Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 13:9 - ಕನ್ನಡ ಸತ್ಯವೇದವು J.V. (BSI)

9 ಆ ಸ್ತ್ರೀಯು ಹೊಲದಲ್ಲಿ ಕೂತಿರುವಾಗ ದೇವದೂತನು ತಿರಿಗಿ ಬಂದನು. ಆಕೆಯ ಗಂಡನಾದ ಮಾನೋಹನು ಅಲ್ಲಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಆ ಸ್ತ್ರೀಯು ಹೊಲದಲ್ಲಿ ಕುಳಿತಿರುವಾಗ ದೇವದೂತನು ಪುನಃ ಬಂದನು. ಆಕೆಯ ಗಂಡನಾದ ಮಾನೋಹನು ಅಲ್ಲಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಆ ಮಹಿಳೆ ಹೊಲದಲ್ಲಿ ಕುಳಿತಿರುವಾಗ ದೇವದೂತನು ತಿರುಗಿ ಬಂದನು. ಆಕೆಯ ಗಂಡ ಮಾನೋಹನು ಅಲ್ಲಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ದೇವರು ಮಾನೋಹನ ಪ್ರಾರ್ಥನೆಯನ್ನು ಕೇಳಿದನು. ದೇವದೂತನು ಮತ್ತೊಮ್ಮೆ ಆ ಸ್ತ್ರೀಯ ಬಳಿಗೆ ಬಂದನು. ಆಗ ಅವಳು ಹೊಲದಲ್ಲಿ ಕುಳಿತಿದ್ದಳು; ಅವಳ ಗಂಡ ಅಲ್ಲಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ದೇವರು ಮಾನೋಹನ ಬೇಡಿಕೆಯನ್ನು ಕೇಳಿದರು. ಆ ಸ್ತ್ರೀಯು ಹೊಲದಲ್ಲಿ ಕುಳಿತಿರುವಾಗ, ದೇವದೂತನು ತಿರುಗಿ ಅವಳ ಬಳಿಗೆ ಬಂದನು. ಆಗ ಅವಳ ಗಂಡನಾದ ಮಾನೋಹನು ಅವಳ ಸಂಗಡ ಇರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 13:9
4 ತಿಳಿವುಗಳ ಹೋಲಿಕೆ  

ಪ್ರಾರ್ಥನೆಯನ್ನು ಕೇಳುವವನೇ, ನರರೆಲ್ಲರು ನಿನ್ನ ಬಳಿಗೆ ಬರುವರು.


ಮಾನೋಹನು ಇದನ್ನು ಕೇಳಿ ಯೆಹೋವನಿಗೆ - ಸ್ವಾಮೀ, ದಯವಿರಲಿ; ನೀನು ಕಳುಹಿಸಿದ ದೇವಪುರುಷನು ಇನ್ನೊಂದು ಸಾರಿ ನಮ್ಮ ಬಳಿಗೆ ಬಂದು ಹುಟ್ಟಲಿಕ್ಕಿರುವ ಮಗುವಿಗೋಸ್ಕರ ಮಾಡಬೇಕಾದದ್ದನ್ನು ನಮಗೆ ಬೋಧಿಸಲಿ ಎಂದು ಬೇಡಿಕೊಳ್ಳಲು ದೇವರು ಅವನ ಮೊರೆಯನ್ನು ಕೇಳಿದನು;


ಆದದರಿಂದ ಆಕೆಯು ಬೇಗನೆ ಗಂಡನ ಬಳಿಗೆ ಹೋಗಿ - ಮೊನ್ನೆ ನನಗೆ ಪ್ರತ್ಯಕ್ಷನಾದ ಪುರುಷನು ತಿರಿಗಿ ಬಂದಿದ್ದಾನೆಂದು ತಿಳಿಸಲು


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು