Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 14:12 - ಕನ್ನಡ ಸತ್ಯವೇದವು J.V. (BSI)

12 ಸಂಸೋನನು ಇವರಿಗೆ - ನಾನು ನಿಮಗೆ ಒಂದು ಒಗಟನ್ನು ಹೇಳುತ್ತೇನೆ; ನೀವು ಔತಣದ ಏಳು ದಿನಗಳಲ್ಲಿಯೇ ಅದನ್ನು ಬಿಚ್ಚಿ ಅರ್ಥವನ್ನು ಹೇಳಿದರೆ ನಿಮಗೆ ಮೂವತ್ತು ದುಪ್ಪಟಿಗಳನ್ನೂ ಮೂವತ್ತು ವಿಶೇಷವಸ್ತ್ರಗಳನ್ನೂ ಕೊಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಸಂಸೋನನು ಇವರಿಗೆ, “ನಾನು ನಿಮಗೆ ಒಂದು ಒಗಟನ್ನು ಹೇಳುತ್ತೇನೆ; ನೀವು ಔತಣದ ಏಳು ದಿನಗಳಲ್ಲಿಯೇ ಅದನ್ನು ಬಿಚ್ಚಿ ಅದರ ಅರ್ಥವನ್ನು ಹೇಳಿದರೆ ನಿಮಗೆ ಮೂವತ್ತು ದುಪ್ಪಟಿಗಳನ್ನೂ ಮೂವತ್ತು ವಿಶೇಷವಸ್ತ್ರಗಳನ್ನೂ ಕೊಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಸಂಸೋನನು ಇವರಿಗೆ, “ನಾನು ನಿಮಗೆ ಒಂದು ಒಗಟನ್ನು ಹೇಳುತ್ತೇನೆ; ನೀವು ಔತಣದ ಏಳು ದಿನಗಳಲ್ಲಿಯೇ ಅದನ್ನು ಬಿಡಿಸಿ ಅದರ ಅರ್ಥವನ್ನು ಹೇಳಿದರೆ ನಿಮಗೆ ಮೂವತ್ತು ದುಪ್ಪಟಿಗಳನ್ನೂ ಮೂವತ್ತು ವಿಶೇಷ ವಸ್ತ್ರಗಳನ್ನೂ ಕೊಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಆಗ ಸಂಸೋನನು ಆ ಮೂವತ್ತು ಜನರಿಗೆ, “ನಾನು ನಿಮಗೊಂದು ಒಗಟನ್ನು ಹೇಳಬಯಸುತ್ತೇನೆ. ಈ ಔತಣವು ಏಳು ದಿನ ಮುಂದುವರಿಯುತ್ತದೆ. ಈ ಅವಧಿಯಲ್ಲಿ ನೀವು ಉತ್ತರವನ್ನು ಹೇಳುವ ಪ್ರಯತ್ನ ಮಾಡಿರಿ. ನೀವು ಈ ಅವಧಿಯಲ್ಲಿ ಒಗಟುಗಳ ಅರ್ಥ ಹೇಳಿದರೆ ನಾನು ನಿಮಗೆ ಮೂವತ್ತು ನಾರುಬಟ್ಟೆಯ ಅಂಗಿಗಳನ್ನು ಮತ್ತು ಮೂವತ್ತು ವಿಶೇಷ ವಸ್ತ್ರಗಳನ್ನು ಕೊಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಅವರಿಗೆ ಸಂಸೋನನು, “ನಾನು ನಿಮಗೆ ಒಂದು ಒಗಟನ್ನು ಹೇಳುವೆನು; ನೀವು ಅದನ್ನು ಔತಣದ ಈ ಏಳು ದಿವಸಗಳಲ್ಲಿ ಗ್ರಹಿಸಿಕೊಂಡು ಹೇಳಿದರೆ, ನಾನು ನಿಮಗೆ ಮೂವತ್ತು ದುಪ್ಪಟಿಗಳನ್ನು, ಮೂವತ್ತು ಜೊತೆ ಬಟ್ಟೆಗಳನ್ನು ಕೊಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 14:12
22 ತಿಳಿವುಗಳ ಹೋಲಿಕೆ  

ನರಪುತ್ರನೇ, ನೀನು ಇಸ್ರಾಯೇಲ್ ವಂಶದವರಿಗೆ ಈ ಸಾಮ್ಯವನ್ನು ಒಗಟಾಗಿ ಹೇಳು -


ಯೆಹೋವನಾಮ ಮಹತ್ತಿನಿಂದ ಸೊಲೊಮೋನನಿಗುಂಟಾದ ಕೀರ್ತಿಯನ್ನು ಕುರಿತು ಶೆಬದ ರಾಣಿಯು ಕೇಳಿ ಅವನನ್ನು ಒಗಟುಗಳಿಂದ ಪರೀಕ್ಷಿಸುವದಕ್ಕೆ ಬಂದಳು.


ಇದಲ್ಲದೆ ಪ್ರತಿಯೊಬ್ಬನಿಗೂ ಶ್ರೇಷ್ಠ ವಸ್ತ್ರಗಳನ್ನೂ ಕೊಟ್ಟನು; ಬೆನ್ಯಾಮೀನನಿಗೋ ಮುನ್ನೂರು ರೂಪಾಯಿಗಳನ್ನೂ ಐದು ಶ್ರೇಷ್ಠ ವಸ್ತ್ರಗಳನ್ನೂ ಕೊಟ್ಟನು.


ಅವನು - ಕ್ಷೇಮ, ಎಫ್ರಾಯೀಮ್ ಪರ್ವತ ಪ್ರದೇಶದಿಂದ ಪ್ರವಾದಿಮಂಡಲಿಯವರಾದ ಇಬ್ಬರು ಯೌವನಸ್ಥರು ಬಂದಿರುತ್ತಾರೆ. ಆದದರಿಂದ ಅವರಿಗೋಸ್ಕರ ಬೇಗನೆ ಒಂದು ತಲಾಂತು ಬೆಳ್ಳಿಯನ್ನೂ ಎರಡು ದುಸ್ತುಬಟ್ಟೆಗಳನ್ನೂ ತೆಗೆದುಕೊಂಡು ಬರಬೇಕೆಂಬದಾಗಿ ನನ್ನ ಯಜಮಾನನು ನನ್ನನ್ನು ನಿನ್ನ ಬಳಿಗೆ ಕಳುಹಿಸಿದನು ಎಂದು ಉತ್ತರಕೊಟ್ಟನು.


ನೀನು ಅಲ್ಲಿಗೆ ಹೋಗಿ ಬಾ; ನಾನು ನಿನ್ನ ಕೈಯಲ್ಲಿ ಇಸ್ರಾಯೇಲ್ಯರ ಅರಸನಿಗೆ ಒಂದು ಪತ್ರವನ್ನು ಕೊಡುತ್ತೇನೆ ಅಂದನು. ನಾಮಾನನು ಹತ್ತು ತಲಾಂತು ಬೆಳ್ಳಿ, ಆರು ಸಾವಿರ ತೊಲೆ ಬಂಗಾರ, ಹತ್ತು ದುಸ್ತು ಬಟ್ಟೆಗಳು ಇವುಗಳನ್ನು ತೆಗೆದುಕೊಂಡು


ಇವು ಗಾದೆ, ಸಾಮ, ಜ್ಞಾನಿಗಳ ನುಡಿ, ಒಗಟು ಇವುಗಳನ್ನು ತಿಳಿಯಲು ಸಾಧನವಾಗಿವೆ.


ನಿಮ್ಮ ಧನವು ನಾಶವಾಗಿದೆ, ನಿಮ್ಮ ಬಟ್ಟೆಗಳಿಗೆ ನುಸಿಹಿಡಿದಿದೆ. ನಿಮ್ಮ ಚಿನ್ನ ಬೆಳ್ಳಿಗಳು ಮಣ್ಣು ಹಿಡಿದವೆ;


ಈಗ ಕಂಚಿನ ದರ್ಪಣದಲ್ಲಿ ಕಾಣಿಸುವಂತೆ [ದೇವರ ಮುಖವು] ನಮಗೆ ಮೊಬ್ಬಾಗಿ ಕಾಣಿಸುತ್ತದೆ; ಆಗ ಮುಖಾಮುಖಿಯಾಗಿ ಆತನನ್ನು ನೋಡುವೆವು. ಈಗ ಸ್ವಲ್ಪ ಮಾತ್ರ ನನಗೆ ತಿಳಿದದೆ; ಆಗ ದೇವರು ನನ್ನನ್ನು ಸಂಪೂರ್ಣವಾಗಿ ತಿಳುಕೊಂಡಂತೆ ನಾನು ಸಂಪೂರ್ಣವಾಗಿ ತಿಳುಕೊಳ್ಳುವೆನು.


ಅದಕ್ಕೆ ಶಿಷ್ಯರು - ನೀನು ಹೇಳುವ ಸಂಗತಿಯನ್ನು ಈಗ ಗೂಢಾರ್ಥವಾಗಿ ಹೇಳದೆ ಸ್ಪಷ್ಟವಾಗಿ ಮಾತಾಡುತ್ತೀಯಲ್ಲಾ;


ಊಟಕ್ಕೆ ಕರಿಸಿಕೊಂಡವರು ಪಂಙ್ತಿಯ ಮೊದಲನೆಯ ಸ್ಥಾನವನ್ನು ಆರಿಸಿಕೊಳ್ಳುವದನ್ನು ನೋಡಿ ಯೇಸು ಒಂದು ಸಾಮ್ಯವನ್ನು ಹೇಳಿದನು. ಏನಂದರೆ -


ಆತನ ಬಟ್ಟೆಗಳನ್ನು ತೆಗೆದುಹಾಕಿ ಕೆಂಪು ಒಲ್ಲಿಯನ್ನು ಹೊದಿಸಿ


ಯೇಸು ಈ ಮಾತುಗಳನ್ನೆಲ್ಲಾ ಜನರ ಗುಂಪುಗಳಿಗೆ ಸಾಮ್ಯರೂಪವಾಗಿ ಹೇಳಿದನು; ಸಾಮ್ಯವಿಲ್ಲದೆ ಒಂದನ್ನೂ ಹೇಳಲಿಲ್ಲ.


ನಾನು ಅವರ ಸಂಗಡ ಸಾಮ್ಯರೂಪವಾಗಿ ಮಾತಾಡುವದಕ್ಕೆ ಕಾರಣವೇನಂದರೆ ಅವರಿಗೆ ಕಣ್ಣಿದ್ದರೂ ನೋಡುವದಿಲ್ಲ, ಕಿವಿಯಿದ್ದರೂ ಕೇಳುವದಿಲ್ಲ ಮತ್ತು ತಿಳುಕೊಳ್ಳುವದಿಲ್ಲ.


ಭೂಲೋಕದಲ್ಲಿ ಗಂಟುಮಾಡಿ ಇಟ್ಟುಕೊಳ್ಳಬೇಡಿರಿ; ಇಲ್ಲಿ ಅಂತೂ ಅದು ನುಸಿಹಿಡಿದು ಕಿಲುಬುಹತ್ತಿ ಕೆಟ್ಟುಹೋಗುವದು; ಇಲ್ಲಿ ಕಳ್ಳರು ಕನ್ನಾಕೊರೆದು ಕದಿಯುವರು.


ಆಗ ನಾನು - ಅಯ್ಯೋ, ಕರ್ತನಾದ ಯೆಹೋವನೇ, ಇವನು ಒಗಟುಗಾರನಲ್ಲವೆ ಎಂದು ಈ ಜನರು ನನ್ನ ವಿಷಯವಾಗಿ ಅಂದುಕೊಳ್ಳುತ್ತಾರೆ ಎಂಬದಾಗಿ ಅರಿಕೆಮಾಡಿದೆನು.


ನಾನು ಧರ್ಮರಹಸ್ಯವನ್ನು ಕಿವಿಗೊಟ್ಟು ಕೇಳಿ ಕಿನ್ನರಿಯನ್ನು ಬಾರಿಸುತ್ತಾ ಅದರ ಗೂಡಾರ್ಥವನ್ನು ಪ್ರಕಟಿಸುವೆನು.


ಈ ಪ್ರಕಾರ ಸೊಲೊಮೋನನೂ ಹಮಾತಿನ ದಾರಿಯಿಂದ ಐಗುಪ್ತದ ಹಳ್ಳದವರೆಗಿರುವ ಪ್ರಾಂತಗಳಿಂದ ಮಹಾಸಮೂಹವಾಗಿ ಕೂಡಿಬಂದಿದ್ದ ಎಲ್ಲಾ ಇಸ್ರಾಯೇಲ್ಯರೂ ಅದೇ ಕಾಲದಲ್ಲಿ ಏಳು ದಿನಗಳವರೆಗೂ [ಪರ್ಣಶಾಲೆಗಳ] ಜಾತ್ರೆ ನಡಿಸಿದರು.


ಅವರು ಅವನನ್ನು ನೋಡಿದಾಗ ತಮ್ಮಲ್ಲಿಂದ ಮೂವತ್ತು ಮಂದಿಯನ್ನು ಆರಿಸಿ ಅವನ ಜೊತೆಯಲ್ಲಿರಿಸಿದರು.


ನಿಮ್ಮಿಂದ ಆಗದೆ ಹೋದರೆ ನೀವು ನನಗೆ ಮೂವತ್ತು ದುಪ್ಪಟಿಗಳನ್ನೂ ಮೂವತ್ತು ವಿಶೇಷವಸ್ತ್ರಗಳನ್ನೂ ಕೊಡಬೇಕು ಅನ್ನಲು ಅವರು ಅವನಿಗೆ - ನಿನ್ನ ಒಗಟನ್ನು ಹೇಳು, ಕೇಳೋಣ ಎಂದು ಹೇಳಿದರು.


ಹಚ್ಚಡಗಳನ್ನು ನೆಯ್ದು ಮಾರಾಟಮಾಡುವಳು, ನಡುಕಟ್ಟುಗಳನ್ನು ವರ್ತಕನಿಗೆ ಒದಗಿಸುವಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು