Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 13:7 - ಕನ್ನಡ ಸತ್ಯವೇದವು J.V. (BSI)

7 ಆದರೆ ನನಗೆ - ನೀನು ಗರ್ಭವತಿಯಾಗಿ ಮಗನನ್ನು ಹೆರುವಿ; ಆದದರಿಂದ ನೀನು ದ್ರಾಕ್ಷಾರಸವನ್ನಾಗಲಿ ಬೇರೆ ಯಾವ ಮದ್ಯವನ್ನಾಗಲಿ ಕುಡಿಯದಿರು, ಯಾವ ನಿಷಿದ್ಧಾಹಾರವನ್ನೂ ಮುಟ್ಟಬೇಡ; ಆ ಹುಡುಗನು ಹುಟ್ಟಿದಂದಿನಿಂದ ಸಾಯುವವರೆಗೆ ದೇವರಿಗೆ ಪ್ರತಿಷ್ಠಿತನಾಗಿರುವನು ಎಂದು ಹೇಳಿದನು ಅಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆದರೆ ನನಗೆ, ‘ನೀನು ಗರ್ಭವತಿಯಾಗಿ ಒಬ್ಬ ಮಗನನ್ನು ಹೆರುವಿ; ಆದುದರಿಂದ ನೀನು ದ್ರಾಕ್ಷಾರಸವನ್ನಾಗಲಿ, ಬೇರೆ ಯಾವ ಮದ್ಯವನ್ನಾಗಲಿ ಕುಡಿಯದಿರು, ಯಾವ ನಿಷಿದ್ಧಾಹಾರವನ್ನೂ ಮುಟ್ಟಬೇಡ; ಆ ಹುಡುಗನು ಹುಟ್ಟಿದಂದಿನಿಂದ ಸಾಯುವ ವರೆಗೆ ದೇವರಿಗೆ ಪ್ರತಿಷ್ಠಿತನಾಗಿರುವನು’ ಎಂದು ಹೇಳಿದನು” ಅಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಆದರೆ ಆತ ನನಗೆ, ‘ನೀನು ಗರ್ಭವತಿಯಾಗಿ ಒಬ್ಬ ಮಗನನ್ನು ಹೆರುವೆ; ಆದ್ದರಿಂದ ನೀನು ದ್ರಾಕ್ಷಾರಸವನ್ನಾಗಲಿ, ಬೇರೆ ಯಾವ ಮದ್ಯವನ್ನಾಗಲಿ ಕುಡಿಯದಿರು. ಯಾವ ನಿಷಿದ್ಧಾಹಾರವನ್ನೂ ಮುಟ್ಟಬೇಡ; ಆ ಮಗು ಹುಟ್ಟಿದಂದಿನಿಂದ ಸಾಯುವವರೆಗೆ ಪ್ರತಿಷ್ಠಿತನಾಗಿರುವನು,’ ಎಂದು ಹೇಳಿದನು,” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಆದರೆ ಅವನು ನನಗೆ, ‘ನೀನು ಗರ್ಭವತಿಯಾಗಿರುವೆ; ನಿನಗೊಬ್ಬ ಮಗನು ಹುಟ್ಟುತ್ತಾನೆ. ನೀನು ದ್ರಾಕ್ಷಾರಸವನ್ನಾಗಲಿ ಬೇರೆ ಯಾವ ಮದ್ಯವನ್ನಾಗಲಿ ಕುಡಿಯಬೇಡ. ಯಾವ ನಿಷಿದ್ಧ ಆಹಾರವನ್ನೂ ತಿನ್ನಬೇಡ. ಏಕೆಂದರೆ ಆ ಹುಡುಗನು ಹುಟ್ಟಿದಂದಿನಿಂದ ಸಾಯುವವರೆಗೂ ದೇವರಿಗೆ ಪ್ರತಿಷ್ಠಿತನಾಗಿರುವನು ಎಂದು ಹೇಳಿದನು’” ಅಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಅವನು ನನಗೆ, ‘ನೀನು ಗರ್ಭವತಿಯಾಗಿ ಒಬ್ಬ ಮಗನನ್ನು ಹೆರುವೆ; ಈಗ ನೀನು ದ್ರಾಕ್ಷಾರಸವನ್ನೂ, ಮದ್ಯವನ್ನೂ ಕುಡಿಯದೆ, ಅಶುದ್ಧವಾದ ಒಂದನ್ನಾದರೂ ತಿನ್ನದೆ ಇರು. ಏಕೆಂದರೆ ಆ ಹುಡುಗನು ಹುಟ್ಟಿದಂದಿನಿಂದ ಮರಣಹೊಂದುವವರೆಗೆ ದೇವರಿಗೆ ಪ್ರತಿಷ್ಠಿತನಾಗಿರುವನು ಎಂದು ಹೇಳಿದನು,’ ಎಂದಳು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 13:7
6 ತಿಳಿವುಗಳ ಹೋಲಿಕೆ  

ಆದದರಿಂದ ಜಾಗರೂಕತೆಯಿಂದಿರು; ದ್ರಾಕ್ಷಾರಸವನ್ನಾಗಲಿ ಬೇರೆ ಯಾವ ಮದ್ಯವನ್ನಾಗಲಿ ಕುಡಿಯದಿರು; ಯಾವ ನಿಷಿದ್ಧಪದಾರ್ಥವನ್ನೂ ಊಟಮಾಡದಿರು.


ನೀನು ಇಸ್ರಾಯೇಲ್ಯರಿಗೆ ಹೀಗೆ ಆಜ್ಞಾಪಿಸು - ಯಾವ ಪುರುಷನಾಗಲಿ ಸ್ತ್ರೀಯಾಗಲಿ ನಾಜೀರರ ಹರಕೆಯನ್ನು ಅಂದರೆ ಯೆಹೋವನಿಗೆ ತನ್ನನ್ನು ಪ್ರತಿಷ್ಠಿಸಿಕೊಳ್ಳುವ


ತರುವಾಯ ಆ ಸ್ತ್ರೀಯು ತನ್ನ ಗಂಡನ ಬಳಿಗೆ ಹೋಗಿ - ಒಬ್ಬ ದೇವಪುರುಷನು ನನ್ನ ಹತ್ತಿರ ಬಂದಿದ್ದನು. ಅವನ ರೂಪವು ದೇವದೂತನ ರೂಪದಂತಿದ್ದು ಭಯಂಕರನಾಗಿದ್ದನು. ನೀನು ಎಲ್ಲಿಂದ ಬಂದಿ ಎಂದು ನಾನು ಅವನನ್ನು ಕೇಳಲಿಲ್ಲ; ಅವನೂ ತನ್ನ ಹೆಸರನ್ನು ತಿಳಿಸಲಿಲ್ಲ.


ಮಾನೋಹನು ಇದನ್ನು ಕೇಳಿ ಯೆಹೋವನಿಗೆ - ಸ್ವಾಮೀ, ದಯವಿರಲಿ; ನೀನು ಕಳುಹಿಸಿದ ದೇವಪುರುಷನು ಇನ್ನೊಂದು ಸಾರಿ ನಮ್ಮ ಬಳಿಗೆ ಬಂದು ಹುಟ್ಟಲಿಕ್ಕಿರುವ ಮಗುವಿಗೋಸ್ಕರ ಮಾಡಬೇಕಾದದ್ದನ್ನು ನಮಗೆ ಬೋಧಿಸಲಿ ಎಂದು ಬೇಡಿಕೊಳ್ಳಲು ದೇವರು ಅವನ ಮೊರೆಯನ್ನು ಕೇಳಿದನು;


ಅದಕ್ಕವರು - ನಾವು ದ್ರಾಕ್ಷಾರಸವನ್ನು ಕುಡಿಯುವದೇ ಇಲ್ಲ; ನಮ್ಮ ಪಿತೃವಾದ ರೇಕಾಬನ ಮಗನಾದ ಯೋನಾದಾಬನು ನಮಗೆ - ನೀವಾಗಲಿ ನಿಮ್ಮ ಸಂತಾನದವರಾಗಲಿ ಯುಗಯುಗಾಂತರಕ್ಕೂ ದ್ರಾಕ್ಷಾರಸ ಕುಡಿಯಬಾರದು;


ನಿಮ್ಮ ಪುತ್ರರಲ್ಲಿ ಪ್ರವಾದಿಗಳನ್ನೂ ನಿಮ್ಮ ಯುವಕರಲ್ಲಿ ಪ್ರತಿಷ್ಠಿತರನ್ನೂ ಸಿದ್ಧಪಡಿಸಿದೆನು. ಇಸ್ರಾಯೇಲ್ಯರೇ, ಇದು ಸತ್ಯವಲ್ಲವೋ ಎಂದು ಯೆಹೋವನು ಅನ್ನುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು