Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 13:5 - ಕನ್ನಡ ಸತ್ಯವೇದವು J.V. (BSI)

5 ನೀನು ಗರ್ಭವತಿಯಾಗಿ ಹೆರುವ ಮಗನ ತಲೆಯ ಮೇಲೆ ಕ್ಷೌರದ ಕತ್ತಿಯನ್ನು ಉಪಯೋಗಿಸಲೇಬಾರದು; ಅವನು ಹುಟ್ಟಿದಂದಿನಿಂದ ದೇವರಿಗೆ ಪ್ರತಿಷ್ಠಿತನಾಗಿರುವನು; ಇಸ್ರಾಯೇಲ್ಯರನ್ನು ಫಿಲಿಷ್ಟಿಯರ ಕೈಯಿಂದ ಬಿಡಿಸುವದಕ್ಕೆ ಪ್ರಾರಂಭಿಸುವನು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ನೀನು ಗರ್ಭವತಿಯಾಗಿ ಹೆರುವ ಮಗನ ತಲೆಯ ಮೇಲೆ ಕ್ಷೌರದ ಕತ್ತಿಯನ್ನು ಉಪಯೋಗಿಸಲೇಬಾರದು; ಅವನು ಹುಟ್ಟಿದಂದಿನಿಂದ ದೇವರಿಗೆ ಪ್ರತಿಷ್ಠಿತನಾಗಿರುವನು; ಇಸ್ರಾಯೇಲರನ್ನು ಫಿಲಿಷ್ಟಿಯರ ಕೈಯಿಂದ ಬಿಡಿಸಲು ಪ್ರಾರಂಭಿಸುವನು” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ನೀನು ಗರ್ಭವತಿಯಾಗಿ ಹೆರುವ ಮಗನ ತಲೆಯ ಮೇಲೆ ಕ್ಷೌರದ ಕತ್ತಿಯನ್ನು ಉಪಯೋಗಿಸಲೇ ಬಾರದು. ಅವನು ಹುಟ್ಟಿನಿಂದ ದೇವರಿಗೆ ಪ್ರತಿಷ್ಠಿತನಾಗುವನು. ಅವನು ಇಸ್ರಯೇಲರನ್ನು ಫಿಲಿಷ್ಟಿಯರ ಕೈಯಿಂದ ಬಿಡಿಸುವುದಕ್ಕೆ ಪ್ರಾರಂಭಿಸುವನು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಏಕೆಂದರೆ ನೀನು ಗರ್ಭವತಿಯಾಗಿರುವೆ ಮತ್ತು ನಿನಗೊಬ್ಬ ಮಗನು ಹುಟ್ಟಲಿದ್ದಾನೆ. ಅವನು ಹುಟ್ಟಿದಂದಿನಿಂದಲೇ ದೇವರಿಗೆ ಪ್ರತಿಷ್ಠಿತನಾಗಿದ್ದಾನೆ. ಆದ್ದರಿಂದ ಅವನ ಕೂದಲನ್ನು ಕತ್ತರಿಸಕೂಡದು. ಅವನು ಇಸ್ರೇಲರನ್ನು ಫಿಲಿಷ್ಟಿಯರ ಹಿಡಿತದಿಂದ ಬಿಡಿಸುವನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ನೀನು ಗರ್ಭವನ್ನು ಧರಿಸಿ, ಒಬ್ಬ ಮಗನನ್ನು ಹೆರುವೆ; ಅವನ ತಲೆಯ ಮೇಲೆ ಕ್ಷೌರದ ಕತ್ತಿ ಬರಬಾರದು. ಏಕೆಂದರೆ ಗರ್ಭದಿಂದಲೇ ಆ ಹುಡುಗನು ದೇವರಿಗೆ ಪ್ರತಿಷ್ಠಿತನಾದ ನಾಜೀರನಾಗಿರುವನು. ಅವನು ಇಸ್ರಾಯೇಲರನ್ನು ಫಿಲಿಷ್ಟಿಯರ ಕೈಯಿಂದ ಬಿಡಿಸಿ, ರಕ್ಷಿಸಲು ಪ್ರಾರಂಭಿಸುವನು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 13:5
9 ತಿಳಿವುಗಳ ಹೋಲಿಕೆ  

ಅವನು ತನ್ನ ಹರಕೆಯ ದಿನಗಳಲ್ಲೆಲ್ಲಾ ಕ್ಷೌರಮಾಡಿಸಿಕೊಳ್ಳಬಾರದು. ಅವನು ತನ್ನನ್ನು ಯೆಹೋವನಿಗೆ ಪ್ರತಿಷ್ಠಿಸಿಕೊಂಡ ದಿನಗಳು ಮುಗಿಯುವ ತನಕ ತಾನು ಮೀಸಲಾಗಿದ್ದು ತನ್ನ ತಲೆಯ ಕೂದಲನ್ನು ಕತ್ತರಿಸದೆ ಬಿಡಬೇಕು.


ಸೇನಾಧೀಶ್ವರನಾದ ಯೆಹೋವನೇ, ನಿನ್ನ ದಾಸಿಯ ದುಃಖವನ್ನು ಪರಾಂಬರಿಸು; ನನ್ನನ್ನು ತಿರಸ್ಕರಿಸದೆ ಕನಿಕರವಿಟ್ಟು ನನಗೊಬ್ಬ ಮಗನನ್ನು ಕೊಡಬೇಕು; ಅವನು ಜೀವದಿಂದಿರುವ ತನಕ ನಿನ್ನವನಾಗಿಯೇ ಇರುವ ಹಾಗೆ ನಿನಗೆ ಪ್ರತಿಷ್ಠಿಸಿಕೊಡುವೆನು; ಅವನ ತಲೆಯ ಮೇಲೆ ಕ್ಷೌರ ಕತ್ತಿಯನ್ನು ಬರಗೊಡುವದಿಲ್ಲ ಎಂದು ಪ್ರಾರ್ಥಿಸಿ ಹರಕೆಮಾಡಿದಳು.


ಅನಂತರ ದಾವೀದನು ಹೋಗಿ ಫಿಲಿಷ್ಟಿಯರ ಮೇಲೆ ಬಿದ್ದು ಅವರನ್ನು ಸೋಲಿಸಿ ಅವರಿಂದ ಗತ್ ಪಟ್ಟಣವನ್ನೂ ಅದರ ಗ್ರಾಮಗಳನ್ನೂ ತೆಗೆದುಕೊಂಡನು.


ಫಿಲಿಷ್ಟಿಯರು ಬಹಳವಾಗಿ ತಗ್ಗಿಸಲ್ಪಟ್ಟದರಿಂದ ತಿರಿಗಿ ಇಸ್ರಾಯೇಲ್ಯರ ಪ್ರಾಂತದೊಳಗೆ ಬರಲೇ ಇಲ್ಲ. ಸಮುವೇಲನ ಜೀವಮಾನದಲ್ಲೆಲ್ಲಾ ಯೆಹೋವನ ಹಸ್ತವು ಫಿಲಿಷ್ಟಿಯರಿಗೆ ವಿರೋಧವಾಗಿಯೇ ಇತ್ತು.


ಅನಂತರ ದಾವೀದನು ಹೋಗಿ ಫಿಲಿಷ್ಟಿಯರ ಮೇಲೆ ಬಿದ್ದು ಅವರನ್ನು ಸೋಲಿಸಿ ಅವರ ರಾಜಧಾನಿಯನ್ನು ತೆಗೆದುಕೊಂಡು ಆಡಳಿತವನ್ನು ತನ್ನ ಸ್ವಾಧೀನದಲ್ಲಿಟ್ಟುಕೊಂಡನು.


ಅವನು ಕರ್ತನ ದೃಷ್ಟಿಯಲ್ಲಿ ಮಹಾಪುರುಷನಾಗಿರುವನು; ದ್ರಾಕ್ಷಾರಸವನ್ನಾಗಲಿ ಯಾವ ಮದ್ಯವನ್ನಾಗಲಿ ಕುಡಿಯದವನಾಗಿರುವನು; ಅವನು ಹುಟ್ಟಿದಂದಿನಿಂದಲೂ ಪವಿತ್ರಾತ್ಮಭರಿತನಾಗಿರುವನು.


ಮತ್ತು ಅವನು - ಕ್ಷೌರಕತ್ತಿಯು ನನ್ನ ತಲೆಯ ಮೇಲೆ ಬಂದದ್ದಿಲ್ಲ; ನಾನು ಮಾತೃಗರ್ಭ ಬಿಟ್ಟಂದಿನಿಂದಲೇ ದೇವರಿಗೆ ಪ್ರತಿಷ್ಠಿತನಾದವನು. ನನ್ನ ತಲೆಯನ್ನು ಕ್ಷೌರಮಾಡುವದಾದರೆ ನನ್ನ ಶಕ್ತಿಯು ಹೋಗುವದು; ಮತ್ತು ನಾನು ಬಲಹೀನನಾಗಿ ಬೇರೆ ಮನುಷ್ಯನಂತಾಗುವೆನು ಎಂದು ತನ್ನ ಗುಟ್ಟನ್ನೆಲ್ಲಾ ಆಕೆಯ ಮುಂದೆ ಬಿಚ್ಚಿಹೇಳಿದನು.


ನಿಮ್ಮ ಪುತ್ರರಲ್ಲಿ ಪ್ರವಾದಿಗಳನ್ನೂ ನಿಮ್ಮ ಯುವಕರಲ್ಲಿ ಪ್ರತಿಷ್ಠಿತರನ್ನೂ ಸಿದ್ಧಪಡಿಸಿದೆನು. ಇಸ್ರಾಯೇಲ್ಯರೇ, ಇದು ಸತ್ಯವಲ್ಲವೋ ಎಂದು ಯೆಹೋವನು ಅನ್ನುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು