ನ್ಯಾಯಸ್ಥಾಪಕರು 14:3 - ಕನ್ನಡ ಸತ್ಯವೇದವು J.V. (BSI)3 ಆಗ ಅವರು ಅವನಿಗೆ - ಸುನ್ನತಿಯಿಲ್ಲದ ಫಿಲಿಷ್ಟಿಯರ ಹೆಣ್ಣನ್ನು ವರಿಸಬೇಕೆಂದಿರುತ್ತೀ; ನಿನ್ನ ಬಂಧುಗಳಲ್ಲಿಯೂ ನಮ್ಮ ಎಲ್ಲಾ ಜನರಲ್ಲಿಯೂ ನಿನಗೆ ಹೆಣ್ಣು ಸಿಕ್ಕುವದಿಲ್ಲವೋ ಎಂದು ಕೇಳಲು ಅವನು - ನನಗೋಸ್ಕರ ಆಕೆಯನ್ನೇ ತೆಗೆದುಕೊಳ್ಳಬೇಕು; ಆಕೆಯನ್ನೇ ಮೆಚ್ಚಿಕೊಂಡಿದ್ದೇನೆ ಅಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಆಗ ಅವರು ಅವನಿಗೆ, “ಸುನ್ನತಿಯಿಲ್ಲದ ಫಿಲಿಷ್ಟಿಯರ ಹೆಣ್ಣನ್ನು ಮದುವೆ ಮಾಡಿಕೊಳ್ಳಬೇಕೆಂದಿರುತ್ತೀಯಲ್ಲಾ; ನಿನ್ನ ಬಂಧುಗಳಲ್ಲಿಯೂ, ನಮ್ಮ ಎಲ್ಲಾ ಜನರಲ್ಲಿಯೂ ನಿನಗೆ ಹೆಣ್ಣು ಸಿಕ್ಕುವುದಿಲ್ಲವೋ?” ಎಂದು ಕೇಳಲು ಅವನು, “ನನಗೋಸ್ಕರ ಆಕೆಯನ್ನೇ ತೆಗೆದುಕೊಳ್ಳಬೇಕು; ಆಕೆಯನ್ನೇ ಮೆಚ್ಚಿಕೊಂಡಿದ್ದೇನೆ” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಆಗ ಅವರು ಅವನಿಗೆ, “ಸುನ್ನತಿಯಿಲ್ಲದ ಫಿಲಿಷ್ಟಿಯರ ಹೆಣ್ಣನ್ನು ವರಿಸಬೇಕೆಂದಿರುವೆಯಾ? ನಿನ್ನ ಬಂಧುಗಳಲ್ಲಿ ಅದೂ ನಮ್ಮ ಎಲ್ಲಾ ಜನರಲ್ಲಿ ನಿನಗೆ ಹೆಣ್ಣು ಸಿಕ್ಕುವುದಿಲ್ಲವೇ?” ಎಂದು ಪ್ರತಿಭಟಿಸಿದರು. ಅವನು, “ನನಗಾಗಿ ಆಕೆಯನ್ನೇ ತನ್ನಿ. ಆಕೆಯನ್ನೇ ಮೆಚ್ಚಿಕೊಂಡಿದ್ದೇನೆ,” ಎಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಅವನ ತಂದೆತಾಯಿಗಳು, “ಇಸ್ರೇಲರಲ್ಲಿಯೇ ಒಬ್ಬ ಸ್ತ್ರೀ ಇದ್ದಾಳೆ. ನೀನು ಅವಳನ್ನು ಮದುವೆಯಾಗು. ನೀನು ಫಿಲಿಷ್ಟಯರ ಹೆಣ್ಣನ್ನು ಮದುವೆಯಾಗುವುದೇಕೆ? ಅವರು ಸುನ್ನತಿಯನ್ನು ಮಾಡಿಸಿಕೊಂಡವರಲ್ಲ” ಎಂದರು. ಆದರೆ ಸಂಸೋನನು, “ನನಗೆ ಆಕೆಯೊಡನೇ ಮದುವೆಮಾಡಿಸಿ. ನಾನು ಆಕೆಯನ್ನೇ ಮೆಚ್ಚಿಕೊಂಡಿದ್ದೇನೆ” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಆಗ ಅವನ ತಂದೆಯೂ, ತಾಯಿಯೂ ಅವನಿಗೆ, “ನಿನಗೆ ಸುನ್ನತಿಯಾಗದ ಫಿಲಿಷ್ಟಿಯರಲ್ಲಿ ಹೆಂಡತಿಯನ್ನು ತೆಗೆದುಕೊಳ್ಳುವುದಕ್ಕೆ ನಿನ್ನ ಸಹೋದರರ ಪುತ್ರಿಯರಲ್ಲಿಯೂ, ನಮ್ಮ ಎಲ್ಲಾ ಜನರಲ್ಲಿಯೂ ಸ್ತ್ರೀ ಇಲ್ಲವೋ?” ಎಂದರು. ಆದರೆ ಸಂಸೋನನು ತನ್ನ ತಂದೆಗೆ, “ಅವಳನ್ನು ನನಗೆ ತೆಗೆದುಕೋ. ಏಕೆಂದರೆ ಅವಳು ನನ್ನ ಮನಸ್ಸಿಗೆ ಒಪ್ಪಿದ್ದಾಳೆ,” ಎಂದನು. ಅಧ್ಯಾಯವನ್ನು ನೋಡಿ |