನನಗೆ ಪ್ರತ್ಯಕ್ಷನಾದ ಪುರುಷನು ತಿರಿಗಿ ಬಂದಿದ್ದಾನೆಂದು ತಿಳಿಸಲು


ತರುವಾಯ ಆ ಸ್ತ್ರೀಯು ತನ್ನ ಗಂಡನ ಬಳಿಗೆ ಹೋಗಿ - ಒಬ್ಬ ದೇವಪುರುಷನು ನನ್ನ ಹತ್ತಿರ ಬಂದಿದ್ದನು. ಅವನ ರೂಪವು ದೇವದೂತನ ರೂಪದಂತಿದ್ದು ಭಯಂಕರನಾಗಿದ್ದನು. ನೀನು ಎಲ್ಲಿಂದ ಬಂದಿ ಎಂದು ನಾನು ಅವನನ್ನು ಕೇಳಲಿಲ್ಲ; ಅವನೂ ತನ್ನ ಹೆಸರನ್ನು ತಿಳಿಸಲಿಲ್ಲ.


ಯೆಹೋವನು ಅವನನ್ನು ಚೆನ್ನಾಗಿ ನೋಡಿ - ನಾನು ನಿನ್ನನ್ನು ಕಳುಹಿಸುತ್ತೇನೆ, ಹೋಗು; ಈ ನಿನ್ನ ಬಲದಿಂದ ಇಸ್ರಾಯೇಲ್ಯರನ್ನು ವಿುದ್ಯಾನ್ಯರಿಂದ ಬಿಡಿಸು ಎಂದು ಹೇಳಿದನು.


ಮತ್ತು ಮಾನೋಹನು ಯೆಹೋವನ ದೂತನನ್ನು - ನಾವು ನಿನಗೋಸ್ಕರ ಒಂದು ಹೋತಮರಿಯನ್ನು ಪಕ್ವಮಾಡಿ ತರುವವರೆಗೂ ದಯವಿಟ್ಟು ಇಲ್ಲೇ ನಿಲ್ಲಬೇಕೆಂದು ಬೇಡಿಕೊಳ್ಳಲು


ಯೆಹೋವನಿಗೆ ಅಸಾಧ್ಯವಾದದ್ದುಂಟೋ? ನಾನು ಹೇಳಿದಂತೆಯೇ ಬರುವ ವರುಷದ ಇದೇ ಕಾಲದಲ್ಲಿ ನಾನು ನಿನ್ನ ಬಳಿಗೆ ಬಂದಾಗ ಸಾರಳಿಗೆ ಮಗನಿರುವನು ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು