ನ್ಯಾಯಸ್ಥಾಪಕರು 14:4 - ಕನ್ನಡ ಸತ್ಯವೇದವು J.V. (BSI)4 ಫಿಲಿಷ್ಟಿಯರ ಕೇಡಿಗೆ ಕಾರಣ ಹುಡುಕುತ್ತಿದ್ದ ಯೆಹೋವನ ಪ್ರೇರಣೆಯಿಂದಲೇ ಈ ಸಂಗತಿ ಉಂಟಾಯಿತೆಂಬದು ಅವನ ತಂದೆತಾಯಿಗಳಿಗೆ ಗೊತ್ತಿದ್ದಿಲ್ಲ. ಆ ಕಾಲದಲ್ಲಿ ಫಿಲಿಷ್ಟಿಯರು ಇಸ್ರಾಯೇಲ್ಯರ ಮೇಲೆ ದೊರೆತನ ನಡಿಸುತ್ತಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಫಿಲಿಷ್ಟಿಯರ ಕೇಡಿಗೆ ಕಾರಣ ಹುಡುಕುತ್ತಿದ್ದ ಯೆಹೋವನ ಪ್ರೇರಣೆಯಿಂದಲೇ ಈ ಸಂಗತಿ ಉಂಟಾಯಿತೆಂಬುದು ಅವನ ತಂದೆತಾಯಿಗಳಿಗೆ ಗೊತ್ತಿರಲಿಲ್ಲ. ಆ ಕಾಲದಲ್ಲಿ ಫಿಲಿಷ್ಟಿಯರು ಇಸ್ರಾಯೇಲರ ಮೇಲೆ ದೊರೆತನ ನಡೆಸುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಫಿಲಿಷ್ಟಿಯರ ದಂಡನೆಗೆ ಕಾರಣವನ್ನು ಹುಡುಕುತ್ತಿದ್ದ ಸರ್ವೇಶ್ವರನ ಪ್ರೇರಣೆಯಿಂದಲೇ ಇದೆಲ್ಲ ಸಂಭವಿಸಿತೆಂದು ಅವನ ತಂದೆತಾಯಿಗಳಿಗೆ ಗೊತ್ತಾಗಲಿಲ್ಲ. ಆ ಕಾಲದಲ್ಲಿ ಫಿಲಿಷ್ಟಿಯರು ಇಸ್ರಯೇಲರ ಮೇಲೆ ದೊರೆತನ ನಡೆಸುತ್ತಿದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಇದು ಯೆಹೋವನ ಚಿತ್ತವೆಂಬುದು ಸಂಸೋನನ ತಂದೆತಾಯಿಗಳಿಗೆ ತಿಳಿದಿರಲಿಲ್ಲ. ಫಿಲಿಷ್ಟಿಯರಿಗೆ ಕೇಡುಮಾಡಲು ಯೆಹೋವನು ತಕ್ಕಮಾರ್ಗವನ್ನು ಹುಡುಕುತ್ತಿದ್ದನು. ಆ ಸಮಯದಲ್ಲಿ ಫಿಲಿಷ್ಟಿಯರು ಇಸ್ರೇಲರ ಮೇಲೆ ಆಳ್ವಿಕೆ ಮಾಡುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಇದು ಯೆಹೋವ ದೇವರಿಂದ ಉಂಟಾಯಿತೆಂದು ಅವನ ತಂದೆತಾಯಂದಿರು ಅರಿಯದೆ ಇದ್ದರು. ಏಕೆಂದರೆ ಫಿಲಿಷ್ಟಿಯರಿಗೆ ವಿರೋಧವಾಗಿ ಅವನು ಕಾರಣವನ್ನು ಹುಡುಕಿದನು. ಆ ಕಾಲದಲ್ಲಿ ಫಿಲಿಷ್ಟಿಯರು ಇಸ್ರಾಯೇಲರನ್ನು ಆಳುತ್ತಿದ್ದರು. ಅಧ್ಯಾಯವನ್ನು ನೋಡಿ |